Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ...

ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡಿದರೆ ಪರವಾನಿಗೆ ರದ್ದು: ಕೃಷಿ ಸಚಿವ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ20 Aug 2020 11:43 PM IST
share
ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡಿದರೆ ಪರವಾನಿಗೆ ರದ್ದು: ಕೃಷಿ ಸಚಿವ ಪಾಟೀಲ್

ಬೆಂಗಳೂರು, ಆ. 20: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಹೆಚ್ಚಿನ ಬೆಲೆಯಲ್ಲಿ ರಸಗೊಬ್ಬರ ಮಾರಾಟವಾಗದಂತೆ ಕೃಷಿ ಪರಿವೀಕ್ಷಕರು ಕ್ರಮ ಕೈಗೊಳ್ಳುತ್ತಿದ್ದಾರೆ. ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿದ್ದ 40ಕ್ಕೂ ಹೆಚ್ಚಿನ ಚಿಲ್ಲರೆ ಮಾರಾಟಗಾರರ ಪರವಾನಿಗೆ ರದ್ದುಪಡಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಗುರುವಾರ ವಿಕಾಸಸೌಧದಲ್ಲಿನ ಸಚಿವರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ಜಿಲ್ಲೆಯಲ್ಲಿ ಸಹಾಯಕ ಕೃಷಿ ನಿರ್ದೇಶಕರ ನೇತೃತ್ವದಲ್ಲಿ ವಿಜಿಲೆನ್ಸ್ ತಂಡಗಳನ್ನು ರಚಿಸಿ ತಂಡದ ಸದಸ್ಯರು ರಸಗೊಬ್ಬರ ಪರಿವೀಕ್ಷಕರು ಅವರ ವ್ಯಾಪ್ತಿಯಲ್ಲಿ ರಸಗೊಬ್ಬರ ಮಾರಾಟ ಮಳಿಗೆಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಿ ನಿಯಮಿತವಾಗಿ ಮಾದರಿಗಳನ್ನು ತೆಗೆದು ವಿಶ್ಲೇಷಣೆಗೊಳಪಿಸಿ ರೈತರಿಗೆ ಉತ್ತಮ ಗುಣಮಟ್ಟದ ಗೊಬ್ಬರ ಪೂರೈಕೆಯಾಗುವಂತೆ ನೋಡಿಕೊಳ್ಳಲಾಗುತ್ತದೆ ಎಂದರು.

ಪ್ರತಿವಾರ ರಸಗೊಬ್ಬರ ತಯಾರಕ ಸಂಸ್ಥೆಗಳೊಂದಿಗೆ ರಸಗೊಬ್ಬರ ಸರಬರಾಜು ಕುರಿತು ಸಭೆ ಮತ್ತು ಪ್ರತಿದಿನ ರಸಗೊಬ್ಬರದ ರೇಕ್ ಕುರಿತು ಉಸ್ತುವಾರಿ ವಹಿಸಲಾಗಿದೆ. ಸರಕಾರದಿಂದ ಪ್ರತಿಹಂಗಾಮಿನ ಪೂರ್ವದಲ್ಲಿಯೇ ರಸಗೊಬ್ಬರಗಳನ್ನು ಜಿಲ್ಲೆಗಳಿಂದ ನೀಡುವ ಬೇಡಿಕೆಯಂತೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗುತ್ತದೆ. ಕೇಂದ್ರದಿಂದ ಪ್ರತಿ ತಿಂಗಳು ವಿವಿಧ ರಸಗೊಬ್ಬರಗಳನ್ನು ಹಂಚಿಕೆ ಮಾಡಲಾಗುತ್ತಿದ್ದು, ಪ್ರತಿ ತಿಂಗಳು ಹಂಚಿಕೆ ಮಾಡಲಾಗಿರುವ ರಸಗೊಬ್ಬರಗಳನ್ನು ಜಿಲ್ಲಾವಾರು ನಿಗದಿಪಡಿಸಿ, ಜಿಲ್ಲಾವಾರು ನಿಗದಿಪಡಿಸಿರುವ ರಸಗೊಬ್ಬರಗಳ ತಯಾರಿಕಾ ಸಂಸ್ಥೆಯವರಿಂದ ನೇರವಾಗಿ ಮಹಾಮಂಡಳ, ಸಹಕಾರ ಸಂಘಗಳು ಹಾಗೂ ಖಾಸಗಿ ಸಂಸ್ಥೆಯವರ ಮುಖಾಂತರ ಸಮರ್ಪಕ ರೀತಿಯಲ್ಲಿ ರೈತರಿಗೆ ವಿತರಿಸಲಾಗುತ್ತಿದೆ ಎಂದರು.

