Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜೀವರಾಜ್ ವಿರುದ್ಧ ಮಾನನಷ್ಟ ಮೊಕದ್ದಮೆ...

ಜೀವರಾಜ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇವೆ: ಅಫ್ಸರ್ ಕೊಡ್ಲಿಪೇಟೆ

ವಾರ್ತಾಭಾರತಿವಾರ್ತಾಭಾರತಿ19 Aug 2020 11:45 PM IST
share
ಜೀವರಾಜ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇವೆ: ಅಫ್ಸರ್ ಕೊಡ್ಲಿಪೇಟೆ

ಚಿಕ್ಕಮಗಳೂರು, ಆ.19: ಶೃಂಗೇರಿ ಪಟ್ಟಣದಲ್ಲಿ ಶಂಕರಾಚಾರ್ಯ ಪುತ್ಥಳಿಯ ಮಂಟಪದ ಮೇಲೆ ಬ್ಯಾನರ್ ಹಾಕಿದ್ದ ಪ್ರಕರಣ ಸಂಬಂಧ ಬಿಜೆಪಿಯ ಪ್ರಭಾವಿ ಮುಖಂಡ, ಮಾಜಿ ಸಚಿವ ಡಿ.ಎನ್.ಜೀವರಾಜ್ ಎಸ್‍ಡಿಪಿಐ ಪಕ್ಷದ ಮೇಲೆ ಮಾನಹಾನಿಕರವಾದ ಆರೋಪ ಮಾಡಿದ್ದು, ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುವುದು. ಪ್ರಕರಣದ ಹಿಂದೆ ಜೀವರಾಜ್ ಕೈವಾಡ ಇರುವ ಶಂಕೆ ವ್ಯಕ್ತವಾಗುತ್ತಿದ್ದು, ಪೊಲೀಸ್ ಇಲಾಖೆ ಅವರ ವಿರುದ್ಧ ಎಫ್‍ಐಆರ್ ದಾಖಲಿಸಿ ಬಂಧನಕ್ಕೊಳಪಡಿಸಿ ಸಮಗ್ರ ತನಿಖೆಕೈಗೊಳ್ಳಬೇಕೆಂದು ಪಕ್ಷದ ರಾಜ್ಯ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಆಗ್ರಹಿಸಿದ್ದಾರೆ.

ಬುಧವಾರ ನಗರದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೃಂಗೇರಿ ಪಟ್ಟಣದಲ್ಲಿ ಶಂಕರಾಚಾರ್ಯ ಪುತ್ಥಳಿ ಮೇಲೆ ಬ್ಯಾನರ್ ಹಾಕಿದ್ದ ಪ್ರಕರಣದಲ್ಲಿ ಬಿಜೆಪಿ ಹಾಗೂ ಸಂಘಪರಿವಾರದವರ ಸಂಚು ಇರುವ ಬಗ್ಗೆ ಸಾರ್ವಜನಿಕವಾಗಿ ಅನುಮಾನ ವ್ಯಕ್ತವಾಗುತ್ತಿದ್ದು, ಘಟನೆ ಸಂಬಂಧ ಇತ್ತೀಚೆಗೆ ಶೃಂಗೇರಿ ಪಟ್ಟಣದಲ್ಲಿ ಮಾಜಿ ಸಚಿವ ಜೀವರಾಜ್ ನೇತೃತ್ವದಲ್ಲಿ ಸಂಘಪರಿವಾರದವರು ನಡೆಸಿದ ಪ್ರತಿಭಟನೆಯಲ್ಲಿ ಪುತ್ಥಳಿ ಮೇಲೆ ಬ್ಯಾನರ್ ಹಾಕಿರುವುದು ಎಸ್‍ಡಿಪಿಐ ಪಕ್ಷದ ಕಾರ್ಯಕರ್ತರೆಂದು ಜೀವರಾಜ್ ಆರೋಪಿಸಿದ್ದಲ್ಲದೇ ಪೊಲೀಸರಿಗೆ ತನಿಖೆಗೂ ಅವಕಾಶ ನೀಡದೇ ಘಟನೆಗೆ ಸಂಬಂಧವಿಲ್ಲದ ಅಮಾಯಕರ ವಿರುದ್ಧ ದೂರು ನೀಡಿ, ಬಂಧನಕ್ಕೊಳಗಾಗುವಂತೆ ಮಾಡಿದ್ದಾರೆ. ತಾವು ಹೇಳಿದವರನ್ನು ಬಂಧಿಸದಿದ್ದಲ್ಲಿ ಪಟ್ಟಣದಲ್ಲಾಗುವ ಅನಾಹುತಗಳಿಗೆ ಪೊಲೀಸರೇ ಕಾರಣ ಎಂದು ಬೆದರಿಕೆಯನ್ನೂ ಹಾಕಿದ್ದಾರೆ ಎಂದು ಆರೋಪಿಸಿದರು.

