ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಉಡುಪಿ, ಆ.21: ಪ್ರಸ್ತಕ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ನೇರಸಾಲ, ಉದ್ಯಮಶೀಲತಾ ಅಭಿವೃದ್ಧಿ (ಐಎಸ್ಬಿ), ಭೂ ಒಡೆತನ, ಮೈಕ್ರೋ ಕ್ರೆಡಿಟ್ ಹಾಗೂ ಗಂಗಾ ಕಲ್ಯಾಣ ಯೋಜನೆ ಹಾಗೂ ಪರಿಶಿಷ್ಟ ಜಾತಿ ಅಲೆಮಾರಿ, ಅರೆ ಅಲೆೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶದಿಂದ ಸ್ವಯಂ ಉದ್ಯೋಗ ನೇರಸಾಲ, ಐಎಸ್ಬಿ ಮೈಕ್ರೋ ಕ್ರೆಡಿಟ್ ಸಾಲ ಸೌಲಭ್ಯಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ - http://adcl.karnataka.gov.in ಹಾಗೂ -http://adijambava.karnataka.gov.in - ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಬಿ ಬ್ಲಾಕ್, ಕೊಠಡಿ ಸಂಖ್ಯೆ 302, ರಜತಾದ್ರಿ ಮಣಿಪಾಲ-576104, ದೂರವಾಣಿ ಸಂಖ್ಯೆ: 0820-2574884 ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Next Story