ಅವಧಿ ವಿಸ್ತರಣೆ: `ನನ್ನ ಬೆಳೆ ನನ್ನ ಹಕ್ಕು, ನನ್ನ ಬೆಳೆ ಸಮೀಕ್ಷೆ, ನನ್ನ ಪ್ರಮಾಣ ಪತ್ರ' ಎಂದು ರೈತಾಪಿ ವರ್ಗ ಎದೆಯುಬ್ಬಿಸಿ ಹೇಳುವಂತಹ ಹೇಳುವಂಹ ಸ್ವಾಭಿಮಾನಿ ಅನ್ನದಾತ ತನ್ನ ಬೆಳೆಗೆ ತಾನೇ ಪ್ರಮಾಣ ಪತ್ರ ನೀಡುವ ರೈತ ಬೆಳೆ ಸಮೀಕ್ಷೆ ಆಪ್‍ಗೆ ನಿಗದಿಪಡಿಸಿದ ಅಂತಿಮ ದಿನವನ್ನು ವಿಸ್ತರಿಸಲಾಗಿದೆ ಎಂದು ಬಿ.ಸಿ.ಪಾಟೀಲ್ ಇದೇ ವೇಳೆ ಮಾಹಿತಿ ನೀಡಿದರು.

ರೈತ ಬೆಳೆ ಸಮೀಕ್ಷೆ ಆ್ಯಪ್‍ಗೆ ರಾಜ್ಯಾದ್ಯಂತ ಉತ್ತಮ ಸ್ಪಂದನೆ ಹಾಗೂ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಕೃಷಿಕರ ಮೊಗದಲ್ಲಿ ಈ ಬೆಳೆ ಸಮೀಕ್ಷೆ ಮಂದಹಾಸ ಮೂಡಿಸಿದೆ. ಬೆಳೆ ಸಮೀಕ್ಷೆ ಉತ್ಸವದಂತಾಗಿದ್ದು, ಸಾರ್ವಜನಿಕ ಸಹಭಾಗಿತ್ವ ಮೊಬೈಲ್ ಆ್ಯಪ್ ಬೆಳೆ ಸಮೀಕ್ಷೆಗೆ ಕಂಡುಬರುತ್ತಿದೆ ಎಂದ ಅವರು, ಆಗಸ್ಟ್ 20ರ ಸಂಜೆಯವರೆಗೆ 6,65,810 ರೈತರು ಸರ್ವೆ ನಂ.ಪ್ಲಾಟ್ ಅಪ್ಲೋಡ್  ಮಾಡಿಕೊಂಡಿದ್ದಾರೆ. ಈ ಹಿಂದೆ ಮೊಬೈಲ್ ಆ್ಯಪ್ ಬೆಳೆ ಸಮೀಕ್ಷೆಗೆ ಆ.24 ಕೊನೆಯ ದಿನ ನಿಗದಿಪಡಿಸಲಾಗಿದ್ದು, ಮೊಬೈಲ್ ಆ್ಯಪ್ ಬೆಳೆ ಸಮೀಕ್ಷೆ ಸಂಬಂಧ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದ್ದು, ರೈತರಿಗೆ ಇನ್ನಷ್ಟು ಅನುಕೂಲ ಕಲ್ಪಿಸಲಾಗುವುದು ಎಂದರು.

