Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಹ್ಮದ್ ಹಾಜಿ ಸಾಮರಸ್ಯದ...

ಅಹ್ಮದ್ ಹಾಜಿ ಸಾಮರಸ್ಯದ ಕೊಂಡಿಯಾಗಿದ್ದವರು: ಬಸ್ತಿ ವಾಮನ ಶೆಣೈ

ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ಅವರಿಗೆ ಶ್ರದ್ಧಾಂಜಲಿ ಸಭೆ

ವಾರ್ತಾಭಾರತಿವಾರ್ತಾಭಾರತಿ21 Aug 2020 11:02 PM IST
share
ಅಹ್ಮದ್ ಹಾಜಿ ಸಾಮರಸ್ಯದ ಕೊಂಡಿಯಾಗಿದ್ದವರು: ಬಸ್ತಿ ವಾಮನ ಶೆಣೈ

ಬಂಟ್ವಾಳ, ಆ. 21: ಸರ್ವ ಧರ್ಮಗಳ ಜನರೊಂದಿಗೆ ಸಾಮರಸ್ಯದ ಕೊಂಡಿಯಾಗಿದ್ದ ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ಅವರು ಗ್ರಾಮೀಣ ಪ್ರದೇಶವಾದ ತುಂಬೆ ಗ್ರಾಮದ ಅಭಿವೃದ್ಧಿ ಕುರಿತು ಅತೀವ ಒಲವು ಹೊಂದಿದ್ದರು. ತನ್ನ ಉದ್ಯಮದ ಜೊತೆಗೆ ಬಡವರು, ಸಮಾಜದ ಬಗ್ಗೆ ಚಿಂತಿಸುತ್ತಿದ್ದ ಅವರು ಅದಕ್ಕಾಗಿ ನೆರವು ನೀಡುವ ತುಡಿತ ಹೊಂದಿದ್ದರು ಎಂದು ತುಂಬೆ ಕಾಲೇಜಿನ ಸಂಚಾಲಕ, ವಿಶ್ವ ಕೊಂಕಣಿ ಕೇಂದ್ರದ ಸ್ಥಾಪಕಾಧ್ಯಕ್ಷ ಬಸ್ತಿ ವಾಮನ ಶೆಣೈ ಹೇಳಿದರು. 

ಇತ್ತೀಚೆಗೆ ನಿಧನರಾದ ಬಿ.ಎ. ಗ್ರೂಪ್ ತುಂಬೆ ಹಾಗೂ ಮುಹಿಯುದ್ದೀನ್ ಎಜುಕೇಶನ್ ಟ್ರಸ್ಟ್ ತುಂಬೆ ಇದರ ಸ್ಥಾಪಕರಾದ ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ಅವರಿಗೆ ತುಂಬೆ ಕಾಲೇಜಿನಲ್ಲಿ ಶುಕ್ರವಾರ ಏರ್ಪಡಿಸಲಾದ ಶ್ರದ್ಧಾಂಜಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

1964ರಿಂದ ಅಹ್ಮದ್ ಹಾಜಿ ಮತ್ತು ನನ್ನ ನಡುವೆ ಸ್ನೇಹ ಸಂಬಂಧವಿದೆ. ತುಂಬೆಯ ಅಭಿವೃದ್ಧಿಯ ಕನಸು ಕಾಣುತ್ತಿದ್ದ ಅಹ್ಮದ್ ಹಾಜಿ ಗ್ರಾಮೀಣ ಮಕ್ಕಳಿಗೆ ಉತ್ತಮ ದರ್ಜೆಯ ಶಿಕ್ಷಣ ಸಿಗುವಂತಾಗಲು ತುಂಬೆಯಲ್ಲಿ ತೆರೆದ ಶಾಲಾ, ಕಾಲೇಜು ಶೈಕ್ಷಣಿಕವಾಗಿ ತುಂಬೆಯ ಚಿತ್ರಣವನ್ನೇ ಬದಲಾ ಯಿಸಿದೆ. ದೇವರ ಮೇಲೆ ಅಪಾರವಾದ ಭಕ್ತಿಯನ್ನು ಹೊಂದಿದ್ದ ಅಹ್ಮದ್ ಹಾಜಿ ಅವರು ಆದರ್ಶದ ಜೀವನವನ್ನು ನಡೆಸಿದ್ದಾರೆ. ಇತರ ಧರ್ಮ ಗಳು, ಧರ್ಮ ಗ್ರಂಥಗಳ ಅದ್ಯಯನ ಕೂಡಾ ಮಾಡುತ್ತಿದ್ದರು. ಅವರಂತಹ ಸ್ನೇಹಿತ ಸಿಕ್ಕಿರುವುದು ತನ್ನ ಪುಣ್ಯವಾಗಿದೆ‌ ಎಂದು ಹೇಳಿದರು.

ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ಅವರು ಓರ್ವ ಉದ್ಯಮಿಯಾಗಿ ಗುರುತಿಸುವುದಕ್ಕಿಂತ ಹೆಚ್ಚಾಗಿ ಓರ್ವ ನಿಸ್ವಾರ್ಥ ಸಮಾಜ ಸೇವಕರಾಗಿ ಗುರುತಿಸಿದ್ದಾರೆ. ಸಮುದಾಯ, ಸಮಾಜದ ಬಗ್ಗೆ ನಿರಂತರ ಕಳಕಳಿ ಹೊಂದಿದ್ದ ಅವರು ಸಾಮಾಜಿಕ ನ್ಯಾಯವನ್ನು ಜೀವನುದ್ದಕ್ಕೂ ಅಳವಡಿಸಿದ್ದ ನಾಯಕರಾಗಿದ್ದರು ಎಂದು ಹೇಳಿದರು. 

