Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಾಸ್ತ್ರೀಯ ಭಾಷಾ ಅಧ್ಯಯನ ಕೇಂದ್ರ: ಪೂರ್ಣ...

ಶಾಸ್ತ್ರೀಯ ಭಾಷಾ ಅಧ್ಯಯನ ಕೇಂದ್ರ: ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭಕ್ಕೆ ಕೇಂದ್ರದ ಸಮ್ಮತಿ; ಸಚಿವ ಸಿ.ಟಿ.ರವಿ

ವಾರ್ತಾಭಾರತಿವಾರ್ತಾಭಾರತಿ19 Aug 2020 10:59 PM IST
share
ಶಾಸ್ತ್ರೀಯ ಭಾಷಾ ಅಧ್ಯಯನ ಕೇಂದ್ರ: ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭಕ್ಕೆ ಕೇಂದ್ರದ ಸಮ್ಮತಿ; ಸಚಿವ ಸಿ.ಟಿ.ರವಿ

ಹೊಸದಿಲ್ಲಿ, ಆ. 19: ಬಹುದಿನಗಳ ಬೇಡಿಕೆಯಾದ ಕನ್ನಡ ಭಾಷಾ ಶಾಸ್ತ್ರೀಯ ಅಧ್ಯಯನ ಕೇಂದ್ರ ಶೀಘ್ರದಲ್ಲೇ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡಲು ಅನುಮತಿ ನೀಡಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಡಾ.ರಮೇಶ್ ಪೊಕ್ರಿಯಾಲ್ ಆಶ್ವಾಸನೆ ನೀಡಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ.

ಬುಧವಾರ ದಿಲ್ಲಿಯಲ್ಲಿ ಕೇಂದ್ರ ಸಚಿವ ಡಾ.ರಮೇಶ್ ಪೊಕ್ರಿಯಾಲ್ ಅವರನ್ನು ಭೇಟಿಯಾಗಿ ಕರ್ನಾಟಕದಲ್ಲಿ ಶಾಶ್ವತ ಕನ್ನಡ ಅಧ್ಯಯನ ಪೀಠದ ಕಟ್ಟಡ ಪ್ರಾರಂಭಿಸಲು ಅನುಮತಿ ನೀಡಬೇಕೆಂದು ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಪೊಕ್ರಿಯಾಲ್ ಅವರು, ಕನ್ನಡಿಗರ ಬಹುದಿನಗಳ ಬೇಡಿಕೆಯಂತೆ ಆದಷ್ಟು ಶೀಘ್ರದಲ್ಲಿ ಕಟ್ಟಡ ಪ್ರಾರಂಭಿಸಲು ಕೇಂದ್ರದಿಂದ ಅನುಮತಿ ನೀಡಲಾಗುವುದು. ಇನ್ನು ಯಾವುದೇ ಕಾರಣಕ್ಕೂ ವಿಳಂಬವಾಗುವುದಿಲ್ಲ ಎಂಬ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ರಾಜ್ಯ ಸರಕಾರ ಸಲ್ಲಿಸಿರುವ ವಿಸ್ತೃತ ಯೋಜನಾ ವರದಿ ಇಲಾಖೆ ಕೈ ಸೇರಿದೆ. ಸದ್ಯದಲ್ಲೇ ಸಚಿವ ಸಂಪುಟ ಸಭೆಯ ಅನುಮೋದನೆ ಪಡೆಯಲಾಗುವುದು. ಬಳಿಕ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನ ಬಿಡುಗಡೆ, ಮೂಲಭೂತ ಸೌಕರ್ಯ ಸೇರಿದಂತೆ ಎಲ್ಲ ರೀತಿಯ ನೆರವು ಕೇಂದ್ರ ಸರಕಾರದಿಂದ ಸಿಗಲಿದೆ ಎಂದು ಅಭಯ ನೀಡಿದ್ದಾರೆ ಎಂದು ಸಚಿವ ಸಿ.ಟಿ.ರವಿ ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.
ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಕನ್ನಡ ಶಾಸ್ತ್ರೀಯ ಅಧ್ಯಯನ ಪೀಠ ಪ್ರಾರಂಭಿಸಲು ಸರಕಾರ ಉತ್ಸುಕತೆ ತೋರಿರುವುದು ನನ್ನ ಗಮನಕ್ಕೆ ಬಂದಿದೆ. ವಿವಿಯು ಜಾಗವನ್ನು ಹಸ್ತಾಂತರ ಮಾಡಲು ತೀರ್ಮಾನಿಸಿರುವುದು ಆಶಾದಾಯಕ ಬೆಳವಣಿಗೆ. ಕೇಂದ್ರದಿಂದ ವಿಳಂಬವಾಗದಂತೆ ಎಷ್ಟು ಸಾಧ್ಯವೋ ಅಷ್ಟು ಶೀಘ್ರವಾಗಿ ಅನುಮತಿ ನೀಡುವುದು ಎಂದು ಅವರು ಹೇಳಿದ್ದಾರೆ ಎಂದರು.

