ಆ.24ರಂದು ಲೋಕಸೇವಾ ಆಯೋಗದ ಪರೀಕ್ಷೆ: ಕೆಎಸ್ಸಾರ್ಟಿಸಿಯಿಂದ ಹೆಚ್ಚುವರಿ ಬಸ್ ಸೌಲಭ್ಯ
ಬೆಂಗಳೂರು, ಆ.21: ಕರ್ನಾಟಕ ಲೋಕಸೇವಾ ಆಯೋಗವು ಆ.24ರಂದು ಗೆಜೆಟೆಡ್ ಪ್ರೊಬೆಷನರ್ಸ್ ಹುದ್ದೆಗಳ ಪೂರ್ವಭಾವಿ ಪರೀಕ್ಷೆಗಳನ್ನು ನಡೆಸುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಕೆಎಸ್ಸಾರ್ಟಿಸಿ ವತಿಯಿಂದ ಆ.23, 24ರಂದು ಪ್ರಮುಖ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಿಂದ ಪರೀಕ್ಷೆ ನಡೆಯುವ ಕೇಂದ್ರ ಸ್ಥಾನಗಳಿಗೆ ಹೆಚ್ಚುವರಿ ಸಾರಿಗೆ ಸೌಲಭ್ಯವನ್ನು ಕಲ್ಪಿಸುತ್ತಿದೆ.
ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಮಂಗಳೂರು, ಉಡುಪಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲಾ ಕೇಂದ್ರಗಳಿಂದ ಪರೀಕ್ಷಾ ಕೇಂದ್ರಗಳಿಗೆ ಅಭ್ಯರ್ಥಿಗಳ ಸಂಖ್ಯೆಗಳಿಗುಣವಾಗಿ ಹೆಚ್ಚುವರಿ ಬಸ್ ಸೌಲಭ್ಯವನ್ನು ಒದಗಿಸಲಾಗುತ್ತಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
Next Story