Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನವೀನ ಕೃಷಿ ತಂತ್ರಜ್ಞಾನ ರೈತರ...

ನವೀನ ಕೃಷಿ ತಂತ್ರಜ್ಞಾನ ರೈತರ ಸಮಸ್ಯೆಗಳಿಗೆ ಪರಿಹಾರ: ಸಚಿವ ಬಿ.ಸಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ21 Aug 2020 10:11 PM IST
share
ನವೀನ ಕೃಷಿ ತಂತ್ರಜ್ಞಾನ ರೈತರ ಸಮಸ್ಯೆಗಳಿಗೆ ಪರಿಹಾರ: ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು, ಆ .21: ನವೀನ ಕೃಷಿ ತಂತ್ರಜ್ಞಾನ ರೈತರ ಸಮಸ್ಯೆಗಳನ್ನು ಪರಿಹರಿಸಬಲ್ಲದು ಹಾಗೂ ತಂತ್ರಜ್ಞಾನ ಆಧರಿತ ಕೃಷಿ ಕ್ಷೇತ್ರದಲ್ಲಿ ಯುವ ಸಮುದಾಯಕ್ಕೆ ಅವಕಾಶವನ್ನು ಸೃಷ್ಟಿಸಬಲ್ಲದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಇಂದಿಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಶುಕ್ರವಾರ ವಿಕಾಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ `ಕೃಷಿ ನವೋದ್ಯಮ' (ಅಗ್ರಿ ಸ್ಟಾರ್ಟಪ್) ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರು 2014ರಿಂದ ಕೇಂದ್ರ ಸರಕಾರವನ್ನು ಮುನ್ನಡೆಸುತ್ತಿದ್ದು, ಮೋದಿಯವರಿಂದಾಗಿ ದೇಶದಲ್ಲಿ ಸ್ಟಾರ್ಟಪ್‍ಗಳ ಯುಗ ಆರಂಭವಾಯಿತು. 2018ರ ಹೊತ್ತಿಗೆ ದೇಶದಲ್ಲಿ 50 ಸಾವಿರ ನವೋದ್ಯಮಗಳು ಹಾಗೂ ಬಳಿಕ 9,300 ಸ್ಟಾರ್ಟಪ್‍ಗಳು ಪ್ರಾರಂಭವಾದವು. ಇವುಗಳ ಪೈಕಿ 474 ಕೃಷಿ ಉದ್ಯಮಗಳು ಆರಂಭವಾಗಿವೆ ಎಂದರು.

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಕೃಷಿ ಕ್ಷೇತ್ರಕ್ಕೆ ನವಚೈತನ್ಯ ಒದಗಿಸಲು ಕೃಷಿ ಸ್ಟಾರ್ಟಪ್‍ಗಳನ್ನು ಆರಂಭಿಸಿ ರೈತರು ಹಾಗೂ ಗ್ರಾಹಕರಿಗೆ ಅನುಕೂಲ ಕಲ್ಪಿಸಲು ವೇದಿಕೆ ಸೃಷ್ಟಿಸಲಾಗಿದೆ. ಬೆಂಗಳೂರಿನಲ್ಲಿ 4 ಸಾವಿರ ಸ್ಟಾರ್ಟಪ್‍ಗಳನ್ನು ಆರಂಭಿಸಲಾಗುತ್ತಿದೆ. ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳು ಈಗಾಗಲೇ ಆರಂಭಿಕ ನೀತಿಗಳನ್ನು ಹೊರತಂದಿದೆ. ಇದರಿಂದಾಗಿ ವಾರ್ಷಿಕವಾಗಿ 4 ಸಾವಿರ ನವೋದ್ಯಮ ಸೃಷ್ಟಿಸಲು ಅನುಕೂಲವಾಗಿದೆ. ಸ್ಟಾರ್ಟಪ್‍ಗಳು ಯುವಕರಿಗೆ 1.7 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಿದೆ. ಭಾರತದಲ್ಲಿ ಕೃಷಿ ನವೋದ್ಯಮ ಪ್ರಾರಂಭದ ಹಂತದಲ್ಲಿಯೇ ಆಕರ್ಷಿತವಾಗಿರುವುದು ಹೆಮ್ಮೆಯ ವಿಚಾರ. ಅಂಕಿ ಅಂಶಗಳ ಪ್ರಕಾರ ಪ್ರತಿದಿನ 2 ರಿಂದ 3 ಸ್ಟಾರ್ಟಪ್‍ಗಳು ಭಾರತದಲ್ಲಿ ಸ್ಥಾಪನೆಯಾಗುತ್ತಿವೆ. ಅಕ್ಸೆಂಚರ್ ಕಂಪೆನಿಯು ಮಾಡಿದ ಸಮೀಕ್ಷೆಯ ಅಂದಾಜಿನ ಪ್ರಕಾರ, ನಮ್ಮ ದೇಶದಲ್ಲಿ ಅಗ್ರಿ ಸ್ಟಾರ್ಟಪ್‍ಗಳಿಂದ 4.5 ಬಿಲಿಯನ್ ಡಾಲರ್ ಮಾರುಕಟ್ಟೆಯ ಸೃಷ್ಟಿ ಆಗಲಿದೆ ಎಂದು ಅಂದಾಜಿಸಲಾಗಿದೆ ಎಂದು ತಿಳಿಸಿದರು.

