Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊರೋನ ಪರೀಕ್ಷೆ, ಚಿಕಿತ್ಸೆಯ ಬಗ್ಗೆ...

ಕೊರೋನ ಪರೀಕ್ಷೆ, ಚಿಕಿತ್ಸೆಯ ಬಗ್ಗೆ ಸುಳ್ಳು ಆರೋಪ; ಕಿಡಿಗೇಡಿಗಳ ವಿರುದ್ಧ ನಿರ್ದಾಕ್ಷಣ್ಯ ಕ್ರಮ: ಉಡುಪಿ ಡಿಸಿ

ವಾರ್ತಾಭಾರತಿವಾರ್ತಾಭಾರತಿ24 Aug 2020 8:49 PM IST
share
ಕೊರೋನ ಪರೀಕ್ಷೆ, ಚಿಕಿತ್ಸೆಯ ಬಗ್ಗೆ ಸುಳ್ಳು ಆರೋಪ; ಕಿಡಿಗೇಡಿಗಳ ವಿರುದ್ಧ ನಿರ್ದಾಕ್ಷಣ್ಯ ಕ್ರಮ: ಉಡುಪಿ ಡಿಸಿ

ಉಡುಪಿ, ಆ. 24: ಹಗಲು ರಾತ್ರಿ ಶ್ರಮ ವಹಿಸಿ ಕೆಲಸ ಮಾಡುವ ಕೊರೋನ ವಾರಿಯರ್ಸ್‌ಗಳ ವಿರುದ್ಧ ಕೆಲವು ಕಿಡಿಗೇಡಿಗಳು ದಾಖಲೆಗಳಿಲ್ಲದೆ ಭ್ರಷ್ಟಾಚಾರದ ಆರೋಪಗಳನ್ನು ಮಾಡುತ್ತಿದ್ದಾರೆ. ಈ ಮೂಲಕ ಆರೋಗ್ಯ ಸಿಬ್ಬಂದಿಗಳ ಮಾನಸಿಕ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಲಾಗು ತ್ತಿದೆ. ಅಂತಹ ಕಿಡಿಗೇಡಿಗಳಿಗೆ ಬುದ್ದಿ ಕಲಿಸುವ ಕೆಲಸವನ್ನು ಜಿಲ್ಲಾಡಳಿತ ಮಾಡಲಿದೆ. ಯಾವುದೇ ಕಾರಣಕ್ಕೂ ಈ ವಿಚಾರದಲ್ಲಿ ಹಿಂಜರಿಯುವ ಪ್ರಶ್ನೆಯೇ ಇಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿಡಿಯೋ ಬಿಡುಗಡೆ ಮಾಡಿರುವ ಜಿಲ್ಲಾಧಿಕಾರಿ, ಈ ರೀತಿ ಸುಳ್ಳು ಆರೋಪ ಮಾಡುವುದ ರಿಂದ ಕೊರೋನ ವಾರಿಯರ್ಸ್‌ಗಳಿಗೆ ಅವಮಾನ ಮಾಡಿದಂತಾಗುತ್ತದೆ. ಇಂತಹ ಅವಮಾನ ಸಹಿಸಿ ಸುಮ್ಮನೆ ಇರಲು ಆಗುವುದಿಲ್ಲ. ಭ್ರಷ್ಟಾಚಾರದ ಬಗ್ಗೆ ಮಾಹಿತಿ ಇದ್ದರೆ, ದಾಖಲೆ ಸಮೇತ ಸಂಬಂಧಪಟ್ಟ ತನಿಖಾಧಿಕಾರಿಗಳಿಗೆ ನೀಡಬೇಕು. ಅದು ಬಿಟ್ಟು ದಾಖಲೆಗಳಿಲ್ಲದೆ ಪರೀಕ್ಷೆಯಲ್ಲಿ ಹಾಗೂ ಚಿಕಿತ್ಸೆಯಲ್ಲಿ ಭ್ರಷ್ಟಾಚಾರ ಆಗುತ್ತಿದೆ ಎಂದು ಹೇಳುವುದು ಸರಿಯಲ್ಲ. ಹೀಗೆ ದಾಖಲೆ ಇಲ್ಲದೆ ಮಾತನಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಹೆಚ್ಚು ಹಣ ಪಡೆದರೆ ಕ್ರಮ

