Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಂಗ್ಲೆಂಡ್‌ಗೆ ಆಸ್ಟ್ರೇಲಿಯ ಕ್ರಿಕೆಟ್...

ಇಂಗ್ಲೆಂಡ್‌ಗೆ ಆಸ್ಟ್ರೇಲಿಯ ಕ್ರಿಕೆಟ್ ತಂಡ ಪಯಣ

ವಾರ್ತಾಭಾರತಿವಾರ್ತಾಭಾರತಿ23 Aug 2020 11:07 PM IST
share
ಇಂಗ್ಲೆಂಡ್‌ಗೆ ಆಸ್ಟ್ರೇಲಿಯ ಕ್ರಿಕೆಟ್ ತಂಡ ಪಯಣ

ಮೆಲ್ಬೋರ್ನ್, ಆ.23: ಆಸ್ಟ್ರೇಲಿಯ ಕ್ರಿಕೆಟ್ ತಂಡ ರವಿವಾರ ಇಂಗ್ಲೆಂಡ್ ಪ್ರವಾಸ ಕೈಗೊಂಡಿದೆ. ಉಭಯ ತಂಡಗಳು ಪ್ರೇಕ್ಷಕರಿಲ್ಲದ ಸ್ಟೇಡಿಯಂಗಳಲ್ಲಿ, ಜೈವಿಕ ಸುರಕ್ಷಿತ ಶಿಷ್ಟಾಚಾರದೊಂದಿಗೆ ತಲಾ 3 ಪಂದ್ಯಗಳ ಏಕದಿನ ಹಾಗೂ ಟ್ವೆಂಟಿ-20 ಅಂತರ್‌ರಾಷ್ಟ್ರೀಯ ಸರಣಿಯನ್ನು ಆಡಲು ತಯಾರಿ ನಡೆಸಿವೆ.

ಜಾಗತಿಕ ಮಟ್ಟದಲ್ಲಿ ಕೊರೋನ ವೈರಸ್ ಹಾವಳಿ ಆರಂಭವಾದ ಬಳಿಕ ಇದೇ ಮೊದಲ ಬಾರಿ ಆಸ್ಟ್ರೇಲಿಯ ಕ್ರಿಕೆಟ್ ತಂಡ ತನ್ನ ದೇಶದಿಂದ ಹೊರಗೆ ಪ್ರಯಾಣ ಬೆಳೆಸಿದೆ.

ನ್ಯೂಝಿಲ್ಯಾಂಡ್ ವಿರುದ್ಧ ನಿಗದಿಯಾಗಿದ್ದ ಏಕದಿನ ಸರಣಿ ರದ್ದಾದ ಬಳಿಕ ಆಸ್ಟ್ರೇಲಿಯ ಮಾರ್ಚ್ 13ರಿಂದ ಯಾವುದೇ ಪಂದ್ಯ ಆಡಿಲ್ಲ. ನಾಯಕ ಸ್ಟೀವ್ ಸ್ಮಿತ್ ಸಿಡ್ನಿಯಿಂದಪರ್ತ್‌ಗೆ ತೆರಳಿದರು. ಅಲ್ಲಿಂದ ಚಾರ್ಟರ್ಡ್ ವಿಮಾನದಲ್ಲಿ ಆಸ್ಟ್ರೇಲಿಯ ಕ್ರಿಕೆಟ್ ತಂಡ ದೊಂದಿಗೆ ಲಂಡನ್‌ಗೆ ಪ್ರಯಾಣಿಸಿದರು. ಸ್ಮಿತ್ ಕಳೆದ ವರ್ಷ ಚೆಂಡು ವಿರೂಪ ಗೊಳಿಸಿದ ಪ್ರಕರಣದಲ್ಲಿ 12 ತಿಂಗಳ ನಿಷೇಧ ಶಿಕ್ಷೆ ಅನುಭವಿಸಿದ ನಂತರ ಇಂಗ್ಲೆಂಡ್‌ನಲ್ಲಿ ಕ್ರಿಕೆಟ್ ಪಂದ್ಯ ಆಡಿದಾಗ ಇಂಗ್ಲೆಂಡ್ ಅಭಿಮಾನಿಗಳು ಸ್ಮಿತ್‌ರನ್ನು ನಿಂದಿಸಿದ್ದರು. ಆ್ಯಶಸ್ ಸರಣಿಯಲ್ಲಿ 110ರ ಸರಾಸರಿಯಲ್ಲಿ ಒಟ್ಟು 774 ರನ್ ಗಳಿಸಿದ್ದ ಸ್ಮಿತ್ ತನ್ನನ್ನು ನಿಂದಿಸಿದವರಿಗೆ ತಕ್ಕ ಉತ್ತರವನ್ನೇ ನೀಡಿದ್ದರು.

ಆಸ್ಟ್ರೇಲಿಯದ 21 ಸದಸ್ಯರಿರುವ ತಂಡ ಲಂಡನ್‌ಗೆ ತೆರಳಿದ್ದು, ಎರಡು ವಾರಗಳ ಕ್ವಾರಂಟೈನ್ ಸಮಯದಲ್ಲಿ ಕನಿಷ್ಠ ಐದು ಅಂತರ್-ತಂಡ ಪಂದ್ಯಗಳನ್ನು ಆಡಲಿದೆ. ಕಟ್ಟುನಿಟ್ಟಿನ ಜೈವಿಕ ಸುರಕ್ಷಿತ ವ್ಯವಸ್ಥೆ ಇರುವ ಸೌತಾಂಪ್ಟನ್‌ಗೆ ಆಸ್ಟ್ರೇಲಿಯ ತಂಡ ತೆರಳಲಿದೆ.

ಆಟಗಾರರು ಗಾಲ್ಫ್ ಆಡಬಹುದು ಆದರೆ, ಡ್ರಿಂಕ್ಸ್ ಅಥವಾ ಊಟಕ್ಕಾಗಿ ಹೊಟೇಲ್‌ನ್ನು ತೊರೆಯುವಂತಿಲ್ಲ. ಯಾವುದೇ ಬಯೋ ಸೆಕ್ಯೂರಿಟಿ ಉಲ್ಲಂಘನೆಯು ಸರಣಿಯನ್ನು ಗೊಂದಲಕ್ಕೆ ತಳ್ಳಬಹುದು.

ಟಿ-20 ಸರಣಿಯ ಮೊದಲ ಪಂದ್ಯವು ಸೆಪ್ಟಂಬರ್ 4ರಂದು ಸೌತಾಂಪ್ಟನ್‌ನ ರೋಸ್‌ಬೌಲ್‌ನಲ್ಲಿ ನಡೆಯಲಿದೆ. ಏಕದಿನ ಸರಣಿಯು ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫೋರ್ಡ್‌ನಲ್ಲಿ ಸೆಪ್ಟಂಬರ್ 10ರಿಂದ ಆರಂಭವಾಗಲಿದೆ.

​

share
ವಾರ್ತಾಭಾರತಿ
ವಾರ್ತಾಭಾರತಿ
Next Story
X