ಅಪ್ರಾಪ್ತೆಯ ಅತ್ಯಾಚಾರ ಆರೋಪ: ಯುವಕನ ಬಂಧನ

ಸಾಂದರ್ಭಿಕ ಚಿತ್ರ
ವಿರಾಜಪೇಟೆ, ಆ.22: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಮಾಡಿರುವ ಆರೋಪದಲ್ಲಿ ವಿರಾಜಪೇಟೆಯ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ವಿರಾಜಪೇಟೆಯ ಅಯ್ಯಪ್ಪ ಬೆಟ್ಟ ನಿವಾಸಿ ಶಿವರಾಜ್ (27) ಎಂಬಾತ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಮಾಡಿ, ನಂತರ ಆಕೆಯ ಮೇಲೆ ಹಲ್ಲೆ ಮಾಡಿರುವ ವೀಡಿಯೋವನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿ ಬೆದರಿಕೆ ಒಡ್ಡಿದ್ದಾನೆ ಎಂದು ಆರೋಪಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಶಿವರಾಜ್ ನನ್ನು ಶುಕ್ರವಾರ ರಾತ್ರಿ ವಿರಾಜಪೇಟೆ ಟೌನ್ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯ ವಿರುದ್ಧ ಅತ್ಯಾಚಾರ, ಮಾನ ಭಂಗ ಯತ್ನ, ಫೋಕ್ಸೊ, ಮಕ್ಕಳ ದೌರ್ಜನ್ಯ ಕಾಯ್ದೆ ಹಾಗೂ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿರುವುದಾಗಿ ತಿಳಿದುಬಂದಿದೆ.
Next Story





