2019ನೇ ಸಾಲಿನ ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ
ಉಡುಪಿ, ಆ.21: ಕರ್ನಾಟಕ ಸಾಹಿತ್ಯ ಅಕಾಡೆಮಿಯು 2019ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗಾಗಿ ಈ ಕೆಳಕಂಡ ಪ್ರಕಾರಗಳ ಕನ್ನಡ ಪುಸ್ತಕ ಗಳನ್ನು ಸಲ್ಲಿಸಲು ಅರ್ಜಿಗಳನ್ನು ಆಹ್ವಾನಿಸಿದೆ.
ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾ ಗುವುದು. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2019ರ ಜ.1ರಿಂದ ಡಿ.31ರ ನಡುವೆ ಪ್ರಥಮ ಆವೃತ್ತಿಯಾಗಿ ಪ್ರಕಟಗೊಂಡಿರಬೇಕು. ಕೃತಿಯಲ್ಲಿ ಪ್ರಥಮ ಮುದ್ರಣ 2019 ಎಂದು ಮುದ್ರಿತವಾಗಿರಬೇಕು.
ಕಾವ್ಯ, ನವಕವಿಗಳ ಪ್ರಥಮ ಕವನ ಸಂಕಲನ, ಕಾವ್ಯ ಹಸ್ತ ಪ್ರತಿ-30 ವರ್ಷ ಒಳಗಿರುವ ಯುವಕವಿಗಳು ತಮ್ಮ ಅಪ್ರಕಟಿತ ಪ್ರಥಮ ಕವನ ಸಂಕಲನದ ಹಸ್ತ ಪ್ರತಿಯನ್ನು ಕಳುಹಿಸಿಕೊಡಬೇಕು. ಕಾದಂಬರಿ, ಸಣ್ಣ ಕಥೆ, ನಾಟಕ, ಲಲಿತ ಪ್ರಬಂಧ, ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ/ಆತ್ಮಕಥೆ, ಸಾಹಿತ್ಯ ವಿಮರ್ಶೆ, ಗ್ರಂಥ ಸಂಪಾದನೆ, ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ, ಮಾನವಿಕ, ಸಂಶೋಧನೆ, ವೈಚಾರಿಕ/ಅಂಕಣ ಬರಹ, ಅನುವಾದ-1 ಭಾರತೀಯ ಭಾಷೆಯಿಂದ ಕನ್ನಡಕ್ಕೆ ಅನುವಾದಗೊಂಡ ಕೃತಿ, ಅನುವಾದ-2 ಕನ್ನಡದಿಂದ ಅನ್ಯಭಾಷೆಗೆ ಅನುವಾದ ಗೊಂಡ ಕೃತಿ, ಲೇಖಕರ ಮೊದಲ ಸ್ವತಂತ್ರ ಕೃತಿಗೆ ಬಹುಮಾನ-2019ರಲ್ಲಿ ಪ್ರಕಟವಾದ ಹೊಸ ಬರಹಗಾರರ ಮೊದಲ ಸ್ವತಂತ್ರ ಕೃತಿಯೆಂದು ಖಾತರಿಪಡಿಸುವ ದೃಢೀಕರಣ ಪತ್ರ ಲಗತ್ತಿಸಬೇಕು.
ಪ್ರಕಟವಾದ ಪುಸ್ತಕಗಳ ತಲಾ ನಾಲ್ಕು ಪ್ರತಿಗಳನ್ನು ರಿಜಿಸ್ಟಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ ಎರಡನೇ ಮಹಡಿ, ಜೆ.ಸಿ.ರಸ್ತೆ ಬೆಂಗಳೂರು- 560002 ಇವರಿಗೆ ರಿಜಿಸ್ಟರ್ಡ್ ಅಂಚೆ/ ಕೊರಿಯರ್ ಮೂಲಕ ಅಥವಾ ಸೆ. 30ರೊಳಗೆ ತಲುಪಿಸುವಂತೆ ರಿಜಿಸ್ಟಾರ್ ಕರಿಯಪ್ಪ ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.