Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಐಎಫ್ಎಫ್ ಜಿಝಾನ್ ಕರ್ನಾಟಕ ಚಾಪ್ಟರ್...

ಐಎಫ್ಎಫ್ ಜಿಝಾನ್ ಕರ್ನಾಟಕ ಚಾಪ್ಟರ್ ವತಿಯಿಂದ ರಕ್ತದಾನ ಶಿಬಿರ

ವಾರ್ತಾಭಾರತಿವಾರ್ತಾಭಾರತಿ22 Aug 2020 11:12 PM IST
share
ಐಎಫ್ಎಫ್ ಜಿಝಾನ್ ಕರ್ನಾಟಕ ಚಾಪ್ಟರ್ ವತಿಯಿಂದ ರಕ್ತದಾನ ಶಿಬಿರ

ಜಿಝಾನ್ : ಇಂಡಿಯಾ ಫ್ರೆಟರ್ನಿಟಿ ಫೋರಂ (ಐಎಫ್ಎಫ್) ಸೌದಿ ಅರೇಬಿಯಾದಾದ್ಯಂತ  ಹಮ್ಮಿಕೊಂಡ ಪ್ಲಾಸ್ಮಾ ಹಾಗೂ ರಕ್ತದಾನ ಅಭಿಯಾನದ ಅಂಗವಾಗಿ ಐಎಫ್ಎಫ್ ಜಿಝಾನ್ ಕರ್ನಾಟಕ ಚಾಪ್ಟರ್ ಹಾಗೂ ಸಬ್ಯಾ ಜನರಲ್ ಆಸ್ಪತ್ರೆ ಜಿಝಾನ್ ಇದರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವು ಸಬ್ಯಾ ಜನರಲ್ ಆಸ್ಪತ್ರೆಯ ಬ್ಲಡ್ ಬ್ಯಾಂಕ್ ನಲ್ಲಿ ನಡೆಯಿತು.

ಜಿಝಾನ್ ವಲಯದಲ್ಲಿ ಇಂಡಿಯಾ ಫ್ರೆಟರ್ನಿಟಿ ಫೋರಂನ ಕಾರ್ಯಕರ್ತರು ಸೇರಿದಂತೆ 65 ಮಂದಿ ರಕ್ತದಾನ ಮಾಡಿದರು. ಈ ಸಂದರ್ಭ  ಅನಿವಾಸಿ ಮಹಿಳೆಯೋರ್ವರೂ ಸಹ ಸ್ವಯಂ ಪ್ರೇರಿತರಾಗಿ  ರಕ್ತದಾನ ಮಾಡಿದ್ದು, ಸಬಿಯಾ ಜನರಲ್ ಆಸ್ಪತ್ರೆಯ ಆರೋಗ್ಯ ಇಲಾಖೆಯ  ಅಧಿಕಾರಿಗಳಿಂದ ಪ್ರಶಂಸೆಗೆ ಪಾತ್ರವಾಗಿದೆ.

ಶಿಬಿರದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಐಎಫ್ಎಫ್ ಜಿಝಾನ್ ಕರ್ನಾಟಕ ಚಾಪ್ಟರ್ ಅಧ್ಯಕ್ಷ ಇಕ್ಬಾಲ್ ಕೂಳೂರು ''ಸಕಲ ಸುರಕ್ಷಾ ಮಾರ್ಗಗಳನ್ನು ಅನುಸರಿಸಿಕೊಂಡು ಕೋವಿಡ್ ಭೀತಿಯ ಪರಿಸ್ಥಿತಿಯಲ್ಲೂ ಸಾಮಾಜಿಕ ಚಿಂತನೆಯಲ್ಲಿ ತೊಡಗಿಸಿಕೊಂಡಿರುವ ಯುವಕರ ಸಾಮಾಜಿಕ ಬದ್ಧತೆ ಹಾಗೂ ಕಾರ್ಯ ವೈಖರಿಯನ್ನು ಶ್ಲಾಘಿಸಿದರು.

ಈ ಸಂದರ್ಭ ಐಎಫ್ಎಫ್ ಸೌದಿ ಅರೇಬಿಯಾ ಇದರ ಅಸಿರ್ ಪ್ರಾಂತ್ಯದ ಅಧ್ಯಕ್ಷ ಸಲೀಂ ಗುರುವಾಯನಕೆರೆ ರಕ್ತದಾನದ ಮಹತ್ವ ಹಾಗೂ ದಾನಿಗಳಿಗೆ ಸಿಗುವ ಆರೋಗ್ಯ ಫಲಿತಾಂಶಗಳ ಕುರಿತಾಗಿ ಮಹತ್ವದ ಸಂದೇಶ ನೀಡಿದರು. ಐಎಫ್ಎಫ್ ಜಿಝಾನ್ ಕರ್ನಾಟಕ ಚಾಪ್ಟರ್ ಕಾರ್ಯದರ್ಶಿ ಹನೀಫ್ ಜೋಕಟ್ಟೆ ಹಾಗೂ ಇಂಡಿಯನ್ ಸೋಷಿಯಲ್ ಫೋರಂ ಜಿಝಾನ್ ಇದರ ನಾಯಕರುಗಳಾದ ಅಝೀಝ್ ಮೂಡಬಿದ್ರೆ ಹಾಗೂ ನೌಶಾದ್ ಕಲಂದರ್ ಕರ್ನಿರೆ  ಉಪಸ್ಥಿತರಿದ್ದರು.

ಜಿಝಾನ್ ವಲಯದಲ್ಲಿ ಪ್ರಸ್ತುತ ಸಂದರ್ಭದಲ್ಲಿ ರಕ್ತದ ಕೊರತೆಯನ್ನು ನೀಗಿಸುವಲ್ಲಿ ಸಹಕರಿಸಿದ ಇಂಡಿಯಾ ಫ್ರೆಟರ್ನಿಟಿ ಫೋರಂ (ಐಎಫ್ಎಫ್)ಸಂಸ್ಥೆಗೆ ಸಬಿಯಾ ಜನರಲ್ ಹಾಸ್ಪಿಟಲ್ ಜಿಝಾನ್ ವಲಯ ಇದರ ಪ್ರಧಾನ ಕಾರ್ಯನಿರ್ವಾಹಕರಾದ ಗಾಲಿಬ್ ಹೂದಾನ್   ಪ್ರಮಾಣ ಪತ್ರ  ಹಸ್ತಾಂತರಿಸಿದರು.

 ಸವಾದ್ ವಳವೂರು (ಐಎಫ್ಎಫ್ ಬೈಶ್ ಘಟಕ) ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X