ಸರ್ವ ಧರ್ಮಗಳ ಪ್ರೀತಿ, ವಿಶ್ವಾಸವನ್ನು ಗಳಿಸಿದ್ದ ಅವರು ಮತೀಯತೆಯನ್ನು ದೂರವಿಟ್ಟು, ಸಾಮರಸ್ಯದ ಗುಣ ನಡೆತೆಯೊಂದಿಗೆ ಬದುಕಿದ ವರು. ಜಾತಿ, ಧರ್ಮ, ಭಾಷೆಯ ಹೆಸರಿನಲ್ಲಿ ಮನುಷ್ಯ ಮನುಷ್ಯ ನಡುವೆ ಸಂಶಯ ಮೂಡುತ್ತಿರುವ ಇಂದಿನ ಕಾಲದಲ್ಲಿ ಎಲ್ಲಾ ಧರ್ಮದ ಜನರು ನನ್ನವರು ಮತ್ತು ನಮ್ಮವರು ಎನ್ನುವ ಸಿದ್ಧಾಂತದಲ್ಲಿ ಬಾಳಿದವರು ಎಂದು ಹೇಳಿದರು.‌

ಹಿಂದೂವಾಗಿ ಹುಟ್ಟಿದರೆ ಬಸ್ತಿ ವಾಮನ ಶೆಣೈ ಅವರ ಹಾಗೆ ಹುಟ್ಟಬೇಕು. ಮುಸ್ಲಿಮರಾಗಿ ಹುಟ್ಟಿದರೆ ಅಹ್ಮದ್ ಹಾಜಿ ಹಾಗೆ ಹುಟ್ಟಬೇಕು ಎಂದು ನಾನು ಈ ಹಿಂದಿನಿಂದಲೂ ಹೇಳುತ್ತಾ ಬಂದಿದ್ದೇನೆ. ಈ ಇಬ್ಬರನ್ನು ಪಡೆದ ತುಂಬೆಯ ಜನತೆ ಪುಣ್ಯವಂತರು. ಅಹ್ಮದ್ ಹಾಜಿ ಅವರ ಅಗಲಿಕೆ ವೈಯಕ್ತಿಕವಾಗಿ ನನಗೆ ತುಂಬಾ ನೋವು ತಂದಿದೆ. ಇಂದು ಅವರು ನಮ್ಮೊಂದಿಗೆ ಇಲ್ಲದಿರಬಹುದು. ಆದರೆ ಅವರ ಆದರ್ಶ ನಮ್ಮ ನಡುವೆ ಇದೆ. ಯುವ ಜನತೆ ಆ ಆದರ್ಶದಲ್ಲಿ ಬದುಕಬೇಕು ಎಂದು ಅವರು ಸಲಹೆ ನೀಡಿದರು. 

ಯೆನೆಪೊಯ ಯುನಿವರ್ಸಿಟಿಯ ಚಾನ್ಸಿಲರ್ ಅಬ್ದುಲ್ಲಾ ಕುಂಞಿ ಮಾತನಾಡಿ, ನಮ್ಮ ಬಾವ ಬಿ.ಅಹ್ಮದ್ ಹಾಜಿ ನಿಧನ ನಮ್ಮ ಕುಟುಂಬ ಹಾಗೂ ಸಮಾಜಕ್ಕೆ ತುಂಬಲಾರದ ನಷ್ಟ ಉಂಟು ಮಾಡಿದೆ. ಕುಟುಂಬದ ಹಿರಿಯರೂ, ಮಾರ್ಗದರ್ಶಕರೂ ಅಗಿದ್ದ ಅವರು ಮನುಷ್ಯತ್ವಕ್ಕೆ ಬೆಲೆ ಕಟ್ಟುತ್ತಿದ್ದ ಮಹಾನ್ ಮಾನವತಾವಾದಿ ಆಗಿದ್ದರು ಎಂದು ಹೇಳಿದರು.

ಶಾಸಕ ಯು.ಟಿ.ಖಾದರ್, ಅಹ್ಮದ್ ಹಾಜಿ ಅವರ ಪುತ್ರ ಸಲಾಂ, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್, ಎಸ್.ಡಿ.ಪಿ.ಐ. ಕರ್ನಾಟಕ ಅಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ, ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಮಾತನಾಡಿದರು. ವೇದಿಕೆಯಲ್ಲಿ ಅಹ್ಮದ್ ಹಾಜಿ ಅವರ ಪುತ್ರ, ಗಲ್ಫ್ ಯುನಿವರ್ಸಿಟಿ ಸಂಸ್ಥಾಪಕ ತುಂಬೆ ಮೊಯ್ದಿನ್ , ಅಶ್ರಫ್ ಉಪಸ್ಥಿತರಿದ್ದರು.

ತುಂಬೆ ಕಾಲೇಜಿನ ಪ್ರಾಂಶುಪಾಲ ಕೆ.ಎನ್.ಗಂಗಾಧರ ಆಳ್ವ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತುಂಬೆ ಶಾಲಾ ವಿದ್ಯಾರ್ಥಿ ಅಫ್ನಾನ್ ಕಿರಾಅತ್ ಪಠಿಸಿದರು. ತುಂಬೆ ಕಾಲೇಜಿನ ಉಪನ್ಯಾಸಕ ದಿನೇಶ್ ಶೆಟ್ಟಿ ಧನ್ಯವಾದ ಗೈದರು. ತುಂಬೆ ಕಾಲೇಜಿನ ವ್ಯವಸ್ಥಾಪಕರಾದ ಕಬೀರ್ ಅವರು ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಮೌನ ಪ್ರಾಥನೆ ಸಲ್ಲಿಸಲಾಯಿತು‌.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X