Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಉಡುಪಿ ಕೋವಿಡ್-19 ಆಸ್ಪತ್ರೆಯ ಎಡವಟ್ಟು:...

​ಉಡುಪಿ ಕೋವಿಡ್-19 ಆಸ್ಪತ್ರೆಯ ಎಡವಟ್ಟು: ಕೋವಿಡ್‌ಗೆ ಬಲಿಯಾದ ವ್ಯಕ್ತಿಯ ಮೃತದೇಹ ಅದಲುಬದಲು

ಅಂತ್ಯಕ್ರಿಯೆ ವೇಳೆ ಬೆಳಕಿಗೆ

ವಾರ್ತಾಭಾರತಿವಾರ್ತಾಭಾರತಿ23 Aug 2020 1:32 PM IST
share
​ಉಡುಪಿ ಕೋವಿಡ್-19 ಆಸ್ಪತ್ರೆಯ ಎಡವಟ್ಟು: ಕೋವಿಡ್‌ಗೆ ಬಲಿಯಾದ ವ್ಯಕ್ತಿಯ ಮೃತದೇಹ ಅದಲುಬದಲು

ಕುಂದಾಪುರ, ಆ.23: ಉಡುಪಿ ಜಿಲ್ಲಾಸ್ಪತ್ರೆಯ ಆರೋಗ್ಯ ಸಿಬ್ಬಂದಿಗಳ ಎಡವಟ್ಟಿನಿಂದ ಕೊರೋನಾ ಸೋಂಕಿತ ವ್ಯಕ್ತಿಯ ಮೃತದೇಹದ ಬದಲು, ಬೇರೆ ಯುವಕನ ಮೃತದೇಹವನ್ನು ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಸಲು ಮುಂದಾಗಿರುವ ವಿಚಿತ್ರ ಘಟನೆ ಕುಂದಾಪುರದಲ್ಲಿ ರವಿವಾರ ನಡೆದಿದೆ.

ಕೋಟೇಶ್ವರ ಸಮೀಪದ ನೇರಂಬಳ್ಳಿಯ 60 ವರ್ಷ ಪ್ರಾಯದ ವ್ಯಕ್ತಿ, ಬೆನ್ನು ನೋವಿನ ಚಿಕಿತ್ಸೆಗಾಗಿ ಕುಂದಾಪುರ ಆಸ್ಪತ್ರೆಗೆ ದಾಖಲಾಗಿದ್ದರು. ಜು.30ರಂದು ಕೊರೋನಾ ಪಾಸಿಟಿವ್ ದೃಢ ಪಟ್ಟ ಹಿನ್ನೆಲೆಯಲ್ಲಿ ಆ ವ್ಯಕ್ತಿಯನ್ನು ಉಡುಪಿ ಕೋವಿಡ್ ಆಸ್ಪತ್ರೆಗೆ ವರ್ಗಾಯಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆ ವ್ಯಕ್ತಿ ಇಂದು ಬೆಳಗ್ಗೆ ಮೃತಪಟ್ಟರು ಎಂದು ತಿಳಿದು ಬಂದಿದೆ.

ಮನೆಯವರ ಒತ್ತಾಯದಂತೆ ಮೃತದೇಹವನ್ನು ಅಂತ್ಯಕ್ರಿಯೆ ನಡೆಸಲು ಕುಂದಾಪುರ ಸಂಗಮ್ ಸಮೀಪದ ಸ್ಮಶಾನಕ್ಕೆ ತರ ಲಾಗಿತ್ತು. ಸ್ಮಶಾನದಲ್ಲಿ ಮೃತದೇಹದ ಅಂತಿಮ ದರ್ಶನ ಪಡೆಯಲು ಅವಕಾಶ ನೀಡುವಂತೆ ಮನೆ ಯವರು ಒತ್ತಾಯಿಸಿದರು. ಅದರಂತೆ ಐದು ಮಂದಿಗೆ ಮೃತದೇಹ ನೋಡಲು ಅವಕಾಶ ಕಲ್ಪಿಸಲಾಯಿತು. ಆಗ ಮೃತದೇಹ ಅದಲು ಬದಲು ಆಗಿರುವುದು ಬೆಳಕಿಗೆ ಬಂತು. ಅಲ್ಲಿ 60ವರ್ಷ ಪ್ರಾಯದ ವ್ಯಕ್ತಿಯ ಬದಲು ಯುವಕನ ಮೃತದೇಹವನ್ನು ತರಲಾಗಿತ್ತು.

ಸ್ಮಶಾನದಲ್ಲಿಯೇ ಪ್ರತಿಭಟನೆ: ಆಸ್ಪತ್ರೆಯ ಬೇಜಾವಬ್ದಾರಿತನದ ವಿರುದ್ಧ ಮೃತರ ಮನೆಯವರು ಹಾಗೂ ಸಾರ್ವಜನಿಕರು ಸ್ಮಶಾನದಲ್ಲಿಯೇ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

