Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಫೋನ್ ಕದ್ದಾಲಿಕೆ ಆರೋಪ ಕಾಂಗ್ರೆಸ್ ನಾಯಕರ...

ಫೋನ್ ಕದ್ದಾಲಿಕೆ ಆರೋಪ ಕಾಂಗ್ರೆಸ್ ನಾಯಕರ ಹತಾಶಭಾವನೆಗೆ ಹಿಡಿದ ಕೈಗನ್ನಡಿ: ಬಿ.ವೈ.ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ23 Aug 2020 10:21 PM IST
share
ಫೋನ್ ಕದ್ದಾಲಿಕೆ ಆರೋಪ ಕಾಂಗ್ರೆಸ್ ನಾಯಕರ ಹತಾಶಭಾವನೆಗೆ ಹಿಡಿದ ಕೈಗನ್ನಡಿ: ಬಿ.ವೈ.ವಿಜಯೇಂದ್ರ

ಬೆಂಗಳೂರು, ಆ.23: ದೂರವಾಣಿ ಕದ್ದಾಲಿಕೆ ಆರೋಪ ಕಾಂಗ್ರೆಸ್ ನಾಯಕರ ಹತಾಶಭಾವನೆಗೆ ಹಿಡಿದ ಕೈಗನ್ನಡಿಯಾಗಿದ್ದು ಗಲಭೆ ಕುರಿತು ಸತ್ಯ ಶೋಧನೆ ಬದಲು ಪಕ್ಷದ ಅಂತರಾಳ ಶೋಧನೆ ಮಾಡಿಕೊಳ್ಳಲಿ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರವಿವಾರ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಘಟನೆಯಲ್ಲಿ ಕಾಂಗ್ರೆಸ್ ನಾಯಕರು ಸತ್ಯಶೋಧನಾ ಸಮಿತಿಯನ್ನು ಮಾಡಿಕೊಂಡಿದ್ದಾರೆ. ಆದರೆ ಎಲ್ಲೋ ಒಂದು ಕಡೆ ಅವರು ತಮ್ಮ ಮನಸ್ಸನ್ನು, ಅಂತರಾಳವನ್ನು ಅರ್ಥಮಾಡಿಕೊಳ್ಳುವ ಆತ್ಮಶೋಧನಾ ಸಮಿತಿಯನ್ನು ಮಾಡುವುದು ಒಳ್ಳೆಯದು ಎಂದು ಟೀಕಿಸಿದರು.

ಕಾಂಗ್ರೆಸ್ ಪಕ್ಷದ ಆಂತರಿಕ ಕಚ್ಚಾಟವನ್ನು ಮುಚ್ಚಿಕೊಳ್ಳಲು ಸಮಾಜವಿರೋಧಿ ಶಕ್ತಿಯನ್ನು ಬಳಸಿಕೊಂಡು ಈ ಮಟ್ಟಕ್ಕೆ ಇಳಿದಿರುವುದು ಸರಿಯಲ್ಲ. ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲಿ ತಲೆಯೆತ್ತಿಕೊಂಡು ಓಡಾಡಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ, ಬೇರೆ ಬೇರೆ ವಿಚಾರಗಳನ್ನು ಎತ್ತಿಕೊಂಡು ರಾಜ್ಯ ಸರಕಾರಕ್ಕೆ ಮಸಿ ಬಳಿಯುವ ಕೆಲಸವನ್ನು ಮಾಡಲು ಹೊರಟಿದ್ದಾರೆ ಎಂದು ದೂರಿದರು.

ರಾಜ್ಯ ಸರಕಾರದ ವಿರುದ್ಧ ಜನತೆಯಲ್ಲಿ ತಪ್ಪು ಭಾವನೆ ಮೂಡಿಸುವ ಕೆಲಸಕ್ಕೆ ಕಾಂಗ್ರೆಸ್ ಪಕ್ಷದ ಮುಖಂಡರು ಮುಂದಾಗಿದ್ದಾರೆ. ಇದು ಯಾರೂ ಕೂಡ ಒಪ್ಪುವಂಥದ್ದಲ್ಲ. ರಾಜ್ಯದ ಜನತೆಯನ್ನು ಮೂರ್ಖರನ್ನಾಗಿ ಮಾಡಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ, ಆದರೆ ಇದೆಲ್ಲಾ ನಡೆಯುವುದಿಲ್ಲ ಎಂದು ಹರಿಹಾಯ್ದರು.

