ಸಫರ್ ಸ್ಪೋಟ್ಸ್ - ಕಲ್ಚರಲ್ ಅಸೋಸಿಯೇಶನ್, ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ ಆಶ್ರಯದಲ್ಲಿ ರಕ್ತದಾನ ಶಿಬಿರ

ಉಳ್ಳಾಲ : ಸಫರ್ ಸ್ಪೋಟ್ಸ್ ಮತ್ತು ಕಲ್ಚರಲ್ ಅಸೋಸಿಯೇಶನ್ ಹಾಗೂ ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ ಇದರ ಜಂಟಿ ಆಶ್ರಯದಲ್ಲಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಸಹಯೋಗದಲ್ಲಿ 74ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೃಹತ್ ರಕ್ತದಾನ ಶಿಬಿರವು ಸಫರ್ ಸ್ಪೋಟ್ಸ್ ಮತ್ತು ಕಲ್ಚರಲ್ ಅಸೋಸಿಯೇಶನ್ ನಲ್ಲಿ ನಡೆಯಿತು.
ಸಫರ್ ಸ್ಪೋಟ್ಸ್ ಮತ್ತು ಕಲ್ಚರಲ್ ಅಸೋಸಿಯೇಶನ್ ಗೌರವಾಧ್ಯಕ್ಷ ಯು.ಎಚ್ ಫಾರೂಕ್, ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ ಇದರ ಅಧ್ಯಕ್ಷ ನಝೀರ್ ಹುಸೈನ್ ಮಂಚಿಲ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಂಚಿಲ ಸಫರ್ ಸ್ಪೋಟ್ಸ್ ಮತ್ತು ಕಲ್ಚರಲ್ ಅಸೋಸಿಯೇಶನ್ ಹಾಗೂ ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ , ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇದರ ಪದಾಧಿಕಾರಿಗಳನ್ನು ಗೌರವಿಸಲಾಯಿತು.
ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇದರ ರಕ್ತನಿಧಿಯ ಸಿಬ್ಬಂದಿಗಳಾದ ಅಂಥೋನಿ, ಅಶೋಕ್, ಮಂಚಿಲ ಜುಮಾ ಮಸೀದಿಯ ಅಧ್ಯಕ್ಷರಾದ ಮಕ್ಸೂದ್, ಬ್ಲಡ್ ಹೆಲ್ಪ್ ಕೇರ್ ಕರ್ನಾಟಕದ ಗೌರವಾಧ್ಯಕ್ಷ ಇಫ್ತಿಕಾರ್ ಅಹ್ಮದ್, ಸಂಚಾಲಕ ಶಂಶುದ್ದೀನ್ ಬಳ್ಕುಂಜೆ, ಪ್ರಧಾನ ಕಾರ್ಯದರ್ಶಿ ಸಫ್ವಾನ್ ಕಲಾಯಿ, ಯೊತೆ ಕಾರ್ಯದರ್ಶಿ ತಸ್ಲೀಂ ಹರೇಕಳ, ಮಾದ್ಯಮ ಕಾರ್ಯದರ್ಶಿ ಜಲೀಲ್ ಮುಕ್ಕಚ್ಚೇರಿ, ಶಿಬಿರದ ಸಂಯೋಜಕರಾದ ಖಾದರ್ ಮುಂಚೂರು, ರಾಫಿಝ್ ಕೃಷ್ಣಾಪುರ, ನಿರ್ದೇಶಕರಾದ ಅಲ್ಮಾಝ್ ಉಳ್ಳಾಲ ಉಪಸ್ಥಿತರಿದ್ದರು.
ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ ಇದರ ಕೋಶಾಧಿಕಾರಿ ಸತ್ತಾರ್ ಪುತ್ತೂರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.







