ಮೂಡುಬಿದಿರೆ: ದಿ .ರಾಜೀವ್ ಗಾಂಧಿ ಮತ್ತು ದೇವರಾಜ್ ಅರಸ್ ಜನ್ಮದಿನಾಚರಣೆ

ಮೂಡುಬಿದಿರೆ: ಮಾಜಿ ಪ್ರಧಾನಿ ದಿ.ರಾಜೀವ್‍ಗಾಂಧಿ ಹಾಗೂ ದೇವರಾಜ್ ಅರಸ್ ಅವರ ಜನ್ಮದಿನವನ್ನು ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಗುರುವಾರ ಆಚರಿಸಲಾಯಿತು.
ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಸಂಪತ್ ಸಾಮ್ರಾಜ್ಯ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಪ್ರಿಯಾ ಡಿ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಚಂದ್ರಹಾಸ ಸನಿಲ್, ಸೇವಾದಳದ ಅಧ್ಯಕ್ಷ ವಾಸುದೇವ ನಾಯಕ್, ರತ್ನಾಕರ ಮೊಯಿಲಿ, ಸಾಮಾಜಿಕ ಜಾಲತಾಣದ ಅಧ್ಯಕ್ಷ ಜಯ ಕುಮಾರ್, ಪುರಸಭಾ ಸದಸ್ಯರಾದ ಸುರೇಶ್ ಕೋಟ್ಯಾನ್, ಸುರೇಶ್ ಪ್ರಭು, ಕೊರಗಪ್ಪ, ಪುರಂದರ ದೇವಾಡಿಗ, ಇಕ್ಬಾಲ್ ಕರೀಂ, ತಾಲೂಕು ಪಂಚಾಯತ್ ಸದಸ್ಯರಾದ ಪ್ರಶಾಂತ್ ಅಮೀನ್ ಮತ್ತಿತರರಿದ್ದರು.
Next Story





