Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಇನ್ನು ಮುಂದೆ ಶಾಲಾ- ಕಾಲೇಜು ಪಠ್ಯದಲ್ಲೇ...

ಇನ್ನು ಮುಂದೆ ಶಾಲಾ- ಕಾಲೇಜು ಪಠ್ಯದಲ್ಲೇ ಕೌಶಲ್ಯ ತರಬೇತಿ: ಡಿಸಿಎಂ ಅಶ್ವತ್ಥನಾರಾಯಣ

ವಾರ್ತಾಭಾರತಿವಾರ್ತಾಭಾರತಿ24 Aug 2020 5:36 PM IST
share
ಇನ್ನು ಮುಂದೆ ಶಾಲಾ- ಕಾಲೇಜು ಪಠ್ಯದಲ್ಲೇ ಕೌಶಲ್ಯ ತರಬೇತಿ: ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು, ಆ.24: ರಾಜ್ಯದಲ್ಲಿ ಕೌಶಲ್ಯಪೂರ್ಣ ಮಾನವ ಸಂಪನ್ಮೂಲ ಸೃಷ್ಟಿ ಹಾಗೂ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಶಾಲಾ- ಕಾಲೇಜು ಪಠ್ಯದಲ್ಲಿಯೆ ಕೌಶಲ್ಯ ತರಬೇತಿ ವಿಷಯವನ್ನು ಸೇರಿಸಲಾಗುತ್ತದೆ ಎಂದು ಕೌಶಲ್ಯಾಭಿವೃದ್ಧಿ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಸೋಮವಾರ ನಗರದ ಮಲ್ಲೇಶ್ವರಂ ಒಳಾಂಗಣ ಕ್ರೀಡಾಂಗಣದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ನಾರಾಯಣ ತರಬೇತಿ ಸಂಸ್ಥೆಗಳ ಸಹಯೋಗದಲ್ಲಿ ತೆರೆಯಲಾಗಿರುವ ‘ಮಲ್ಲೇಶ್ವರಂ ಕೌಶಲ್ಯ ಕೇಂದ್ರ’ದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಇವತ್ತು ಕೌಶಲ್ಯವಿರುವುದರ ಜತೆಗೆ, ಆ ಕೌಶಲ್ಯಕ್ಕೆ ತಕ್ಕಂತೆ ಮಾರುಕಟ್ಟೆಯಲ್ಲಿ ನೌಕರಿ ಸಿಗುತ್ತದೆಯೇ ಎಂಬುದು ಬಹಳ ಮುಖ್ಯವಾದ ವಿಚಾರ. ಹೀಗಾಗಿ ಜಾಬ್ ಮಾರುಕಟ್ಟೆಗೆ ತಕ್ಕ ಹಾಗೆ, ಅಂದರೆ ಕೈಗಾರಿಕೆಗಳಿಗೆ ಅಗತ್ಯವಿರುವ ದಿಕ್ಕಿನಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗಾಂಕ್ಷಿಗಳಿಗೆ ತರಬೇತಿ ನೀಡಲಾಗುವುದು ಎಂದು ಅವರು ನುಡಿದರು.

ಹಿಂದಿನಿಂದ ಇದೇ ರೀತಿಯ ವೈರುಧ್ಯವನ್ನು ನಾವು ಗಮನಿಸುತ್ತಾ ಬಂದಿದ್ದೇವೆ. ಕೆಲಸಗಳೇ ಬೇರೆ ಇರುತ್ತವೆ. ಅದಕ್ಕೆ ಬೇಕಾದ ಕುಶಲ ಮಾನವ ಸಂಪನ್ಮೂಲ ಲಭ್ಯ ಇರುವುದಿಲ್ಲ. ಓದಿದ್ದೇ ಬೇರೆ, ಸಿಗುವ ಕೆಲಸಗಳೇ ಬೇರೆ. ಇದರಿಂದ ದಕ್ಷತೆ ಇರುವುದಿಲ್ಲ ಎಂಬುದು ಸಾಬೀತಾಗಿದೆ. ಇಂಥ ಅಂತರದಿಂದ ನಿರುದ್ಯೋಗ ಹೆಚ್ಚುತ್ತಲೇ ಹೋಗುತ್ತಿದೆ. ಇದನ್ನು ನಿವಾರಿಸಲು ಸರಕಾರ ಪಠ್ಯದಲ್ಲೇ ಕೌಶಲ್ಯಕ್ಕೆ ಸಂಬಂಧಿಸಿದ ವಿಷಯವನ್ನು ಅಡಕಗೊಳಿಸಲು ಮುಂದಾಗಿದೆ ಎಂದು ಅವರು ಹೇಳಿದರು.

