ಗಾಂಜಾ ಸೇವನೆ: ಇಬ್ಬರು ವಶಕ್ಕೆ
ಕುಂದಾಪುರ, ಆ.23: ಕೋಟೇಶ್ವರ ಪೇಟೆ ಬಳಿ ಆ.20ರಂದು ಗಾಂಜಾ ಸೇವಿಸುತ್ತಿದ್ದ ಇಬ್ಬರನ್ನು ಕುಂದಾಪುರ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೋಟೇಶ್ವರ ಅಂಕದಕಟ್ಟೆಯ ಶರತ್ ಕುಮಾರ್(24) ಹಾಗೂ ಖಾರ್ವಿ ಕೇರಿಯ ಆದಿತ್ಯ ಖಾರ್ವಿ(28) ಎಂಬವರನ್ನು ವಶಕ್ಕೆ ಪಡೆದು ಮಣಿಪಾಲ ಕೆಎಂಸಿಯ ಪೊರೆನ್ಸಿಕ್ ಮೆಡಿಸಿನ್ ವಿಭಾಗದ ಮುಂದೆ ಹಾಜರುಪಡಿಸಿ ವೈದ್ಯಕೀಯ ಪರೀಕ್ಷೆ ನಡೆಸಿದ್ದು, ವರದಿಯಲ್ಲಿ ಆರೋಪಿಗಳು ಗಾಂಜಾ ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story