ಸ್ಟಾರ್ಟಪ್ ವ್ಯವಸ್ಥೆಗಳನ್ನು ಹೊಂದಿರುವ ವಿಶ್ವದ 20 ಅಗ್ರ ದೇಶಗಳಲ್ಲಿ ಬೆಂಗಳೂರು 15ನೆ ಸ್ಥಾನವನ್ನು ಪಡೆದುಕೊಂಡಿದೆ. ಅಲ್ಲದೆ, ಏಷ್ಯಾ ಖಂಡದಲ್ಲಿ ಸಿಂಗಾಪೂರ್ ಬಳಿಕ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವೆಂದು ಬೆಂಗಳೂರು ಗುರುತಿಸಲ್ಪಟ್ಟಿದೆ. ರಾಜ್ಯ ಜೈವಿಕ ಹಾಗೂ ಸಿರಿಧಾನ್ಯಗಳ ಹಬ್ ಎಂದು ಕರೆಯಲ್ಪಟ್ಟಿದೆ. ಮಧ್ಯಾಹ್ನದ ಬಿಸಿಯೂಟದಲ್ಲಿ ಸಿರಿಧಾನ್ಯವನ್ನು ಪರಿಚಯಿಸಲು ಸರಕಾರ ಚಿಂತನೆ ನಡೆಸಿದೆ. ಇದರಿಂದಾಗಿ ಕೃಷಿಕರಿಗೆ ಇನ್ನಷ್ಟು ಅನುಕೂಲವಾಗಲಿದೆ.

ರಾಜ್ಯದಲ್ಲಿ ಜೀವರ್ಗಿ, ಹಿರಿಯೂರು, ಮಾಲೂರು ಹಾಗೂ ಬಾಗಲಕೋಟೆಯಲ್ಲಿ ಈಗಾಗಲೇ ಮೆಗಾಫುಡ್ ಪಾರ್ಕ್‍ಗಳಿದ್ದು, ಕೇಂದ್ರ ಸರಕಾರದಡಿ ಕೆ.ಆರ್.ಪೇಟೆ ಹಾಗೂ ತುಮಕೂರಿನಲ್ಲಿಯೂ ಮೆಗಾಫುಡ್ ಪಾರ್ಕ್ ಆರಂಭಿಸಲಾಗಿದೆ. ಆ ಮೂಲಕ ಕೃಷಿ ಉತ್ಪಾದನಾ, ಆಹಾರ ಉತ್ಪಾದನಾ ಕ್ಷೇತ್ರಗಳಿಗೆ ರಾಜ್ಯದಲ್ಲಿ ಆದ್ಯತೆ ಕಲ್ಪಿಸಲಾಗಿದೆ. `ಆತ್ಮನಿರ್ಭರ್' ಯೋಜನೆಯಡಿ ಆಹಾರ ಉತ್ಪಾದನಾ ಕೈಗಾರಿಕೆಗಳಿಗೆ ಅನುಕೂಲ ಕಲ್ಪಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಕೃಷಿ ನವೋದ್ಯಮದಲ್ಲಿ ಕೃಷಿ ಉತ್ಪಾದನ ಉದ್ಯಮಿಗಳು ದೇಶಾದ್ಯಂತ ಸಕ್ರಿಯವಾಗಿ ಭಾಗವಹಿಸಿರುವುದು ಸಂತಸ ತಂದಿದೆ. ಕೊರೋನ ಸೋಂಕಿನಿಂದ ಬಿಕ್ಕಟ್ಟಿನ ಅವಧಿಯಲ್ಲಿ ರೈತರು ಬೆಳೆದ ತರಕಾರಿ ಹಣ್ಣು ಸೇರಿದಂತೆ ಕೃಷಿ ಫಸಲುಗಳು ನಾಶವಾಗದಂತೆ ರೈತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಕೋಲ್ಡ್ ಸ್ಟೋರೇಜ್‍ಗಳನ್ನು ಆರಂಭಿಸಲಾಯಿತು. ಸಿಎಂ ಬಿಎಸ್‍ವೈ ಅವರ ಬೆಂಬಲದಿಂದ ಕೃಷಿ ಕ್ಷೇತ್ರದಲ್ಲಿ ರೈತರಿಗೆ ಇನ್ನಷ್ಟು ಅನುಕೂಲ ಕಲ್ಪಿಸುವ ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದರು.

ಕೃಷಿ ಇಲಾಖೆ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಜ್‍ಕುಮಾರ್ ಕತ್ರಿ, ಕೃಷಿ ಇಲಾಖೆ ಆಯುಕ್ತ ಬ್ರಿಜೆಷ್ ಕುಮಾರ್ ದೀಕ್ಷಿತ್ ಸೇರಿದಂತೆ ಹಿರಿಯ ಅಧಿಕಾರಿಗಳ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X