ಅಲ್ಲದೇ ಬೆಂಗಳೂರಿನ ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಗೆ ಕಾರಣವಾಗಿರುವ ನವೀನ್ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದ ಪೋಸ್ಟ್‍ಅನ್ನು ಸಮರ್ಥಿಸಿಕೊಂಡು ಶಾಂತಿಗೆ ಹೆಸರಾಗಿರುವ ಚಿಕ್ಕಮಗಳೂರು ಜಿಲ್ಲೆಯಲ್ಲೂ ಕೋಮುಗಲಭೆಗೆ ಪ್ರಚೋದನೆಯನ್ನೂ ನೀಡಿದ್ದಾರೆ. ಆದರೆ ಶೃಂಗೇರಿ ಘಟನೆ ಸಂಬಂಧ ಪೊಲೀಸರು ಸಂಘಪರಿವಾರದ ಕಾರ್ಯಕರ್ತನೆಂದು ಹೇಳಲಾಗುತ್ತಿರುವ ಮಿಲಿಂದ್ ಎಂಬಾತನನ್ನು ಬಂಧಿಸಿದ್ದು, ಎಸ್‍ಡಿಪಿಐ ಪಕ್ಷಕ್ಕೂ ಶಂಕರಾಚಾರ್ಯ ಪುತ್ಥಳಿ ಮೇಲಿದ್ದ ಬ್ಯಾನರ್‍ಗೂ ಸಂಬಂಧವೇ ಇಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿಯೇ ಸ್ಪಷ್ಟಪಡಿಸಿದ್ದಾರೆ. ಜೀವರಾಜ್ ಪಕ್ಷದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿರುವುದಲ್ಲದೇ ಪಕ್ಷದ ಮಾನಹಾನಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ನೋಟಿಸ್ ಕೂಡ ನೀಡಲಾಗಿದೆ ಎಂದರು.

ಶೃಂಗೇರಿ ಘಟನೆ ನಡೆದ ಸಂದರ್ಭ ಮಾಜಿ ಸಚಿವ ಜೀವರಾಜ್ ಎಸ್‍ಡಿಪಿಐ ಪಕ್ಷದ ವಿರುದ್ಧ ಸುಳ್ಳು ಆರೋಪಿಸಿದ್ದರು. ಇದನ್ನು ಖಂಡಿಸಿ ಜೀವರಾಜ್ ವಿರುದ್ಧ ಪೊಲೀಸರಿಗೆ ಅನೇಕ ದೂರುಗಳು ದಾಖಲಿಸಿ ಬಂಧನಕ್ಕೆ ಆಗ್ರಹಿಸಲಾಗಿತ್ತು. ಆದರೆ ಪೊಲೀಸರು ಪ್ರಭಾವಿ ರಾಜಕಾರಣಿಗಳ ಒತ್ತಡಕ್ಕೆ ಮಣಿದು ಇದುವರೆಗೂ ಎಫ್‍ಐಆರ್ ದಾಖಲು ಮಾಡಿಕೊಂಡಿಲ್ಲ. ಅವರನ್ನು ಠಾಣೆಗೆ ಕರೆಸಿ ವಿಚಾರಣೆಯನ್ನೂ ಮಾಡಿಲ್ಲ. ಜೀವರಾಜ್ ಹೇಳಿಕೆ ಖಂಡಿಸಿ ಎಸ್‍ಡಿಪಿಐ ನಗರದಲ್ಲಿ ಪ್ರತಿಭಟನೆಗೆ ಮುಂದಾಗಿದ್ದ ವೇಳೆ ಎಸ್ಪಿ ಅವರು ಎಫ್‍ಐಆರ್ ದಾಖಲಿಸುವ ಭರವಸೆ ನೀಡಿ ಪ್ರತಿಭಟನೆಯನ್ನು ಹತ್ತಿಕ್ಕಿದರೇ ಹೊರತು ಜೀವರಾಜ್ ತಂಟೆಗೂ ಹೋಗಿಲ್ಲ ಎಂದು ಅಫ್ಸರ್ ಆರೋಪಿಸಿದರು.

