ಕಲಾಸಿಪಾಳ್ಯ, ಕೆ.ಆರ್ ಮಾರುಕಟ್ಟೆ ಪ್ರಾರಂಭಕ್ಕೆ ಒತ್ತಾಯಿಸಿ ಧರಣಿ; ಬಿಬಿಎಂಪಿ ಕಚೇರಿವರೆಗೆ ರ‍್ಯಾಲಿ

ಬೆಂಗಳೂರು, ಆ.24: ನಗರದ ಕಲಾಸಿಪಾಳ್ಯ ಮಾರುಕಟ್ಟೆ ಹಾಗೂ ಕೆ.ಆರ್ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟಿಗೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ವರ್ತಕರು ಸೋಮವಾರ ಕೆ.ಆರ್ ಮಾರುಕಟ್ಟೆಯಿಂದ ಬಿಬಿಎಂಪಿ ಕಚೇರಿವರೆಗೆ ಧರಣಿ ರ‍್ಯಾಲಿ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಕೊರೋನ ಹಿನ್ನಲೆ ಕಲಾಸಿಪಾಳ್ಯ ಹಾಗೂ ಕೆ.ಆರ್ ಮಾರುಕಟ್ಟೆಯನ್ನು ಬಂದ್ ಮಾಡಿದ್ದರಿಂದ ರೈತರಿಗೆ ಸಾಕಷ್ಟು ನಷ್ಟ ಉಂಟಾಗಿದೆ. ಪ್ರತಿದಿನ ಸಾವಿರಾರು ರೈತರು ಈ ಮಾರುಕಟ್ಟೆಗಳಿಗೆ ತಾವು ಬೆಳೆದ ಹಣ್ಣು, ತರಕಾರಿ, ಹೂವು ತಂದು ಮಾರುತ್ತಿದ್ದರು. ಕೊರೋನ ಕಾರಣದಿಂದಾಗಿ ಮಾರುಕಟ್ಟೆ ಬಂದ್ ಆದ್ದರಿಂದ ರೈತರು ತಾವು ಬೆಳೆದ ಬೆಳೆಯನ್ನು ಅರ್ಧ ಬೆಲೆಗೆ ಮಾರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಕೂಡಲೇ ಮಾರುಕಟ್ಟೆ ಪ್ರಾರಂಭ ಮಾಡಬೇಕು ಎಂದು ಒತ್ತಾಯಿಸಿದರು.
ಈ ಕುರಿತು ಪ್ರತಿಕ್ರಿಯಿಸಿದ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್, ಕೆ.ಆರ್ ಮಾರುಕಟ್ಟೆಯಲ್ಲಿ ಜಲಮಂಡಳಿ ವತಿಯಿಂದ ಕಾಮಗಾರಿ ನಡೆಯುತ್ತಿದೆ. ಮುಂದಿನ ವಾರದೊಳಗೆ ಮಾರುಕಟ್ಟೆ ಪ್ರಾರಂಭಕ್ಕೆ ಅನುವು ಮಾಡಿಕೊಡಲಾಗುವುದು ಎಂದು ತಿಳಿಸಿದರು.






.jpg)
.jpg)
.jpg)
.jpg)

