Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚೀನಾ ಜೊತೆ ಮಾತುಕತೆ ವಿಫಲವಾದರೆ ಮಿಲಿಟರಿ...

ಚೀನಾ ಜೊತೆ ಮಾತುಕತೆ ವಿಫಲವಾದರೆ ಮಿಲಿಟರಿ ಆಯ್ಕೆ ನಮಗಿದೆ : ಜ. ಬಿಪಿನ್ ರಾವತ್

ವಾರ್ತಾಭಾರತಿವಾರ್ತಾಭಾರತಿ24 Aug 2020 7:12 PM IST
share
ಚೀನಾ ಜೊತೆ ಮಾತುಕತೆ ವಿಫಲವಾದರೆ ಮಿಲಿಟರಿ ಆಯ್ಕೆ ನಮಗಿದೆ : ಜ. ಬಿಪಿನ್ ರಾವತ್

ಹೊಸದಿಲ್ಲಿ, ಆ.24: ಗಡಿ ಭಾಗದಲ್ಲಿ ಉಂಟಾಗಿರುವ ಉದ್ವಿಗ್ನತೆ ಶಮನಗೊಳಿಸುವ ನಿಟ್ಟಿನಲ್ಲಿ ಭಾರತ- ಚೀನಾದ ಮಧ್ಯೆ ನಡೆಯುತ್ತಿರುವ ರಾಜತಾಂತ್ರಿಕ ಮಾತುಕತೆ ವಿಫಲವಾದರೆ ಮಿಲಿಟರಿ ಆಯ್ಕೆ ನಮ್ಮೆದುರಿಗಿದೆ ಎಂದು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜ. ಬಿಪಿನ್ ರಾವತ್ ಹೇಳಿದ್ದು, ಈ ಮೂಲಕ ಮಿಲಿಟರಿ ಕಾರ್ಯಾಚರಣೆಗೂ ಭಾರತ ಸಿದ್ಧ ಎಂಬ ಸಂದೇಶ ನೀಡಿದ್ದಾರೆ.

ಗಡಿರೇಖೆಯ ಕುರಿತ ವಿಭಿನ್ನ ಗ್ರಹಿಕೆಯಿಂದ ವಾಸ್ತವಿಕ ನಿಯಂತ್ರಣ ರೇಖೆಯುದ್ದಕ್ಕೂ ಗಡಿ ಉಲ್ಲಂಘನೆ ಪ್ರಕರಣ ಸಂಭವಿಸುತ್ತದೆ. ಕಣ್ಗಾವಲು, ಮೇಲ್ವಿಚಾರಣೆ ಮತ್ತು ಇಂತಹ ಉಲ್ಲಂಘನೆ ಪ್ರಕ್ರಿಯೆ ಅತಿಕ್ರಮಣದ ರೂಪು ಪಡೆಯದಂತೆ ತಡೆಯುವ ಕಾರ್ಯವನ್ನು ರಕ್ಷಣಾ ಪಡೆಗಳಿಗೆ ವಹಿಸಲಾಗಿದೆ. ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ಯಥಾಸ್ಥಿತಿ ನೆಲೆಸುವಂತೆ ಮಾಡುವ ಎಲ್ಲಾ ಪ್ರಯತ್ನ ವಿಫಲವಾದರೆ ಆಗ ರಕ್ಷಣಾ ಪಡೆಗಳು ಮಿಲಿಟರಿ ಕಾರ್ಯಾಚರಣೆಗೆ ಸನ್ನದ್ಧವಾಗಿರುತ್ತವೆ . ಲಡಾಕ್‌ನ ಗಡಿಭಾಗದಲ್ಲಿ ಚೀನಾದ ಸೇನೆ ಯಥಾಸ್ಥಿತಿ ಕಾಯ್ದುಕೊಳ್ಳಲು ಬದ್ಧವಾಗಿದೆ ಎಂದು ಖಾತರಿಪಡಿಸುವ ನಿಟ್ಟಿನಲ್ಲಿ ಎಲ್ಲಾ ಆಯ್ಕೆಗಳ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ , ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹಾಗೂ ಇತರರು ಪರಿಶೀಲಿಸುತ್ತಿದ್ದಾರೆ ಎಂದು ರಾವತ್ ಹೇಳಿರುವುದಾಗಿ ಸುದ್ಧಿಸಂಸ್ಥೆ ವರದಿ ಮಾಡಿದೆ.

ದೇಶದ ವಿವಿಧ ಗುಪ್ತಚರ ಏಜೆನ್ಸಿಗಳ ಮಧ್ಯೆ ಸಮನ್ವಯತೆಯ ಕೊರತೆಯಿದೆ ಎಂಬ ವರದಿಯನ್ನು ನಿರಾಕರಿಸಿದ ರಾವತ್, ಮಾಹಿತಿ ಸಂಗ್ರಹ ಮತ್ತು ಪೂರೈಕೆಯ ಜವಾಬ್ದಾರಿ ಹೊಂದಿರುವ ಎಲ್ಲಾ ಏಜೆನ್ಸಿಗಳ ಮಧ್ಯೆ ದಿನಂಪ್ರತಿ ಸಭೆ ನಡೆಯುತ್ತಿದೆ. ಸರಕಾರದ ಹಿರಿಯ ಸಚಿವರು ಹಾಗೂ ಅಧಿಕಾರಿಗಳು ಸದಸ್ಯರಾಗಿರುವ ‘ಚೀನಾ ಸ್ಟಡಿ ಗ್ರೂಫ್’ ಲಡಾಖ್‌ನ ಪರಿಸ್ಥಿತಿಯ ಪರಿಶೀಲನೆಗೆ ಪ್ರತೀ ದಿನ ಸಭೆ ನಡೆಸುತ್ತಿದೆ. ಚೀನಾದ ಸೇನೆಯ ಚಲನವಲನದ ಕುರಿತು ಮಾನವ ಮತ್ತು ತಂತ್ರಜ್ಞಾನ ಬುದ್ಧಿಮತ್ತೆಯ ಮೂಲಕ ಪಡೆದ ಮಾಹಿತಿಯನ್ನು ಭದ್ರತಾ ಏಜೆನ್ಸಿಗಳು ನಿರಂತರ ಹಂಚಿಕೊಳ್ಳುತ್ತಿವೆ ಎಂದು ಹೇಳಿದರು.

ಗಡಿ ಪ್ರದೇಶದಲ್ಲಿ ಭಾರತ ನಡೆಸುತ್ತಿರುವ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಕಾಮಗಾರಿಯ ಸುರಕ್ಷತೆ ಬಗ್ಗೆ ನಿರಂತರ ಸಭೆ ನಡೆಸಲಾಗುತ್ತಿದೆ. ಕಳೆದ ಮೂರು- ನಾಲ್ಕು ವರ್ಷಗಳಿಂದ ಈ ಕಾಮಗಾರಿ ವೇಗ ಪಡೆದುಕೊಂಡಿದೆ ಎಂದು ಜ. ರಾವತ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X