ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿಗೆ ಅರ್ಜಿ ಆಹ್ವಾನ
ಉಡುಪಿ, ಆ.21: ಪ್ರಸುತ್ತ ಸಾಲಿನ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಜನರಲ್ ಕೆ ಎಸ್ ತಿಮ್ಮಯ್ಯ ನಗದು ಪ್ರಶಸ್ತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೊಂಬರ್ 31 ಕೊನೆಯ ದಿನ.ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನವರ್ಸತಿ ಇಲಾಖೆ, ಮಂಗಳೂರು ಇವರನ್ನು ಸಂಪರ್ಕಿಸಬಹುದು.
Next Story





