Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಾರಿ ಫೌಂಡೇಶನ್ ಕುರಿತು ಅಪಪ್ರಚಾರದಿಂದ...

ನಾರಿ ಫೌಂಡೇಶನ್ ಕುರಿತು ಅಪಪ್ರಚಾರದಿಂದ ಬಡ ಕ್ಯಾನ್ಸರ್ ರೋಗಿಗಳಿಗೆ ಪೆಟ್ಟು

ಫೌಂಡೇಶನ್ ಸಂಸ್ಥಾಪಕಿ ಫಾತಿಮಾ ತಬಸ್ಸುಮ್

ವಾರ್ತಾಭಾರತಿವಾರ್ತಾಭಾರತಿ20 Aug 2020 6:17 PM IST
share
ನಾರಿ ಫೌಂಡೇಶನ್ ಕುರಿತು ಅಪಪ್ರಚಾರದಿಂದ ಬಡ ಕ್ಯಾನ್ಸರ್ ರೋಗಿಗಳಿಗೆ ಪೆಟ್ಟು

ಬೆಂಗಳೂರು, ಆ.20: ಕಾವಲ್ ಭೈರಸಂದ್ರ ಗಲಾಟೆ ಪ್ರಕರಣ ಸಂಬಂಧ ಯಾವುದೇ ಆಧಾರ ಇಲ್ಲದೆ, ನಾರಿ ಫೌಂಡೇಶನ್ ಕುರಿತು ಅಪಪ್ರಚಾರ ಮಾಡಿದ ಕಾರಣದಿಂದಾಗಿ ಬಡ ಸ್ತನ ಕ್ಯಾನ್ಸರ್ ರೋಗಿಗಳಿಗೆ ಪೆಟ್ಟುಬಿದ್ದಂತೆ ಆಗಿದೆ ಎಂದು ಫೌಂಡೇಶನ್ ಸಂಸ್ಥಾಪಕಿ ಫಾತಿಮಾ ತಬಸ್ಸುಮ್ ಬೇಸರ ವ್ಯಕ್ತಪಡಿಸಿದರು.

ಗುರುವಾರ ನಗರದ ಹಮೀದ್ ಶಾ ಆವರಣದ ಹೈಕೋರ್ಟಿನ ಹಿರಿಯ ನ್ಯಾಯವಾದಿ ರಹಮತ್ ಉಲ್ಲಾ ಕೊತ್ವಾಲ್ ಅವರ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಗಲಾಟೆ ಪ್ರಕರಣದಲ್ಲಿ ಸದ್ಯ ಪೊಲೀಸರ ವಶದಲ್ಲಿರುವ ಸಮೀವುದ್ದೀನ್ ನನ್ನ ಪತಿಯಾಗಿದ್ದು, ಕಳೆದ ಎರಡು ವರ್ಷಗಳ ಹಿಂದೆಯಷ್ಟೇ ವಿವಾಹವಾಗಿದ್ದೇವೆ. ಆದರೆ, ಪತಿಗೂ ನಾರಿ ಫೌಂಡೇಶನ್‍ಗೂ ಯಾವುದೇ ಸಂಬಂಧವಿಲ್ಲ. ಸಮೀವುದ್ದೀನ್ ಈ ಫೌಂಡೇಶನ್ ನಲ್ಲಿ ಸದಸ್ಯರೂ ಸಹ ಆಗಿಲ್ಲ ಎಂದು ನುಡಿದರು.

ಫೌಂಡೇಶನ್‍ಗೆ ವಿದೇಶದಿಂದ ಭಾರೀ ಪ್ರಮಾಣದಲ್ಲಿ ಹಣ ಹರಿದುಬಂದಿದ್ದು, ಮಂಗಳೂರು ಗಲಭೆ, ಎನ್ಆರ್‍ಸಿ, ಸಿಎಎ ಪ್ರತಿಭಟನೆಗಳಿಗೆ ಖರ್ಚು ಮಾಡಲಾಗಿದೆ ಎಂದು ಕೆಲ ಮಾಧ್ಯಮಗಳಲ್ಲಿ ಉದ್ದೇಶ ಪೂರಕವಾಗಿ ಸುಳ್ಳುಗಳನ್ನು ಪ್ರಚಾರ ಮಾಡಲಾಗುತ್ತಿದೆ. ಅಲ್ಲದೆ, ನಾವು ವಿದೇಶದಿಂದ ಫೌಂಡೇಶನ್ ಗೆ ಹಣ ಪಡೆಯುವ ಸಂಬಂಧ ಎಫ್ ಸಿಆರ್‍ಎ ಲೈಸೆನ್ಸ್ ಹಾಗೂ ಯಾವುದೇ ರೀತಿಯ ನೋಂದಣಿಯೂ ಮಾಡಿಲ್ಲ. ಹೀಗಿದ್ದರೂ, ಇಲ್ಲಸಲ್ಲದ ಆರೋಪ ಮಾಡಲಾಗುತ್ತಿರುವುದು ಖಂಡನೀಯ ಎಂದರು.

