ಬೈಕ್ ನ ನಂಬರ್ ಪ್ಲೇಟ್ ಗೆ ಬಟ್ಟೆ ಕಟ್ಟಿ ಪ್ರಯಾಣ; 7500 ರೂ. ದಂಡ
ಬೆಂಗಳೂರು, ಆ.23: ಬೈಕಿನ ನಂಬರ್ ಪ್ಲೇಟ್ ಬಟ್ಟೆ ಅಳವಡಿಸಿಕೊಂಡು ಸಂಚಾರ ನಿಯಮ ಉಲ್ಲಂಘನೆ ಮಾಡಿದ ಆರೋಪದಡಿ 7,500 ರೂ. ದಂಡ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.
ಇಲ್ಲಿನ ಬನಶಂಕರಿ ಸಂಚಾರಿ ಪೊಲೀಸ್ ಠಾಣೆಯ ವ್ಯಾಪ್ತಿಯ ಹೆರಿಗೆ ಆಸ್ಪತ್ರೆ ಜಂಕ್ಷನ್ ಬಳಿ ಬೈಕ್ ನ ಸಂಖ್ಯೆ ಕಾಣದಂತೆ ಬಟ್ಟೆಯಲ್ಲಿ ಮರೆಮಾಚಿ ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿರುವ ಬಗ್ಗೆ ಯಡಿಯೂರು ಜಂಕ್ಷನ್ ಬಳಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಸಂಚಾರಿ ಪೊಲೀಸರಿಗೆ ತಿಳಿಸಿದ್ದಾರೆ.
ಬಳಿಕ ಕಾರ್ಯಾಚರಣೆ ನಡೆಸಿದ ಸಂಚಾರ ಪೊಲೀಸರು ಬೈಕ್ ನಿಲ್ಲಿಸಿ ಪರಿಶೀಲನೆ ಮಾಡಿದ್ದು, ಈ ವೇಳೆ 19 ಸಂಚಾರಿ ನಿಯಮ ಉಲ್ಲಂಘನೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ತದನಂತರ, ನಿಯಮ ಉಲ್ಲಂಘಿಸಿದ ಸವಾರನಿಗೆ 7,500 ರೂ. ದಂಡ ವಿಧಿಸಲಾಗಿದೆ.
Next Story