ಅಗ್ರಿ ಸ್ಟಾರ್ಟಪ್: ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಆ.21ರಂದು ವಿಕಾಸಸೌಧ ಸಮ್ಮೇಳನ ಸಭಾಂಗಣ ಕೊಠಡಿ ಸಂಖ್ಯೆ 419 ರಲ್ಲಿ ಕೃಷಿ ನವೋದ್ಯಮ(ಅಗ್ರಿ ಸ್ಟಾರ್ಟಪ್) ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. `ವರ್ಚುವಲ್ ಮೋಡ್ ಆನ್‍ಲೈನ್' ಮೂಲಕ ನಡೆಯಲಿರುವ ಸಮ್ಮೇಳನದಲ್ಲಿ ಸಾವಯವ ಹಾಗೂ ಸಿರಿಧಾನ್ಯಗಳು, ಆಹಾರ ಸಂಸ್ಕರಣಾ ಉದ್ದಿಮೆಗಳ ವ್ಯಾಪ್ತಿ ಹಾಗೂ ಅವಕಾಶಗಳು, ಆಧುನಿಕ ತಂತ್ರಜ್ಞಾನ ಆಧಾರಿತ ಕೃಷಿ ಕುರಿತು ಸಮ್ಮೇಳನದಲ್ಲಿ ಮಾಹಿತಿ ವಿನಿಯಮ, ಚರ್ಚೆ, ಕೃಷಿ ಕ್ಷೇತ್ರದಲ್ಲಿ ಸ್ಟಾರ್ಟಪ್‍ನ ಮಹತ್ವ, ರೈತರಿಗಾಗುವ ಲಾಭ ಸೇರಿದಂತೆ ಮತ್ತಿತರ ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಯಲಿದೆ ರಾಜ್ಯ ಹಾಗೂ ದೇಶದ ವಿವಿಧ ಭಾಗಗಳ 100ಕ್ಕೂ ಹೆಚ್ಚು ಕೃಷಿ ಸ್ಟಾರ್ಟಪ್ ಉದ್ದಿಮೆಗಳು, ಹೂಡಿಕೆದಾರರು ಭಾಗವಹಿಸಲಿದ್ದಾರೆ ಎಂದರು.

2020ನೆ ಸಾಲಿನಲ್ಲಿ 73 ಲಕ್ಷ ಹೆಕ್ಟೆರ್ ಈ ಬಾರಿ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಗುರಿ ಹೊಂದಲಾಗಿದ್ದು, ಜೂನ್ 1ರಿಂದ ಆ.19ರ ವರೆಗೆ 68.26ಲಕ್ಷ ಹೆಕ್ಟೆರ್ ಶೇ.95ರಷ್ಟು ಬಿತ್ತನೆಯಾಗಿದೆ. ಎಪ್ರಿಲ್ 1ರಿಂದ ಆ.20ರ ವರೆಗೆ 6,78,055 ಯೂರಿಯಾ ಗೊಬ್ಬರಕ್ಕೆ ಬೇಡಿಕೆಯಿದ್ದು, 4,88163 ಮೆಟ್ರಿಕ್ ಟನ್ ಪೂರೈಕೆಯಾಗಿದ್ದು, ಕಳೆದ ಬಾರಿಗಿಂತ ಈಬಾರಿ 1,89,892 ಮೆಟ್ರಿಕ್ ಟನ್ ಯೂರಿಯಾ ಹೆಚ್ಚಿಗೆ ಸರಬರಾಜಾಗಿದೆ. ಎಪ್ರಿಲ್‍ನಿಂದ ಆಗಸ್ಟ್ ಅಂತ್ಯದವರೆಗೆ 18,23,000  ಮೆಟ್ರಿಕ್ ಟನ್ ವಿವಿಧ ಗ್ರೇಡ್ ಗಳ ರಸಗೊಬ್ಬಕ್ಕೆ ಬೇಡಿಕೆಯಿದ್ದು, ಆಗಸ್ಟ್ 20ರವರೆಗೆ ಅಂದರೆ ಇಂದಿನವರೆಗೆ 17,96,668 ಮೆಟ್ರಿಕ್ ಟನ್ ಪ್ರಮಾಣ ಸರಬರಾಜಾಗಿರುತ್ತದೆ. ಆಗಸ್ಟ್ ಮಾಹೆಯಲ್ಲಿ 1,77,000 ಮೆಟ್ರಿಕ್ ಟನ್ ಪ್ರಮಾಣದ ಯೂರಿಯಾ ರಸಗೊಬ್ಬರಕ್ಕೆ ಬೇಡಿಕೆಯಿದ್ದು ಇಲ್ಲಿಯವರೆಗೆ 1,14,194 ಮೆಟ್ರಿಕ್ ಟನ್ ಪ್ರಮಾಣದಲ್ಲಿ ರಸಗೊಬ್ಬರ ಸರಬರಾಜಾಗಿರುತ್ತದೆ. 62,806 ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರ ಸರಬರಾಜು ಹಂತದಲ್ಲಿರುತ್ತದೆ ಎಂದು ವಿವರ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X