Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಾರ್, ರೆಸ್ಟೋರೆಂಟ್ ಆರಂಭಕ್ಕೆ ಅನುಮತಿ...

ಬಾರ್, ರೆಸ್ಟೋರೆಂಟ್ ಆರಂಭಕ್ಕೆ ಅನುಮತಿ ವಿಚಾರ: ಅಬಕಾರಿ ಇಲಾಖೆ ಅಧಿಕಾರಿಗಳ ಸಭೆ

ವಾರ್ತಾಭಾರತಿವಾರ್ತಾಭಾರತಿ24 Aug 2020 5:59 PM IST
share

ಬೆಂಗಳೂರು, ಆ.24: ಬಾರ್ ಮತ್ತು ರೆಸ್ಟೋರೆಂಟ್ ಮಾಲಕರಿಗೆ ಆಗುತ್ತಿರುವ ನಷ್ಟ ತಪ್ಪಿಸಲು ಚಿಲ್ಲರೆ ಮದ್ಯ ಮಾರಾಟಕ್ಕೆ ಅನುಮತಿ ನೀಡುವ ಬಗ್ಗೆ ಅಬಕಾರಿ ಇಲಾಖೆ ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ.

ದಿಲ್ಲಿ, ಚಂಡೀಗಢ ಮತ್ತು ಪಂಜಾಬ್ ರಾಜ್ಯಗಳಲ್ಲಿ ಚಿಲ್ಲರೆ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಅದೇ ಮಾದರಿಯಲ್ಲಿ ಸೆಪ್ಟೆಂಬರ್ 1ರಿಂದ ಬಾರ್ ಮತ್ತು ರೆಸ್ಟೋರೆಂಟ್‍ಗಳಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ನೀಡುವ ಸಾಧ್ಯತೆ ಇದೆ ಎಂದು ಅಬಕಾರಿ ಇಲಾಖೆಯ ಮೂಲಗಳು ತಿಳಿಸಿವೆ.

ಬಾರ್, ರೆಸ್ಟೋರೆಂಟ್ ಹಾಗೂ ಕ್ಲಬ್‍ಗಳಲ್ಲಿ ಮದ್ಯ ಮಾರಾಟ ಬಂದ್ ಆಗಿರುವುದರಿಂದ ಸರಕಾರಕ್ಕೆ ಮಾತ್ರ ಕೋಟ್ಯಂತರ ರೂ.ಆದಾಯ ಕೊರತೆಯಾಗಿದೆ. ಜತೆಗೆ, ಮಾಲಕರಿಗೂ ಕೋಟ್ಯಂತರ ರೂ. ನಷ್ಟವುಂಟಾಗಿದೆ. ಪ್ರತಿ ತಿಂಗಳು ಕನಿಷ್ಠ 20ರಿಂದ 30 ಸಾವಿರ ರೂ. ಬಾಡಿಗೆ ಪಾವತಿಸಬೇಕು. ಕೆಲಸ ಮಾಡುವ ಸಿಬ್ಬಂದಿಗೆ (ಕನಿಷ್ಠ 10 ಮಂದಿ) ವೇತನ ಪಾವತಿಸಬೇಕು. ಅಲ್ಲದೆ, ಲಕ್ಷಾಂತರ ರೂಪಾಯಿಗಳನ್ನು ಸನ್ನದು ಶುಲ್ಕವಾಗಿ ಸರಕಾರಕ್ಕೆ ಪಾವತಿಸಬೇಕು. ಬೆಂಗಳೂರಿನಂತಹ ನಗರಗಳಲ್ಲಿ ವರ್ಷಕ್ಕೆ 10ರಿಂದ 15 ಲಕ್ಷ ರೂ. ಸನ್ನದು ಶುಲ್ಕ ಕಟ್ಟಬೇಕು. ಹೀಗೆ ಒಟ್ಟಾರೆ ಐದು ತಿಂಗಳಿಂದ ತಿಂಗಳಿಗೆ ಕನಿಷ್ಠವೆಂದರೂ 2ರಿಂದ 3 ಲಕ್ಷ ರೂ. ಲುಕ್ಸಾನು ಆಗುತ್ತಿದೆ ಎಂದು ಮಾಲಕರೊಬ್ಬರು ವಿವರಿಸಿದ್ದಾರೆ.

ಈ ನಷ್ಟದ ಹೊಡೆತಕ್ಕೆ ನಲುಗಿರುವ ಕೆಲವು ಬಾರ್ ಮಾಲಕರು ಸನ್ನದು ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ. ಇನ್ನೂ ಕೆಲವರು ಹೇಗಾದರೂ ಮಾಡಿ ಲೈಸೆನ್ಸ್ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ ಎನ್ನುತ್ತಾರೆ ಅಬಕಾರಿ ಉದ್ಯಮಿಗಳು.

ಎಂಆರ್‍ಪಿ ಮಳಿಗೆಗಳಾಗಿ ಪರಿವರ್ತನೆ: ಆಹಾರದ ಜತೆ ಚಿಲ್ಲರೆ ಮದ್ಯ ಮಾರಾಟಕ್ಕೆ ನಿರ್ಬಂಧ ಇರುವುದರಿಂದ ಗ್ರಾಹಕರನ್ನು ಸೆಳೆಯಲು ಬಹುತೇಕ ಬಾರ್ ಗಳ ಮಾಲಕರು, ಇತ್ತೀಚಿನ ದಿನಗಳಲ್ಲಿ ಎಂಆರ್‍ಪಿ ದರದಲ್ಲಿ ಮದ್ಯ ಮಾರಾಟಕ್ಕೆ ಮುಂದಾಗಿದ್ದಾರೆ. ಹೀಗಾಗಿ ಬಾರ್ ಗಳ ಮುಂದೆ ಎಂಆರ್‍ಪಿ ದರದಲ್ಲಿ ಮದ್ಯ ಲಭ್ಯ ಎಂಬ ಬೋರ್ಡ್ ಗಳು ಎಲ್ಲೆಡೆ ರಾರಾಜಿಸತೊಡಗಿವೆ.

ರಾಜ್ಯ ಸರಕಾರ ಕೆಲವು ಷರತ್ತುಗಳನ್ನು ವಿಧಿಸಿ ಮೊದಲಿನಂತೆ ಮದ್ಯ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬಹುದು. ಆದರೆ ಅದರ ಬದಲು ಆನ್‍ಲೈನ್ ಮದ್ಯ ಮಾರಾಟ, ಹೊಸದಾಗಿ ಎಂಎಸ್‍ಐಎಲ್ ಮಳಿಗೆಗಳ ಆರಂಭ ಮತ್ತಿತರ ವಿಷಯಗಳಿಗೆ ಹೆಚ್ಚಿನ ಆಸಕ್ತಿ ತೋರುತ್ತಿದೆ. ಬಾರ್ ಮಾಲಕರಿಗೆ ಆಗುತ್ತಿರುವ ನಷ್ಟದ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಮದ್ಯ ಮಾರಾಟ ಸಂಘದ ಪ್ರತಿನಿಧಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X