ಸಾರ್ಥಕ ಸಾಧನೆಯ ಒಂದು ವರ್ಷ; 'ಸಾರಿಗೆ ಮಿತ್ರ' ಪುಸ್ತಕ ಬಿಡುಗಡೆ
ಬೆಂಗಳೂರು, ಆ. 20: ಸಾರಿಗೆ ಇಲಾಖೆಯ ಒಂದು ವರ್ಷದಲ್ಲಿ ಹಲವು ನೂತನ ಸಾಧನೆಗಳನ್ನು ಕೈಗೊಳ್ಳಲಾಗಿದ್ದು, ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ನೇತೃತ್ವದಲ್ಲಿ ಕೈಗೊಳ್ಳಲಾದ ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಒಳಗೊಂಡ ಪುಸ್ತಕವನ್ನು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಿದ್ದ ಸರಳ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಬಿಎಂಟಿಸಿ ಅಧ್ಯಕ್ಷ, ಮಾಜಿ ಶಾಸಕ ನಂದೀಶ್ ರೆಡ್ಡಿ, ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಂಜುಂ ಫರ್ವೇಜ್, ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗ ಸಿ.ಕಳಸದ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Next Story