‘ನಮ್ಮ ತಂದೆ ಆರೋಗ್ಯವಾಗಿದ್ದರು. ಅವರನ್ನು ಕರೆದುಕೊಂಡು ಹೋಗಿ ಇವರು ಕೊಂದು ಹಾಕಿದ್ದಾರೆ. ಈಗ ಯಾರದ್ದೋ ಮೃತದೇಹ ತಂದು ನಮ್ಮನ್ನು ಮೋಸ ಮಾಡುತ್ತಿದ್ದಾರೆ. ಕೊರೋನ ವಿಷಯದಲ್ಲಿ ಎಲ್ಲರೂ ಗೋಲ್ ಮಾಲ್ ಮಾಡುತ್ತಿದ್ದಾರೆ. ಈ ರೀತಿ ಮೃತದೇಹವನ್ನು ಅದಲು ಬದಲು ಮಾಡಿದವರು ಯಾವ ರೀತಿ ಚಿಕಿತ್ಸೆ ನೀಡಿರಬಹುದು’ ಎಂದು ಮನೆಯವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ದಿಕ್ಕಾರ ಘೋಷಣೆ ಕೂಗುತ್ತ ನ್ಯಾಯ ದೊರಕಿಸುವಂತೆ ಒತ್ತಾಯಿಸಿದ ಪ್ರತಿ ಭಟನಕಾರರು, ಜಿಲ್ಲಾಧಿಕಾರಿ ಸ್ಥಳಕ್ಕೆ ಬರುವಂತೆ ಆಗ್ರಹಿಸಿದರು. ಬಳಿಕ ಸ್ಥಳಕ್ಕೆ ಆಗಮಿಸಿದ ಕುಂದಾಪುರ ಸಹಾಯಕ ಆಯುಕ್ತ ರಾಜು, ತಾಲೂಕು ಆರೋಗ್ಯಾಧಿಕಾರಿ ನಾಗಭೂಷಣ್ ಉಡುಪ ಪ್ರತಿಭಟನಕಾರರನ್ನು ಸಮಾಧಾನ ಪಡಿಸಿದರು. ನಂತರ ನೇರಂಬಳ್ಳಿ ವ್ಯಕ್ತಿಯ ಮೃತದೇಹವನ್ನು ಸ್ಮಶಾನಕ್ಕೆ ತರಲಾಯಿತು. ಅಲ್ಲಿ ಮನೆಯವರ ಎದುರಿಗೆ ಮೃತದೇಹವನ್ನು ಪರೀಕ್ಷಿಸಿ ನಂತರ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

ಕಾರ್ಕಳದ ಯುವಕನ ಮೃತದೇಹ !

ಬೇರೆ ಕಾಯಿಲೆಯಿಂದ ಮೃತಪಟ್ಟ ಕಾರ್ಕಳದ ಯುವಕ ಹಾಗೂ ಕೊರೋನ ದಿಂದ ಮೃತಪಟ್ಟ ಕುಂದಾಪುರದ ವೃದ್ಧರ ಮೃತದೇಹ ಅದಲು ಬದಲಾಗಿದೆ. ಕಾರ್ಕಳಕ್ಕೆ ಹೋಗಬೇಕಾಗಿದ್ದ ಮೃತದೇಹ ಕುಂದಾಪುರಕ್ಕೆ ಕಳುಹಿಸಿಕೊಡಲಾಗಿದೆ ಎಂದು ಜಿಲ್ಲಾಸ್ಪತ್ರೆಯ ಸರ್ಜನ್ ಡಾ.ಮದುಸೂಧನ್ ನಾಯಕ್ ತಿಳಿಸಿದ್ದಾರೆ.

ವೃದ್ಧ ಉಡುಪಿ ಟಿ.ಎಂ.ಎ. ಪೈ ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಆ ಆಸ್ಪತ್ರೆಯಲ್ಲಿ ಶವಗಾರ ಇಲ್ಲದ ಕಾರಣ ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ಮೃತದೇಹ ವನ್ನು ಇಂದು ಬೆಳಗ್ಗೆ ತಂದು ಇಡಲಾಗಿತ್ತು. ಇದೇ ಶವಗಾರದಲ್ಲಿ ಕಾರ್ಕಳದ ಯುವಕನ ಮೃತದೇಹ ಕೂಡ ಇತ್ತು. ನಮ್ಮ ಸಿಬ್ಬಂದಿಗಳಿಗೆ ಕೊರೋನದಿಂದ ಮೃತಪಟ್ಟ ಮೃತದೇಹ ಯಾವುದು ಎಂಬುದಾಗಿ ತಿಳಿಯದೆ ಯುವಕನ ಮೃತ ದೇಹವನ್ನು ಕುಂದಾಪುರಕ್ಕೆ ತೆಗೆದುಕೊಂಡು ಹೋಗಿದ್ದಾರೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಚಾಲಕನ ತಪ್ಪಿನಿಂದ ಬದಲಾವಣೆ: ಡಿಸಿ

‘ಆ್ಯಂಬುಲೆನ್ಸ್ ಚಾಲಕನ ತಪ್ಪಿನಿಂದ ಕುಂದಾಪುರದ ಕೋವಿಡ್ ಸೋಂಕಿತ ವ್ಯಕ್ತಿಯ ಮೃತದೇಹ ಬದಲಾವಣೆ ಆಗಿದೆ. ಕಾರ್ಕಳಕ್ಕೆ ತೆಗೆದು ಕೊಂಡು ಹೋಗ ಬೇಕಾಗಿದ್ದ ಮೃತದೇಹವನ್ನು, ತಪ್ಪಿನಿಂದಾಗಿ ಕುಂದಾಪುರಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಗಳ ಅಂತ್ಯಸಂಸ್ಕಾರ ಕುರಿತು ರಚಿಸಲಾಗಿರುವ ತಂಡವು ಈ ರೀತಿಯ ಮೃತದೇಹಗಳ ಬದಲಾವಣೆ ಆಗದಂತೆ ಅತ್ಯಂತ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕೆಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚನೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X