Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತಬ್ಲೀಗಿ ಜಮಾಅತ್ ಸದಸ್ಯರ ವಿರುದ್ಧ ಎಫ್...

ತಬ್ಲೀಗಿ ಜಮಾಅತ್ ಸದಸ್ಯರ ವಿರುದ್ಧ ಎಫ್ ಐಆರ್ ರದ್ದು: ಬಾಂಬೆ ಹೈಕೋರ್ಟ್ ತೀರ್ಪಿಗೆ ಪಾಪ್ಯುಲರ್ ಫ್ರಂಟ್ ಸ್ವಾಗತ

ವಾರ್ತಾಭಾರತಿವಾರ್ತಾಭಾರತಿ24 Aug 2020 4:13 PM IST
share

ಬೆಂಗಳೂರು : ವಿದೇಶಿ ತಬ್ಲೀಗ್ ಜಮಾಅತ್ ಸದಸ್ಯರ ವಿರುದ್ಧದ ಎಫ್ ಐಆರ್ ರದ್ದು ಮಾಡಿರುವ ಬಾಂಬೆ ಹೈಕೋರ್ಟ್ ತೀರ್ಪನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಅಧ್ಯಕ್ಷ ಒಎಮ್ಎ ಸಲಾಂ ಸ್ವಾಗತಿಸಿದ್ದಾರೆ.

ನ್ಯಾಯಮೂರ್ತಿಗಳಾದ ಟಿ.ವಿ. ನಲವಾಡೆ ಮತ್ತು ಸೆವ್ಲಿಕರವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠದ ತೀರ್ಪು ಐತಿಹಾಸಿಕ. ಭಾರತೀಯ ನ್ಯಾಯಾಂಗದ ಸ್ವಾತಂತ್ರ್ಯದ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿರುವಂತಹ ಈ ಸಂದರ್ಭದಲ್ಲಿ ಇಂತಹ ತೀರ್ಪು ಹೊರಬಿದ್ದಿರುವುದು ಭರವಸೆಯ ಹೊಸ ಗಾಳಿ ಬೀಸಿದಂತಾಗಿದೆ. ಇದು ಭಾರತದ ಸಂವಿಧಾನದ ಮೂಲತತ್ವಗಳಾದ ನ್ಯಾಯ, ಸತ್ಯ ಹಾಗೂ ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ಅಂಶಗಳಲ್ಲಿ ರಾಜಿಯಾಗದ ಬದ್ಧತೆಯನ್ನು ಪ್ರದರ್ಶಿಸಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ದೇಶದಲ್ಲಿ ನಡೆಯುವ ಎಲ್ಲ ತಪ್ಪುಗಳಿಗೆ ತಾವೇ ಹೊಣೆ ಎಂಬ ಭಾವನೆ ಇಡೀ ಮುಸ್ಲಿಮ್ ಸಮುದಾಯದ ನಡುವೆ ಬೆಳೆಯುತ್ತಿದೆ  ಎಂಬ ಅಂಶವನ್ನು ಕೋರ್ಟ್ ಸರಿಯಾಗಿಯೇ ಗುರುತಿಸಿದೆ. ಈ ಬಾರಿ ಮಾತ್ರ ದೇಶದಲ್ಲಿ ರೋಗ ಹರಡುವವರು ಎಂಬಂತೆ ಬಿಂಬಿಸುವ ಮೂಲಕ, ಅವರನ್ನು ಅನ್ಯಲೋಕದಿಂದ ಬಂದವರಂತೆ ಮತ್ತು ದುಷ್ಟರಂತೆ ಚಿತ್ರಿಸಲಾಗಿತ್ತು. ಈ ಪ್ರಕ್ರಿಯೆಯಲ್ಲಿ ತಬ್ಲೀಗ್ ಜಮಾಅತ್  ಅನ್ನು ಹರಕೆಯ ಕುರಿ ಮಾಡಲಾಗಿತ್ತು. ದುರದೃಷ್ಟಕರವೆಂದರೆ, ನಮ್ಮ ದೇಶದಲ್ಲಿ ಮಾತ್ರ ಸಾಂಕ್ರಾಮಿಕ ರೋಗಕ್ಕೆ ಕೋಮು ಬಣ್ಣ ಬಳಿಯಲಾಯಿತು ಮತ್ತು ರಾಜಕೀಯಗೊಳಿಸಲಾಯಿತು. ಇದು ಭಾರತದ ಘನತೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾನಿಯೆಸಗಿತು ಎಂದು ಅವರು ತಿಳಿಸಿದ್ದಾರೆ.

ನ್ಯಾಯಪೀಠ ಪ್ರಸ್ತಾಪಿಸಿರುವ ಅಂಶಗಳು ಕೋಮುವಾದಿ ರಾಜಕಾರಣಕ್ಕೆ ದೊಡ್ಡ ಹೊಡೆತವಾಗಿದೆ. ಮಾಧ್ಯಮದ ಒಂದು ವರ್ಗ ನಿಭಾಯಿಸಿದ ಪಾತ್ರದ ಕುರಿತೂ ತೀರ್ಪು ಗಮನ ಸೆಳೆದಿದೆ. ಮಾಧ್ಯಮಗಳು ಈ ಸಂದರ್ಭವನ್ನು ಇಸ್ಲಾಮಾಫೋಬಿಯಾ ಹರಡಲು ಬಳಸಿಕೊಂಡವು. ಇಂತಹ ಅಪಪ್ರಚಾರವು ಭಯ, ಸಂಶಯ, ದ್ವೇಷವನ್ನು ಹುಟ್ಟುಹಾಕಿರುವುದರಲ್ಲಿ ಯಾವುದೇ ಸಂಶಯವಿಲ್ಲ. ದೇಶಾದ್ಯಂತ ಅಮಾಯಕ ಬೀದಿಬದಿ ಮುಸ್ಲಿಂ ವ್ಯಾಪಾರಸ್ಥರು, ಮುಸ್ಲಿಂ ಹಾದಿಹೋಕರನ್ನು ಗುರಿ ಮಾಡಲಾಯಿತು. ಈ ತೀರ್ಪು ನ್ಯಾಯದ ಮೇಲಿನ ನಂಬಿಕೆ ಮರುಸ್ಥಾಪಿಸುವಂತೆ ಮಾಡಿದೆ ಎಂದು ಅವರು ಹೇಳಿದ್ದಾರೆ.

ಅಪಪ್ರಚಾರ, ದ್ವೇಷ ಭಾಷಣಕ್ಕಾಗಿ ಮಾಧ್ಯಮಗಳು ಮತ್ತು ವ್ಯಕ್ತಿಗಳ ವಿರುದ್ಧ ಹಲವಾರು ವ್ಯಕ್ತಿಗಳು ಮತ್ತು ಸಂಘಟನೆಗಳು ಪ್ರಕರಣ ದಾಖಲಿಸಿವೆ. ಈ ತೀರ್ಪಿನ ಆಧಾರದಲ್ಲಿ ಅಂತಹವರ ವಿರುದ್ಧ ಕೋರ್ಟ್ ಗಳು ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಶಾಂತಿ ಹಾಗೂ ಕೋಮು ಸೌಹಾರ್ದತೆ ಉಳಿಸಬೇಕು ಎಂಬುದಾಗಿ ಪಾಪ್ಯುಲರ್ ಫ್ರಂಟ್ ಮನವಿ ಮಾಡುತ್ತದೆ ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X