ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ
ಮಲ್ಪೆ, ಆ.20: ಕೆಳಾರ್ಕಳಬೆಟ್ಟುವಿನ ಮನೆಯಲ್ಲಿ ಒಬ್ಬಂಟಿಯಾಗಿ ವಾಸ ಮಾಡಿಕೊಂಡಿದ್ದ ವಿಜಯ ಪೂಜಾರಿ(49) ಎಂಬವರು ವೈಯಕ್ತಿಕ ಕಾರಣದಿಂದ ಮನನೊಂದು ಆ.19ರಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಲ್ಪೆಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಂಗೊಳ್ಳಿ: ವಿಪರೀತ ಕೆಮ್ಮಿನಿಂದ ಮಾನಸಿಕವಾಗಿ ನೊಂದು ಆ.16ರಂದು ಮದ್ಯದಲ್ಲಿ ಇಲಿ ಪಾಷಾಣ ಬೆರೆಸಿ ಸೇವಿಸುವುದರೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ಆಲೂರು ಆಶ್ರಯ ಕಾಲನಿಯ ಮಹಾದೇವಿ(40) ಎಂಬವರು ಅಜ್ಜರಕಾಡು ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಆ.19ರಂದು ರಾತ್ರಿ 8:45ಕ್ಕೆ ಮೃತಪಟ್ಟಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಲ್ಪೆ: ಹೆಂಡತಿ ಮಕ್ಕಳು ದೂರವಾಗಿರುವ ಕಾರಣದಿಂದ ಮಾನಸಿಕವಾಗಿ ನೊಂದ ಕಲ್ಯಾಣಪುರ ಮೂಡುತೋನ್ಸೆಯ ಸಂಜೀವ ಅಮೀನ್(83) ಎಂಬವರು ಆ.19ರಂದು ರಾತ್ರಿ ವೇಳೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





