Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ...

ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ

ವಾರ್ತಾಭಾರತಿವಾರ್ತಾಭಾರತಿ21 Aug 2020 10:21 PM IST
share

ಮಂಗಳೂರು, ಆ.21: ಭಾರತ ಚುನಾವಣಾ ಆಯೋಗವು ರಾಷ್ಟ್ರೀಯ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2021ರ ವೇಳಾಪಟ್ಟಿ ಪ್ರಕಟಿಸಿದೆ.

ಮತದಾರರ ಪಟ್ಟಿ ಪೂರ್ವ ಪರಿಷ್ಕರಣೆ ಚಟುವಟಿಕೆ ಆ.10ರಿಂದ ನವೆಂಬರ್ 15ರವರೆಗೆ ನಡೆಯಲಿದೆ. ನ.16ರಂದು ಕರಡು ಮತದಾರರ ಪಟ್ಟಿಯ ಪ್ರಕಟಣೆ, ನ.16ರಿಂದ ಡಿ.15ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದು. ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿಯು 2021ರ ಜ.5ರಂದು ನಡೆಯಲಿದ್ದು, ಅಂತಿಮ ಮತದಾರರ ಪಟ್ಟಿಯು ಜ.15ರಂದು ಪ್ರಕಟಗೊಳ್ಳಲಿದೆ.

ಅಗತ್ಯ ದಾಖಲೆ: ವಯಸ್ಸಿನ ಬಗ್ಗೆ ದಾಖಲೆಗಳು: ಶಾಲಾ ಪ್ರಮಾಣಪತ್ರ, ಜನನ ಪ್ರಮಾಣಪತ್ರ, ಆಧಾರ್ ಕಾರ್ಡ್, ಪಾಸ್‌ಪೋರ್ಟು, ಎಸೆಸೆಲ್ಸಿ/ಪಿಯುಸಿ ಅಂಕಪಟ್ಟಿ, ಪಾನ್ ಕಾರ್ಡ್ ಹಾಗೂ ವೈದ್ಯಕೀಯ ಪ್ರಮಾಣ ಪತ್ರ.

ವಾಸಸ್ಥಳದ ಬಗ್ಗೆ ದಾಖಲೆ: ಪಡಿತರ ಚೀಟಿ, ಗ್ಯಾಸ್ ಸಿಲಿಂಡರ್ ಸ್ವೀಕೃತಿ ರಶೀದಿ, ವಿದ್ಯುತ್ ಬಿಲ್ ಪಾವತಿ, ಬ್ಯಾಂಕ್ ಪಾಸ್‌ಬುಕ್, ಪಾಸ್ ಪೋರ್ಟ್, ವಾಹನ ಚಾಲನ ಪರವಾನಿಗೆ ಪ್ರತಿ, ಬಾಡಿಗೆ ಕರಾರು ಪತ್ರ ಹಾಗೂ ಇನ್ನಿತರ ದಾಖಲೆಗಳು. ಒಂದು ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳು.

ಯಾವುದಕ್ಕೆ ಯಾವ ಅರ್ಜಿ: ನಮೂನೆ-6: 18 ವರ್ಷ ಪೂರೈಸಿದ ಹೊಸ ಮತದಾರರು ಹಾಗೂ ಒಂದು ವಿಧಾನಸಭಾ ಕ್ಷೇತ್ರದಿಂದ ಮತ್ತೊಂದೆಡೆ ವಾಸಸ್ಥಳ ಬದಲಾಯಿಸಿದವರು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು.

ನಮೂನೆ-6ಎ: ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ತಮ್ಮ ಹೆಸರು ಸೇರ್ಪಡೆ ಮಾಡಲು, ನಮೂನೆ-7: ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದು ಹಾಕಲು. ನಮೂನೆ-8: ಹೆಸರು, ತಂದೆಯ ಹೆಸರು, ಮನೆ ವಿಳಾಸ, ವಯಸ್ಸಿಗೆ ಹಾಗೂ ಭಾವಚಿತ್ರಕ್ಕೆ ಸಂಬಂಧಿಸಿದ ದೋಷಗಳಿದ್ದರೆ ಸರಿಪಡಿಸಿಕೊಳ್ಳಲು, ನಮೂನೆ-8ಎ: ಒಂದೇ ವಿಧಾನಸಭಾ ಕ್ಷೇತ್ರದೊಳಗೆ ವಾಸಸ್ಥಳ ಬದಲಾಯಿಸಿದ ಸಂದರ್ಭದಲ್ಲಿ ಸಲ್ಲಿಸಬೇಕಿರುವ ಅರ್ಜಿ.

ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿರುವ ಮತದಾರರ ನೋಂದಣಾಧಿಕಾರಿ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿ ಕಚೇರಿಗೆ ಭೇಟಿ ನೀಡಿ ಪರಿಶೀಲಿಸಬಹುದು. ತಮ್ಮ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳಲ್ಲಿ ಪರಿಶೀಲಿಸಬಹುದು. ವೆಬ್‌ಪೋರ್ಟಲ್ www.ceokarnataka.kar.nic.in www.nvsp.in ಮತ್ತು ಮತದಾರರ ಸಹಾಯವಾಣಿ 1950 ಸಂಖ್ಯೆ ಕರೆಮಾಡಿ ಮಾಹಿತಿ ಪಡೆಯಬಹುದು ಎಂದು ದ.ಕ. ಜಿಲ್ಲಾ ಜಿಲ್ಲಾಧಿಕಾರಿ ಪ್ರಕಟನೆ ತಿಳಿಸಿದೆ.

ಮತದಾರರ ನೋಂದಣಾಧಿಕಾರಿಗಳು:

ಮಂಗಳೂರು ಉತ್ತರ, ದಕ್ಷಿಣ, ಮಂಗಳೂರು, ಬಂಟ್ವಾಳ, ಮೂಡುಬಿದಿರೆ ಕ್ಷೇತ್ರಗಳಿಗೆ ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ (9900111150) ಹಾಗೂ ಬೆಳ್ತಂಗಡಿ, ಪುತ್ತೂರು, ಸುಳ್ಯ ಕ್ಷೇತ್ರಗಳಿಗೆ ಪುತ್ತೂರು ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್(9535618438) ಮತದಾರರ ನೋಂದಣಾಧಿಕಾರಿಗಳಾಗಿದ್ದಾರೆ.
ಸಹಾಯಕ ನೋಂದಣಾಧಿಕಾರಿಗಳು:
* ಬೆಳ್ತಂಗಡಿ: ತಹಶೀಲ್ದಾರರು ಬೆಳ್ತಂಗಡಿ, ಮಹೇಶ್ (9902434583)
* ಮೂಡುಬಿದಿರೆ: ತಹಶೀಲ್ದಾರರು ಮೂಡುಬಿದಿರೆ, ಅನಿತಾಲಕ್ಷ್ಮೀ (7042976487)
* ಮಂಗಳೂರು ನಗರ ಉತ್ತರ: ತಹಶೀಲ್ದಾರರು ಮಂಗಳೂರು ಟಿ.ಜಿ. ಗುರುಪ್ರಸಾದ್ (96114731433)
* ಮಂಗಳೂರು ನಗರ ದಕ್ಷಿಣ: ಕಂದಾಯ ಅಧಿಕಾರಿ, ಮಹಾನಗರ ಪಾಲಿಕೆ ಮಂಗಳೂರು, ವಿಜಯ ಕುಮಾರ್ (9448177302)
* ಮಂಗಳೂರು: ಸಹಾಯಕ ಮತದಾರರ ನೋಂದಣಾಧಿಕಾರಿ-ತಹಶೀಲ್ದಾರರು ಮಂಗಳೂರು ಟಿ.ಜಿ. ಗುರುಪ್ರಸಾದ್ ಮೊಬೈಲ್: 96114731433
* ಬಂಟ್ವಾಳ: ತಹಶೀಲ್ದಾರರು ಬಂಟ್ವಾಳ, ರಶ್ಮಿ (9972061514)
* ಪುತ್ತೂರು: ತಹಶೀಲ್ದಾರರು ಪುತ್ತೂರು, ರಮೇಶ್ ಬಾಬು (94801688694)
* ಸುಳ್ಯ: ತಹಶೀಲ್ದಾರರು ಸುಳ್ಯ, ಅನಂತಶಂಕರ್ (9902541695)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X