Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಾಳಿಗರ ಕೊಲೆಗಡುಕರನ್ನು ಶಿಕ್ಷಿಸಲು...

ಬಾಳಿಗರ ಕೊಲೆಗಡುಕರನ್ನು ಶಿಕ್ಷಿಸಲು ಹೋರಾಡುತ್ತಿರುವ ಅವರ ಸೋದರಿಯರಿಗೆ ಯಾವಾಗ ನ್ಯಾಯ ಕೊಡಿಸುತ್ತೀರಿ ?

ನಳೀನ್ ಕುಮಾರ್ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ21 Aug 2020 7:32 PM IST
share
ಬಾಳಿಗರ ಕೊಲೆಗಡುಕರನ್ನು ಶಿಕ್ಷಿಸಲು ಹೋರಾಡುತ್ತಿರುವ ಅವರ ಸೋದರಿಯರಿಗೆ ಯಾವಾಗ ನ್ಯಾಯ ಕೊಡಿಸುತ್ತೀರಿ ?

ಬೆಂಗಳೂರು, ಆ. 21: `ಬುದ್ಧಿವಂತರ ಜಿಲ್ಲೆ ಎಂದ ದಕ್ಷಿಣ ಕನ್ನಡದ ಖ್ಯಾತಿಗೆ ಅಸೂಯೆಪಟ್ಟು ಬಿಜೆಪಿ ವರಿಷ್ಟರು, ನಳೀನ್ ಕುಮಾರ್ ಕಟೀಲ್ ಎಂಬ ನಕಲಿ ಶ್ಯಾಮನನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿರಬಹುದು, ಇಲ್ಲವೇ ಪಕ್ಷದಲ್ಲಿ ಈ ಮಟ್ಟದ ಬೌದ್ಧಿಕ ದಾರಿದ್ರ್ಯ ಇದ್ದಿರಬಹುದು' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಮ್ಮ ವಿರುದ್ಧದ ನಳೀನ್ ಕುಮಾರ್ ಕಟೀಲ್ ಟೀಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.

ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಅವರು, `ಹಿಂದು ಧರ್ಮಕ್ಕೆ ಸೇರಿರುವ ಮಂಗಳೂರಿನ ಆರ್‍ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಹತ್ಯೆಯ ಪ್ರಮುಖ ಆರೋಪಿಯಾದ ನಿಮ್ಮ ಖಾಸಾ ದೋಸ್ತ್ ನರೇಶ್ ಶೆಣೈಯನ್ನು ರಕ್ಷಿಸುತ್ತಿರುವವರು ಯಾರೆಂದು ತಿಳಿಸುವಿರಾ? ಬಾಳಿಗರ ಕೊಲೆಗಡುಕರನ್ನು ಶಿಕ್ಷಿಸಲು ಹೋರಾಡುತ್ತಿರುವ ಅವರ ಸೋದರಿಯರಿಗೆ ಯಾವಾಗ ನ್ಯಾಯ ಕೊಡಿಸುತ್ತೀರಿ?' ಎಂದು ಪ್ರಶ್ನಿಸಿದ್ದಾರೆ.

`ಹಿಂದುಗಳ ಹತ್ಯೆ ಬಗ್ಗೆ ಕಣ್ಣೀರು ಸುರಿಸುತ್ತಿರುವ ನಳೀನ್ ಕುಮಾರ್ ಕಟೀಲ್ ಅವರೇ, ದಕ್ಷಿಣ ಕನ್ನಡದ ಪ್ರಕಾಶ್ ಕುಳಾಯಿ, ಕೇಶವ ಶೆಟ್ಟಿ, ಹರೀಶ್ ಪೂಜಾರಿ, ಬ್ರಹ್ಮಾವರದ ಪ್ರವೀಣ್ ಪೂಜಾರಿ, ಚಿಕ್ಕಮಗಳೂರಿನ ಕಲ್ಲಪ್ಪ ಹಂಡಿಬಾಗ್ ಮತ್ತು ಧನ್ಯಶ್ರೀ ಹಾಗೂ ವಿಜಯಪುರದ ದಾನಮ್ಮ ಹತ್ಯೆಯ ಆರೋಪಿಗಳು ಯಾರೆಂದು ತಿಳಿಸುವಿರಾ?' ಎಂದು ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದ್ದಾರೆ.