ಕನ್ನಡ ಶಾಸ್ತ್ರೀಯ ಅಧ್ಯಯನ ಕೇಂದ್ರವು ಮೈಸೂರಿನಲ್ಲಿರುವ ಭಾರತೀಯ ಭಾಷಾ ಸಂಶೋಧನಾ ಸಂಸ್ಥೆಯ ಕಟ್ಟಡದಲ್ಲಿ ತಾತ್ಕಾಲಿಕವಾಗಿ ಕಾರ್ಯ ನಿರ್ವಹಿಸುತ್ತಿದೆ. ಪೂರ್ಣ ಪ್ರಮಾಣದಲ್ಲಿ ಕಾರ್ಯ ಚಟುವಟಿಕೆಗಳು ನಡೆಯುವಂತೆ ಶಾಶ್ವತ ಕಟ್ಟಡ ನಿರ್ಮಾಣ ಮಾಡಬೇಕೆಂಬುದು ಕನ್ನಡಿಗರ ಬಹುದಿನಗಳ ಬೇಡಿಕೆಯಾಗಿದೆ. ಈ ಕನಸನ್ನು ನನಸು ಮಾಡಲು ಸರಕಾರ ಬದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆಂದು ರವಿ ತಿಳಿಸಿದರು.

ಕೇಂದ್ರ ಸರಕಾರದ ಬಹು ಉದ್ದೇಶಿತ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲಾಗಿದೆ. ಇದರಿಂದಾಗಿ ದೇಶದ ಪ್ರತಿಯೊಂದು ಪ್ರಾದೇಶಿಕ ಭಾಷೆಗಳಿಗೆ ಹೆಚ್ಚಿನ ಮನ್ನಣೆ ಸಿಗಲಿದೆ. ನಾಡು, ನುಡಿ, ಇತಿಹಾಸ, ಪರಂಪರೆಗಳು, ಸಂಪ್ರಾದಾಯ ಸೇರಿದಂತೆ ಸ್ಥಳೀಯ ಸೊಗಡಿಗೆ ಎಲ್ಲಿಯೂ ಧಕ್ಕೆಯಾಗದಂತೆ ಕ್ರಮಕೈಗೊಳ್ಳಲಾಗಿದೆ ಎಂದಿರುವ ಅವರು, ಹೊಸ ಶಿಕ್ಷಣ ನೀತಿಯಿಂದ ಸರ್ವರಿಗೂ ಗುಣಮಟ್ಟದ ಶಿಕ್ಷಣ ಲಭ್ಯವಾಗಬೇಕೆನ್ನುವುದು ಕೇಂದ್ರ ಸರಕಾರದ ಆಕಾಂಕ್ಷೆಯಾಗಿದೆ ಎಂದು ಹೇಳಿದ್ದಾರೆಂದು ರವಿ ತಿಳಿಸಿದರು.

ಭಾರತವನ್ನು ಜಾಗತಿಕ ಜ್ಞಾನ ಶಕ್ತಿಯನ್ನಾಗಿಸುವುದು ಹೊಸ ಶಿಕ್ಷಣ ನೀತಿಯ ಪ್ರಮುಖ ಆಶಯವಾಗಿದೆ. ಐದು ವರ್ಷದ ಒಳಗಿನ ಮಕ್ಕಳಿಗೆ 'ಬಾಲವಾಟಿಕಾ' ಆರಂಭಿಸುವುದು, ಹಂತ-ಹಂತವಾಗಿ ಕಲಿಕೆ ಆಗಲೆಂಬ ಕಾರಣಕ್ಕೆ 10+2 ಪದ್ಧತಿಯ ಬದಲಿಗೆ 5+3+3+4 ಪದ್ಧತಿ ಪರಿಚಯ ಮಾಡಿಕೊಡಲಾಗುತ್ತಿದೆ. ಆರನೆ ತರಗತಿ ನಂತರ ವೃತ್ತಿಪರ ಶಿಕ್ಷಣ ಕಲಿಕೆ ಪ್ರಾರಂಭಗೊಳಿಸುವ ಪ್ರಮುಖ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಹೊಸ ಶಿಕ್ಷಣ ನೀತಿಯಲ್ಲಿ ಪರೀಕ್ಷಾ ವಿಧಾನದಲ್ಲಿ ಸುಧಾರಣೆಗೆ ಮಹತ್ವ ಕೊಡಲಾಗಿದೆ. ಬಹುವಿಧದ ಪರೀಕ್ಷೆಗೆ ತೀರ್ಮಾನ ಮಾಡಲಾಗಿದೆ.

