ಪತ್ರ ಬರೆದವರು ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ : ಕಾಂಗ್ರೆಸ್‌ನ ಹಿರಿಯ ನಾಯಕರ ವಿರುದ್ಧ ರಾಹುಲ್ ಗರಂ

ಹೊಸದಿಲ್ಲಿ, ಆ.24: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಇಂದು ಸೋನಿಯಾ ಗಾಂಧಿ ಅವರು ಹಂಗಾಮಿ ಅಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದ ಬೆನ್ನಿಗೆ ಮಧ್ಯಪ್ರವೇಶಿಸಿದ ರಾಹುಲ್ ಗಾಂಧಿ ನಾಯಕತ್ವವನ್ನು ಟೀಕಿಸಿ ಪತ್ರ ಬರೆದಿದ್ದ 20 ಕ್ಕೂಅಧಿಕ ಉನ್ನತ ನಾಯಕರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟಿನ ಸ್ಥಿತಿಯಲ್ಲಿದ್ದಾಗ, ಕಾಂಗ್ರೆಸ್ ಅಧ್ಯಕ್ಷೆ(ಸೋನಿಯಾ ಗಾಂಧಿ)ಅನಾರೋಗ್ಯದಲ್ಲಿದ್ದಾಗ ಈ ಪತ್ರವನ್ನು ಬರೆದಿರುವುದೇಕೆ? ಈ ಪತ್ರ ಬರೆದವರು ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ರಾಹುಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್‌ನ 26 ಉನ್ನತ ನಾಯಕರು ಪೂರ್ಣಕಾಲಿಕ ನಾಯಕತ್ವದ ಬೇಡಿಕೆ ಇಟ್ಟು ಬರೆದ ಪತ್ರ ಸೋರಿಕೆಯಾಗಿ ಭಾರೀ ವಿವಾದ ಸೃಷ್ಟಿಯಾಗಿರುವುದರಿಂದ ರಾಹುಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Next Story





