Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಯುವ ಪೀಳಿಗೆಯ ಸಾಮರ್ಥ್ಯ ಗುರುತಿಸಿ...

ಯುವ ಪೀಳಿಗೆಯ ಸಾಮರ್ಥ್ಯ ಗುರುತಿಸಿ ಕಾಂಗ್ರೆಸ್‍ನಲ್ಲಿ ಸೂಕ್ತ ಸ್ಥಾನ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ20 Aug 2020 7:08 PM IST
share
ಯುವ ಪೀಳಿಗೆಯ ಸಾಮರ್ಥ್ಯ ಗುರುತಿಸಿ ಕಾಂಗ್ರೆಸ್‍ನಲ್ಲಿ ಸೂಕ್ತ ಸ್ಥಾನ: ಡಿ.ಕೆ.ಶಿವಕುಮಾರ್

ಬೆಂಗಳೂರು, ಆ.20: ಮುಂದಿನ ದಿನಗಳಲ್ಲಿ ಯುವ ಪೀಳಿಗೆಯಲ್ಲಿರುವ ಸಾಮರ್ಥ್ಯವನ್ನು ಗುರುತಿಸಿ ಕಾಂಗ್ರೆಸ್‍ನಲ್ಲಿ ಸೂಕ್ತವಾದ ಸ್ಥಾನ ಕೊಡುವುದರ ಮೂಲಕ ನಾಯಕರನ್ನಾಗಿ ರೂಪಿಸಲಾಗುವುದೆಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಗುರುವಾರ ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ್ದ ಮಾಜಿ ಪ್ರಧಾನಿ ರಾಜೀವ್‍ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದೇವರಾಜ ಅರಸುರವರ ಜನ್ಮದಿನಾಚರಣೆ ಕಾರ್ಯಕ್ರಮ ಹಾಗೂ ಬಿಜೆಪಿ ವಿರುದ್ದ ಆರಂಭವಾಗಿರುವ ಜನಧ್ವನಿ ಹೋರಾಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಯುವ ಪೀಳಿಗೆಯಲ್ಲಿರುವ ಶಕ್ತಿ, ಸಾಮರ್ಥ್ಯವನ್ನು ಬಳಸಿಕೊಳ್ಳುವ ಮೂಲಕ ಪಕ್ಷಕ್ಕೆ ಹಾಗೂ ದೇಶಕ್ಕಾಗಿ ನಾಯಕರನ್ನು ರೂಪಿಸಬೇಕಾಗಿದೆ ಎಂದರು.

ಇಂದಿರಾಗಾಂಧಿಯ ಮಗ ನಾಯಕನಾಗುವುದು ಹೆಚ್ಚುಗಾರಿಕೆಯಲ್ಲ. ಪ್ರತಿ ಹಳ್ಳಿಯಿಂದಲೂ ನಾಯಕರು ರೂಪಗೊಳ್ಳಬೇಕೆಂಬುದು ರಾಜೀವ್‍ ಗಾಂಧಿಯವರ ಆಶಯವಾಗಿತ್ತು. ಆ ನಿಟ್ಟಿನಲ್ಲಿ ಪಂಚಾಯತ್, ತಾಲೂಕು, ಜಿಲ್ಲಾ ಪಂಚಾಯತ್‍ಗಳಿಗೆ ಹೆಚ್ಚಿನ ಅಧಿಕಾರ ನೀಡಿದ್ದರು. ಅವರ ಆಶಯದ ಹಾದಿಯಲ್ಲಿ ನಾವೆಲ್ಲರೂ ಸಾಗಬೇಕಿದೆ ಎಂದು ಅವರು ಹೇಳಿದರು.

ಇವತ್ತು ದೇಶದ ಐಟಿ, ಬಿಟಿ ಕಂಪೆನಿಗಳು ಜಗತ್ತಿನಲ್ಲಿ ಮುಂಚೂಣಿಯಲ್ಲಿವೆ ಎಂದರೆ ರಾಜೀವ್‍ ಗಾಂಧಿ ರೂಪಿಸಿದ ಯೋಜನೆಗಳೇ ಆಗಿವೆ. ಅವರು ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ನೀಡಿನ ಪ್ರೋತ್ಸಾಹದಿಂದ ದೇಶವು ನಾನಾ ಕ್ಷೇತ್ರಗಳಲ್ಲಿ ಸಾಕಷ್ಟು ಮುಂದುವರಿದಿದೆ. ದೇಶವು ಪ್ರಗತಿಯತ್ತ ಸಾಗುವಲ್ಲಿ ಕಾಂಗ್ರೆಸ್ ರೂಪಿಸಿದ ಯೋಜನೆಗಳೇ ಕಾರಣವೆಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ, ಸಲೀಂ ಅಹ್ಮದ್ ಮತ್ತಿತರರಿದ್ದರು.

ದೇವರಾಜ ಅರಸರು ಉಳುವವನನ್ನೇ ಭೂಮಿ ಒಡೆಯನನ್ನಾಗಿ ಮಾಡಿದರು. ಬಗರ್ ಹುಕುಂ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದವರಿಗೆ ಸಾಗುವಳಿ ಪತ್ರ ನೀಡಿದರು. ಕಾಂಗ್ರೆಸ್ ರೈತ-ಕೂಲಿ ಕಾರ್ಮಿಕರ, ಬಡವರ ಪರವಾದ ಯೋಜನೆಗಳನ್ನು ರೂಪಿಸಿದೆ. ಆದರೆ, ಬಿಜೆಪಿ ಅದನ್ನು ಶ್ರೀಮಂತರ, ಬಂಡವಾಳಶಾಹಿಗಳ ಪರವಾಗಿ ತಿದ್ದುಪಡಿ ಮಾಡುತ್ತಿದೆ. ಕೋವಿಡ್-19 ಸಂತ್ರಸ್ತರಿಗೆ, ರೈತರಿಗೆ, ಕಾರ್ಮಿಕರಿಗೆ ಸೂಕ್ತ ಪರಿಹಾರ ಕೊಟ್ಟಿಲ್ಲ. ಕಳೆದ ವರ್ಷ ನೆರೆ ಹಾವಳಿಯಲ್ಲಿ ಸಂತ್ರಸ್ತಗೊಂಡ ಜನತೆಯನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಲಾಗಿದೆ. ಈ ವರ್ಷ ಪುನಃ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನೆರೆ ಹಾವಳಿ ಸಂಭವಿಸಿದೆ. ಈ ಸಂತ್ರಸ್ತರಿಗೆ ಕೇಂದ್ರದಿಂದ ಸೂಕ್ತ ಪರಿಹಾರ ಕೊಡಿಸಲು ಬಿಜೆಪಿ ಸಂಸದರಿಂದ ಆಗಿಲ್ಲವೆಂದರೆ, ನಮ್ಮನ್ನಾದರು ಕರೆದುಕೊಂಡು ಹೋಗಿ. ನಾವು ಕೇಳುತ್ತೇವೆ. ನಿಮ್ಮ ಅಧಿಕಾರಕ್ಕೆ ಯಾವುದೇ ತೊಂದರೆ ಮಾಡುವುದಿಲ್ಲ.

-ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X