ಕಾಂಗ್ರೆಸ್ ನಾಯಕರಿಗೆ ಎಲ್ಲೋ ಒಂದು ಕಡೆ ಹತಾಶ ಮನೋಭಾವನೆ ಕಾಡುತ್ತಿದೆ. ಅವರ ನಾಯಕರ ಹೇಳಿಕೆ ನೋಡಿದರೆ ನಗಬೇಕೋ ಬೇಡವೋ ಗೊತ್ತಾಗುತ್ತಿಲ್ಲ. ದೂರವಾಣಿ ಕದ್ದಾಲಿಕೆ ಸೇರಿದಂತೆ ಬೇರೆ ಬೇರೆ ರೀತಿಯಲ್ಲಿ ಸರಕಾರದ ವಿರುದ್ಧ ಹಲವು ಆರೋಪಗಳ ಹೇಳಿಕೆ ನೀಡುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿಯೂ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾಗಿರುವ ನಡೆ ಖಂಡನೀಯ ಎಂದರು.

ಇತ್ತೀಚೆಗೆ ಡಿ.ಜೆ.ಹಳ್ಳಿ ಗಲಭೆ ವೇಳೆ ರಾಜ್ಯದ ಜನತೆಯ ಮುಂದೆ ಕಾಂಗ್ರೆಸ್ ಪಕ್ಷ ಬೆತ್ತಲಾಗಿದೆ. ಹಾಗಾಗಿ ಈಗ ದೂರವಾಣಿ ಕದ್ದಾಲಿಕೆ ಆರೋಪದ ಹೇಳಿಕೆ ಕೊಡುವ ಮೂಲಕ ತಮ್ಮ ಪಕ್ಷವನ್ನು ರಾಜ್ಯದಲ್ಲಿ ಚಾಲ್ತಿಯಲ್ಲಿಡುವ ಪ್ರಯತ್ನವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ ಎಂದು ಅಪಾದಿಸಿದರು. ಕಾಂಗ್ರೆಸ್ ಪಕ್ಷದ ನಾಯಕರು ಆಡಳಿತ ನಡೆಸಿದ್ದಾರೆ, ಕೊರೋನ ಸಂದರ್ಭದಲ್ಲಿ ಜವಾಬ್ದಾರಿಯುತ ಪ್ರತಿಪಕ್ಷವಾಗಿ ಕೆಲಸ ಮಾಡದೆ ಸರ್ಕಾರವನ್ನು ಟೀಕಿಸುತ್ತಾ ಕಾಲ ಕಳೆಯುವುದು ಎಷ್ಟು ಸರಿ ಎಂದು ವಿಜಯೇಂದ್ರ ಪ್ರಶ್ನಿಸಿದರು.

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಬೆಂಗಳೂರಿಗೆ ಬಂದ ಸಂದರ್ಭದಲ್ಲಿ ಪಕ್ಷದ ಚಟುವಟಿಕೆಗಳು ಮುಂದೆ ಯಾವ ರೀತಿ ಇರಬೇಕು, ಕೊರೋನ ಇರುವ ಸಂದರ್ಭದಲ್ಲಿ ಯಾವ ರೀತಿ ನಮ್ಮ ಪಕ್ಷ ಸಂಘಟನೆ ಮಾಡಬೇಕು ಎನ್ನುವ ದೃಷ್ಟಿಕೋನದಿಂದ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಜೊತೆ ಚರ್ಚೆ ಮಾಡಲಿದ್ದಾರೆ ಎಂದು ಬಿ.ವೈ.ವಿಜಯೇಂದ್ರ ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X