ಪೋನ್ ಕದ್ದಾಲಿಕೆ ಬಗ್ಗೆ ನ್ಯಾಯಾಂಗ ತನಿಖೆಯಾಗಲಿ: ದಿನೇಶ್ ಗುಂಡೂರಾವ್

ಬೆಂಗಳೂರು, ಆ. 23: ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆಯ ಬಳಿಕ ಕಾಂಗ್ರೆಸ್ ನಾಯಕರ ಪೋನ್ ಕದ್ದಾಲಿಕೆ ಮಾಡಲಾಗಿದ್ದು, ಈ ಸಂಬಂಧ ನ್ಯಾಯಾಂಗ ತನಿಖೆಯಾಗಬೇಕು ಎಂದು ಶಾಸಕ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.
ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿ ಅವರು, ರಾಜ್ಯ ಬಿಜೆಪಿ ಮುಖಂಡರ ವಿರುದ್ಧ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತೀವ್ರ ವಾಗ್ದಾಳಿ ನಡೆಸಿದರು. ಪೋನ್ ಕದ್ದಾಲಿಕೆ ಮಾಡುವುದು ಅಲ್ಲದೆ, ಬಿಜೆಪಿಗರು ಕಾಂಗ್ರೆಸ್ ಪಕ್ಷದ ಮೇಲೆ ಇಲ್ಲಸಲ್ಲದ ಆರೋಪ ಮಾಡ್ತಿದ್ದಾರೆ ಎಂದು ಹರಿಹಾಯ್ದರು
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈಗಾಗಲೇ ಈ ವಿಚಾರವಾಗಿ ಮಾತನಾಡಿದ್ದಾರೆ. ನಮ್ಮ ಮುಖಂಡರ ಫೋನ್ ಕದ್ದಾಲಿಕೆಯಾಗಿದೆ. ಈ ಬಗ್ಗೆ ಹೈಕೋರ್ಟ್ ಹಾಲಿ ನ್ಯಾಯಮೂರ್ತಿಗಳ ಮೂಲಕ ತನಿಖೆ ನಡೆಸಬೇಕು. ಗೃಹ ಸಚಿವರು ಮನಸೋ ಇಚ್ಛೆ ಮಾತನಾಡುತ್ತಾರೆ. ಬಾಯಿ ಬಿಟ್ರೆ ಬರೀ ಕಾಂಗ್ರೆಸಿಗರ ಮೇಲೆ ಗೂಬೆ ಕೂರಿಸುತ್ತಾರೆ. ಆಧಾರ ರಹಿತ ಆರೋಪ ಮಾಡುವುದು ಸರಿಯಲ್ಲ ಎಂದರು.
Next Story