ಶೃಂಗೇರಿ ಘಟನೆ ಸಂಬಂಧ ಪೊಲೀಸರು ಬಂಧಿಸಿರುವ ಆರೋಪಿ ಮಿಲಿಂದ್ ಕುಡಿತದ ಮತ್ತಿನಲ್ಲಿ ಮಧ್ಯರಾತ್ರಿ ಕೃತ್ಯ ಎಸಗಿದ್ದಾನೆಂದು ಪೊಲೀಸರು ಹೇಳುತ್ತಿದ್ದಾರೆ. ಆದರೆ ಘಟನೆ ನಡೆದ ದಿನ ಮಧ್ಯರಾತ್ರಿ ಯಾವ ಬಾರ್ ತೆರೆದಿತ್ತೆಂದು ಪ್ರಶ್ನಿಸಿದ ಅವರು, ಪ್ರಕರಣದಲ್ಲಿ ಸಂಘಪರಿವಾರದ ಕೈವಾಡ ಇದ್ದು, ಇದನ್ನು ಮುಚ್ಚಿ ಹಾಕಲು ಪೊಲೀಸರು ಬಿಜೆಪಿ ಪಕ್ಷದ ಪ್ರಭಾವಿಗಳ ತಾಳಕ್ಕೆ ಕುಣಿಯುತ್ತಿದ್ದಾರೆಂಬ ಶಂಕೆ ವ್ಯಕ್ತವಾಗುತ್ತಿದೆ. ಪೊಲೀಸ್ ಇಲಾಖೆ ಕೂಡಲೇ ಜೀವರಾಜ್ ವಿರುದ್ಧ ನೀಡಿರುವ ದೂರಿನನ್ವಯ ಎಫ್‍ಐಆರ್ ದಾಖಲಿಸಿ ಘಟನೆಯಲ್ಲಿ ಬಿಜೆಪಿ ಮತ್ತು ಸಂಘಪರಿವಾರದ ಕೈವಾಡ ಇರುವ ಬಗ್ಗೆಯೂ ತನಿಖೆ ನಡೆಸಬೇಕು. ಬೆಂಗಳೂರು ಗಲಭೆಗೆ ಕಾರಣನಾದ ನವೀನ್ ಪೋಸ್ಟ್ ಅನ್ನು ಬಹಿರಂಗವಾಗಿ ಸಮರ್ಥಿಸಿ ಜಿಲ್ಲೆಯಲ್ಲಿ ಕೋಮುಗಲಭೆಗೆ ಪ್ರಚೋದನೆ ನೀಡಿದ ಆರೋಪದ ಮೇರೆಗೆ ಜೀವರಾಜ್‍ರನ್ನು ಕೂಡಲೇ ಬಂಧಿಸಬೇಕೆಂದು ಅಫ್ಸರ್ ಕೊಡ್ಲಿಪೇಟೆ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ರಾಜ್ಯ ಸಮಿತಿ ಸದಸ್ಯ ರಿಯಾಝ್ ಪರಂಗಿಪೇಟೆ, ಜಿಲ್ಲಾಧ್ಯಕ್ಷ ಅಜ್ಮತ್ ಪಾಶ, ಜಿಲ್ಲಾ ಕಾರ್ಯದರ್ಶಿ ಸಿಕಂದರ್ ಪಾಶ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X