ಶಿಕ್ಷಣದ ಹಂತದಲ್ಲೇ ಅಗತ್ಯವಾದ ಕುಶಲತೆಯನ್ನು ಹೊಂದಬೇಕಾಗುತ್ತದೆ. ಉದ್ಯೋಗದ ನಂತರ ಅದನ್ನು ಯಾರೂ ಹೇಳಿಕೊಡುವ ಸನ್ನಿವೇಶ ಇರುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಕೋವಿಡ್ ಪೆಟ್ಟು ಕೊಟ್ಟಿದೆ: ಕೋವಿಡ್ ಮಹಾಮಾರಿಯಿಂದಾದ ಬಹಳ ಉದ್ಯಮಗಳು ನಷ್ಟಕ್ಕೆ ತುತ್ತಾಗಿ ಅನೇಕ ಯುವಕ, ಯುವತಿಯರು ಕೆಲಸ ಕಳೆದುಕೊಂಡಿದ್ದು, ಭವಿಷ್ಯದ ಬಗ್ಗೆ ಚಿಂತೆಗೀಡಾಗಿದ್ದಾರೆ. ಅಂತಹ ಅನೇಕ ಯುವಜನರಿಗೆ ಅಗತ್ಯ ಕೌಶಲ್ಯದ ಕೊರತೆಯಿದ್ದು, ಸೂಕ್ತವಾದ ಹೊಸ ಕೆಲಸ ಹುಡುಕಿಕೊಳ್ಳಲು ಅವರು ಪರದಾಡುತ್ತಿದ್ದಾರೆ. ಇಂಥವರ ನೆರವಿಗೆ ಸರಕಾರ ಧಾವಿಸಿದೆ. ಕೋವಿಡ್ ನಂತರ ಉಂಟಾಗಿರುವ ಉದ್ಯೋಗ ನಷ್ಟವನ್ನು ಸರಕಾರ ಸರಿಪಡಿಸಲಿದೆ ಎಂದು ಅಶ್ವತ್ಥ ನಾರಾಯಣ ಭರವಸೆ ನೀಡಿದರು.

ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳೆರಡೂ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿವೆ. ಔದ್ಯೋಗಿಕವಾಗಿ ಆಕಾಂಕ್ಷಿಗಳಿಗೆ ಸಹಾಯವಾಗುವ ಹಲವು ಯೋಜನೆಗಳನ್ನು ಹಮ್ಮಿಕೊಂಡಿವೆ. ಅಂತಹುದೇ ಒಂದು ಯೋಜನೆ ಇದಾಗಿದೆ. ಕೋವಿಡ್‍ನಿಂದ ಸಂಕಷ್ಟಕ್ಕೆ ತುತ್ತಾಗಿ ಉದ್ಯೋಗ ವಂಚಿತರಾದ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಯುವಕ-ಯುವತಿಯರಿಗೆ ಕೌಶಲ್ಯ ತರಬೇತಿ ನೀಡುವ ಸಲುವಾಗಿ ‘ಮಲ್ಲೇಶ್ವರಂ ಕೌಶಲ್ಯ ಕೇಂದ್ರ’ವನ್ನು ಆರಂಭಿಸಲಾಗಿದೆ ಎಂದು ಅವರು ಹೇಳಿದರು.

ಮುಖ್ಯವಾಗಿ ಈ ಕೇಂದ್ರದಲ್ಲಿ ಪ್ರಾರಂಭಿಕವಾಗಿ ಬ್ಯಾಂಕಿಂಗ್, ಹಣಕಾಸು ಸೇವೆ, ವಿಮಾ ಸೇವೆ, ಲೆಕ್ಕ ನಿರ್ವಹಣೆ, ಐಟಿ ಸೆಕ್ಯೂರಿಟಿ ವಿಶ್ಲೇಷಣೆ ಸೇರಿದಂತೆ ಹಲವು ಉಪಯುಕ್ತ ವಿಭಾಗಗಳಲ್ಲಿ ತರಬೇತಿ ನೀಡಲಾಗುವುದು. ದಿನಕ್ಕೆ ಎರಡು ಬ್ಯಾಚ್‍ಗಳಲ್ಲಿ ಇಲ್ಲಿ ತರಬೇತಿ ನೀಡಲಾಗುವುದು. ಕೌಶಲ್ಯ ತರಬೇತಿ ಕೇಂದ್ರದಲ್ಲಿ, ಉದ್ಯೋಗಾಕಾಂಕ್ಷಿಗಳ ಕಲಿಕೆಗೆ ಅನುಕೂಲವಾಗುವಂತೆ ಸುಸಜ್ಜಿತ ತರಗತಿಗಳು ಮತ್ತು ಪ್ರಯೋಗಾಲಯಗಳನ್ನೂ ತಯಾರು ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಸಮಾರಂಭದಲ್ಲಿ ಬಿಬಿಎಂಪಿ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ ರಾಜು ಸೇರಿದಂತೆ ಇತರ ಪಾಲಿಕೆ ಸದಸ್ಯರು  ಹಾಗು ಅಧಿಕಾರಿಗಳು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X