`ಹಿಂದೂಗಳ ಹತ್ಯೆ ಬಗ್ಗೆ ಕಣ್ಣೀರು ಸುರಿಸುತ್ತಿರುವ ನಳೀನ್ ಕುಮಾರ್ ಕಟೀಲ್ ಅವರೇ, ಹೊನ್ನಾವರದ ಪರೇಶ್ ಮೇಸ್ತಾ ಹತ್ಯೆಯ ಪ್ರಕರಣ ತನಿಖೆಯನ್ನು ಸಿಬಿಐ ನಡೆಸುತ್ತಿದೆ, ನಿಮ್ಮ ಪ್ರಭಾವ ಬೀರಿ ಶೀಘ್ರವಾಗಿ ಈ ಹತ್ಯೆಯ ಅಪರಾಧಿಗಳನ್ನು ಪತ್ತೆಹಚ್ಚಿ ಹಿಂದು ಪರೇಶ್ ಮೇಸ್ತನ ಕುಟುಂಬಕ್ಕೆ ನ್ಯಾಯ ಯಾವಾಗ ಕೊಡಿಸುವಿರಿ?' ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

`ನಾನು ಮುಖ್ಯಮಂತ್ರಿಯಾಗಿದ್ದಾಗ ಹತ್ಯೆಗೀಡಾಗಿದ್ದಾರೆಂದು ಆರೋಪಿಸಿ ನಿಮ್ಮ ಪಕ್ಷ ಕೇಂದ್ರ ಸರಕಾರಕ್ಕೆ ಕಳಿಸಿದ್ದ ಪಟ್ಟಿಯಲ್ಲಿ ಜೀವಂತವಾಗಿ ಇರುವ ಅಶೋಕ್ ಪೂಜಾರಿ ಅವರ ಹೆಸರನ್ನು ಸೇರಿಸಿರುವ ನಿಮ್ಮ ಪಕ್ಷ ತನ್ನ ಬಣ್ಣ ತಾನೇ ಬಯಲು ಮಾಡಿಕೊಂಡು ನಗೆಪಾಟಲಿಗೀಡಾಗಿದ್ದು ನೆನಪಿದೆಯೇ ನಳೀನ್ ಕುಮಾರ್ ಕಟೀಲ್?' ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

'2013ರಿಂದ 2018ರ ಅವಧಿಯಲ್ಲಿ ಕೋಮುಸಂಘರ್ಷದಲ್ಲಿ ಹತ್ಯೆಗೀಡಾಗಿದ್ದ 10 ಹಿಂದುಗಳ ಹತ್ಯೆಯ ಆರೋಪಿಗಳು ಎಸ್ ಡಿಪಿಐ, ಪಿಎಫ್ಐ ಸಂಘಟನೆಯವರಾದರೆ, 11 ಮುಸ್ಲಿಮ್ ಮತ್ತು ಹತ್ತು ಹಿಂದುಗಳ ಹತ್ಯೆಯ ಆರೋಪಿಗಳು ಭಜರಂಗದಳ ಮತ್ತು ಹಿಂದು ಜಾಗರಣಾ ವೇದಿಕೆಯವರು. ಈಗ ಹೇಳಿ ಯಾವುದನ್ನು ನಿಷೇಧಿಸುತ್ತೀರಿ?' ಎಂದು ಸಿದ್ದರಾಮಯ್ಯ ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

`ನಳೀನ್ ಕುಮಾರ್ ಕಟೀಲ್ ಅವರೇ, ಅವರೇ, 2013ರಿಂದ 18ರ ಅವಧಿಯಲ್ಲಿ 24 ಹಿಂದುಗಳ ಹತ್ಯೆಯಾಗಿದೆ ಎಂದು ಹೇಳಿದ್ದೀರಿ. ಕೋಮುಸಂಘರ್ಷದಲ್ಲಿ ಹತ್ಯೆಗೀಡಾದವರು 24 ಅಲ್ಲ, ಹಿಂದು-ಮುಸ್ಲಿಮ್ ಸೇರಿ ಒಟ್ಟು 45. ಈ ಪ್ರಕರಣಗಳನ್ನು ದಾಖಲೆ ಸಮೇತ ವಿವರಿಸಿ ನಮ್ಮ ಪಕ್ಷ ಪ್ರಕಟಿಸಿದ ಪುಸ್ತಕವನ್ನು ಓದಿ ನಿಮ್ಮ ಮನಃಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಿ' ಎಂದು ಸಿದ್ದರಾಮಯ್ಯ ವ್ಯಂಗ್ಯ ಸಲಹೆ ನೀಡಿದ್ದಾರೆ.

.@nalinkateel ಅವರೇ, 2013-18ರ ಅವಧಿಯಲ್ಲಿ 24 ಹಿಂದುಗಳ ಹತ್ಯೆಯಾಗಿದೆ ಎಂದು ಹೇಳಿದ್ದೀರಿ. ಕೋಮುಸಂಘರ್ಷದಲ್ಲಿ ಹತ್ಯೆಗೀಡಾದವರು 24 ಅಲ್ಲ, ಹಿಂದು-ಮುಸ್ಲಿಮ್ ಸೇರಿ ಒಟ್ಟು 45.

ಈ ಪ್ರಕರಣಗಳನ್ನು ದಾಖಲೆ ಸಮೇತ ವಿವರಿಸಿ ನಮ್ಮ ಪಕ್ಷ ಪ್ರಕಟಿಸಿದ ಪುಸ್ತಕವನ್ನು ಓದಿ ನಿಮ್ಮ ಮನಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಿ.
1/7 pic.twitter.com/Cthx6wI5dK

— Siddaramaiah (@siddaramaiah) August 21, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X