ಬೆಂಗಳೂರು: ಸರಕು ಸಾಗಾಣಿಕೆ ವಾಹನಗಳ ಸಂಚಾರಕ್ಕೆ ಸಮಯ ನಿಗದಿ

ಸಾಂದರ್ಭಿಕ ಚಿತ್ರ
ಬೆಂಗಳೂರು, ಆ.21: ಲಾಕ್ಡೌನ್ ತೆರವಾದ ಕಾರಣ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬೆಳಗ್ಗೆ 11ರಿಂದ ಸಂಜೆ 4 ಗಂಟೆಯ ವರೆಗೆ ಹಾಗೂ ರಾತ್ರಿ 10ರಿಂದ ಬೆಳಗ್ಗೆ 7 ಗಂಟೆಯವರೆಗೆ ಮಾತ್ರ ಭಾರೀ ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.
ಲಾಕ್ಡೌನ್ ಸಮಯದಲ್ಲಿ ಅಗತ್ಯ ವಸ್ತುಗಳ ಪೂರೈಕೆಗಾಗಿ ಸರಕು ಸಾಗಣೆ ವಾಹನಗಳ ಮುಕ್ತ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಈಗ ನಗರ ಸಂಚಾರ ವ್ಯವಸ್ಥೆ ಸಹಜ ಸ್ಥಿತಿಗೆ ಮರಳಿದ್ದು, ನಿಗದಿತ ಸಮಯದಲ್ಲಿ ಮಾತ್ರ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.
ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸುವುದಾಗಿ ಜಂಟಿ ಪೊಲೀಸ್ ಕಮಿಷನರ್ (ಸಂಚಾರ) ಬಿ.ಆರ್.ರವಿಕಾಂತೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