ಮಹಿಳಾ ಮತ್ತು ಮಕ್ಕಳ ಸಬಲೀಕರಣಕ್ಕಾಗಿಯೇ 2016ನೇ ಸಾಲಿನಲ್ಲಿ ನಾರಿ ಫೌಂಡೇಶನ್ ಹುಟ್ಟು ಹಾಕಲಾಯಿತು. ಇದರಲ್ಲಿ ಮೂವರು ಸದಸ್ಯರಿದ್ದು, ರಾಜಕಾರಣಿ ಜೀವರಾಜ್ ಆಳ್ವ ಅವರ ಪತ್ನಿ ನಂದಿನಿ ಆಳ್ವ ಸಹ ಓರ್ವರಾಗಿದ್ದಾರೆ. ಅಷ್ಟೇ ಅಲ್ಲದೆ, ಸ್ತನ ರೋಗ ಸಂಬಂಧ ಬಡವರಿಗಾಗಿ ಉಚಿತ ಚಿಕಿತ್ಸೆ ಮಾಡಲಾಗುತ್ತಿದೆ. ಜೊತೆಗೆ, ಶಿಕ್ಷಣ, ಸಹಾಯಧನ ನೀಡಿ, ಉದ್ಯೋಗ ಸೃಷ್ಟಿಗೂ ಫೌಂಡೇಶನ್ ಶ್ರಮಿಸುತ್ತಿದೆ ಎಂದು ತಬಸ್ಸುಮ್ ಸ್ಪಷ್ಟನೆ ನೀಡಿದರು.

ಕೆಲ ಮಾಧ್ಯಮಗಳಲ್ಲಿ ಅಪಪ್ರಚಾರ ಕಾರಣದಿಂದಾಗಿ ಬಡವರಿಗಾಗಿ ದುಡಿಯುತ್ತಿದ್ದ ನಾರಿ ಫೌಂಡೇಶನ್‍ಗೆ ಧಕ್ಕೆ ಉಂಟಾಗಬಹುದು. ಹೀಗಾಗಿ, ಯಾವುದೇ ಮಾಹಿತಿ ಪ್ರಕಟಿಸಬೇಕಾದಲ್ಲಿ, ಒಮ್ಮೆ ಪರಿಶೀಲಿಸಿ, ತಮ್ಮ ಅಭಿಪ್ರಾಯಗಳನ್ನು ಕೇಳಿ ಎಂದು ಮನವಿ ಮಾಡಿದ ಅವರು, ಫೌಂಡೇಶನ್ ಬ್ಯಾಂಕಿನ ಖಾತೆಯೂ ಸಾರ್ವಜನಿಕರಿಗೆ ಮೀಸಲಿಡಲಾಗಿದೆ. ಇದನ್ನು ಯಾರು ಸಹ ನೋಡಬಹುದಾಗಿದೆ. ಅಲ್ಲದೆ, ಲಾಕ್‍ಡೌನ್ ಪರಿಣಾಮದಿಂದಾಗಿ ಬಾಡಿಗೆ ಪಾವತಿ ಮಾಡದ ಕಾರಣದಿಂದಾಗಿ ನಗರದಲ್ಲಿದ್ದ ಕಚೇರಿಯನ್ನು ಖಾಲಿ ಮಾಡಿ, ಮನೆಯಿಂದಲೇ ಕಾರ್ಯ ನಿರ್ವಹಿಸುತ್ತಿದ್ದೇವೆ ಎಂದು ಹೇಳಿ ಭಾವುಕರಾದರು.  

ಸುದ್ದಿಗೋಷ್ಠಿಯಲ್ಲಿ ಹೈಕೋರ್ಟಿನ ಹಿರಿಯ ನ್ಯಾಯವಾದಿ ರಹಮತ್ ಉಲ್ಲಾ ಕೊತ್ವಾಲ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X