ವಾರ್ಷಿಕ, ಅರ್ಧವಾರ್ಷಿಕ, ಮಾಡ್ಯುಲ್ ಮಾದರಿ ಪರೀಕ್ಷೆಗಳು ನಡೆಯಲಿವೆ. ಮುಖ್ಯಪರೀಕ್ಷೆಯ ಪ್ರಾಮುಖ್ಯತೆ ಕಡಿಮೆ ಮಾಡುವ ಚಿಂತನೆಯಿದೆ. ವರ್ಷದಲ್ಲಿ ಎರಡು ಬಾರಿ ಮುಖ್ಯ ಪರೀಕ್ಷೆ ಮಾಡಲಾಗುವುದು. ಸಮಗ್ರ ಫಲಿತಾಂಶ ವ್ಯವಸ್ಥೆ ಜಾರಿಗೆ ತರಲಾಗುತ್ತದೆ. ಹೀಗಾಗಿ ಮೂರು ಹಂತದಲ್ಲಿ ವಿದ್ಯಾರ್ಥಿಯ ಸಾಮಥ್ರ್ಯ ಅಳೆಯುವ ರಿಪೋರ್ಟ್ ಕಾರ್ಡ್ ಕೊಡಲಾಗುವುದು. ಜೊತೆಗೆ ಉನ್ನತ ಶಿಕ್ಷಣ ಪೂರ್ತಿಯಾಗುವವರೆಗೆ ಒಂದೇ ಮಾದರಿಯ ರಿಪೋರ್ಟ್ ನೀಡುವ ಬಗ್ಗೆ ಹೊಸ ಶಿಕ್ಷಣ ನೀತಿಯಲ್ಲಿದೆ. ಕನ್ನಡ ಭಾಷಾ ಬೆಳವಣಿಗೆಗೆ ಇದರಂದ ಸಾಕಷ್ಟು ಅನುಕೂಲವಾಗಲಿದ್ದು, ಕರ್ನಾಟಕ ಇದರ ಸದುಪಯೋಗ ಪಡೆದುಕೊಳ್ಳಲಿ ಎಂದು ಅವರು ಆಶಿಸಿದರು.     

ಇದೇ ವೇಳೆ ಸಚಿವ ಸಿ.ಟಿ.ರವಿ, ಈವರೆಗೂ ಇಲಾಖೆವತಿಯಿಂದ ಕೈಗೊಂಡಿರುವ ಕಾರ್ಯ ಚಟುವಟಿಕೆಯ ವಿಸ್ತೃತ ವರದಿಯನ್ನು ಕೇಂದ್ರ ಸಚಿವರಿಗೆ ಹಸ್ತಾಂತರಿಸಿದರು. ತಮಿಳುನಾಡಿನಲ್ಲಿ ಪೂರ್ಣ ಪ್ರಮಾಣದ ಅಧ್ಯಯನ ಪೀಠ ಆರಂಭವಾಗಿ ಕಾರ್ಯ ಚಟುವಟಿಕೆಗಳು ನಡೆಯುತ್ತಿರುವುದರಿಂದ ಅನೇಕ ಅವಕಾಶಗಳು ಲಭಿಸಿವೆ. ಇದೇ ರೀತಿ ಕರ್ನಾಟಕ ರಾಜ್ಯಕ್ಕೂ ಇದರ ಪ್ರಯೋಜನ ಸಿಗಬೇಕೆಂದು ಅವರು ಅಭಿಪ್ರಾಯಪಟ್ಟರು.

ಕನ್ನಡ ಭಾಷೆಗೆ ಕೇಂದ್ರೀಯ ಸ್ಥಾನಮಾನ ಸಿಗಬೇಕೆಂದು ಕರ್ನಾಟಕ ಜನತೆಯ ಒತ್ತಾಸೆಯಾಗಿದೆ. ಪ್ರಾಚೀನ ಭಾರತೀಯ ಪರಂಪರೆಯನ್ನು ಕಾಪಾಡಿ ಪೋಷಿಸುವುದರಲ್ಲಿ ಕನ್ನಡ ಭಾಷೆಯ ಬೆಳವಣಿಗೆ ಯಾವುದಕ್ಕೂ ಕಡಿಮೆ ಇಲ್ಲ. ಆದಷ್ಟು ಶೀಘ್ರ ಕೇಂದ್ರ ಸರಕಾರ ಇದಕ್ಕೆ ಅನುಮೋದನೆ ನೀಡಿದರೆ ಬಹುದಿನಗಳ ಕನಸು ಈಡೇರುತ್ತದೆ ಎಂದು ಮನವರಿಕೆ ಮಾಡಿದ್ದಾರೆ. ಇದೇ ವೇಳೆ ಮೂರು ಸಮಿತಿಗೆ ಮುಖ್ಯಸ್ಥರು ಹಾಗೂ ಸದಸ್ಯರನ್ನು ನೇಮಕ ಮಾಡುವಂತೆ ಸಚಿವ ಸಿ.ಟಿ.ರವಿ ಮನವಿ ಮಾಡಿದರು. ಈ ವೇಳೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X