ಖಾಸಗಿ ಆಸ್ಪತ್ರೆಗಳು ಸರಕಾರ ನಿಗದಿ ಪಡಿಸಿದ ಹಣದಲ್ಲಿಯೇ ಕೊರೋನ ರೋಗಿಗಳಿಗೆ ಚಿಕಿತ್ಸೆ ನೀಡಬೇಕು. ಅದಕ್ಕಿಂತ ಹೆಚ್ಚಿನ ಹಣ ಪಡೆಯುವ ಪ್ರಕರಣ ಕಂಡುಬಂದರೆ ಅಂತಹ ಆಸ್ಪತ್ರೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದು ಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಕೊರೋನ ಪರೀಕ್ಷೆಯಲ್ಲಿ ದಂಧೆ ನಡೆಸಲಾಗುತ್ತಿದೆ ಎಂಬ ಆರೋಪ ಸುಳ್ಳು. ಹೆಚ್ಚು ಹೆಚ್ಚು ರೋಗ ಪತ್ತೆ ಹಚ್ಚುವ ಪರೀಕ್ಷೆ ಮಾಡುತ್ತಿರುವುದು ಹಣ ಮಾಡುವ ಉದ್ದೇಶದಿಂದ ಅಲ್ಲ. ಕೊರೋನ ಪರೀಕ್ಷೆಗಾಗಿ ಖಾಸಗಿ ಪ್ರಯೋಗಾಲಯಕ್ಕೆ ಸರಕಾರ 1500ರೂ. ನಿಗದಿಪಡಿಸಿದೆ. ಸರಕಾರಿ ಪ್ರಯೋಗಾಲಯದಲ್ಲಿ ಉಚಿತ ಪರೀಕ್ಷೆ ಮಾಡಲಾಗುತ್ತದೆ. ಇದರಲ್ಲಿ ಹಣಕಾಸಿನ ವ್ಯವಹಾರ ನಡೆಯುವುದಿಲ್ಲ. ಖಾಸಗಿ ಆಸ್ಪತ್ರೆಗೆ ನಾವು ಈವರೆಗೆ ನಯಾ ಪೈಸೆ ಹಣ ಪಾವತಿಸಿಲ್ಲ ಎಂದು ಅವರು ಸ್ಪಷ್ಟನೆ ನೀಡಿದರು.

ಉಡುಪಿ ಜಿಲ್ಲೆಯಲ್ಲಿ ಇಂದು ಹೆಚ್ಚು ಹೆಚ್ಚು ಕೊರೋನ ಪರೀಕ್ಷೆ ಮಾಡು ವುದರಿಂದ ಪಾಸಿಟಿವ್ ಪ್ರಕರಣಗಳನ್ನು ಆದಷ್ಟು ಬೇಗ ಪತ್ತೆ ಹಚ್ಚಿ, ರೋಗಿಗೆ ಚಿಕಿತ್ಸೆ ನೀಡಿ ಗುಣಪಡಿಸಲು ಸಾಧ್ಯವಾಗುತ್ತದೆ. ಪರೀಕ್ಷೆಯ ಸಂದರ್ಭದಲ್ಲಿ ಪಾಸಿಟಿವ್ ಬಂದ ಶೇ.90ರಷ್ಟು ಮಂದಿಗೆ ರೋಗದ ಲಕ್ಷ್ಮಣಗಳೇ ಇರುವು ದಿಲ್ಲ. ಅಂತವರಿಗೆ ಮನೆಯಲ್ಲಿಯೇ ಇರಲು ಅವಕಾಶ ಮಾಡಿಕೊಡುತ್ತೇವೆ. ಉಸಿರಾಟ ತೊಂದರೆ, ವಿಪರೀತ ಜ್ವರ ಇರುವವರು ಮಾತ್ರ ಆಸ್ಪತ್ರೆಗೆ ದಾಖ ಲಾಗಬೇಕಾಗುತ್ತದೆ ಎಂದು ಅವರು ತಿಳಿಸಿದರು.

ಮೃತದೇಹ ಅದಲುಬದಲು: ನೋಟೀಸ್ ಜಾರಿ

ಕೊರೋನ ಸೋಂಕಿತರ ಮೃತದೇಹ ಅದಲು ಬದಲಾಗಿರುವ ವಿಚಾರಕ್ಕೆ ಸಂಬಂಧಿಸಿ ಮೃತದೇಹ ನಿರ್ವಹಣೆಗಾಗಿ ರಚಿಸಲಾಗಿರುವ ಸಮಿತಿಯ ಸದಸ್ಯರಿಗೆ ನೋಟೀಸ್ ಜಾರಿ ಮಾಡಿ, ವಿವರಣೆ ಪಡೆಯಲಾಗುವುದು. ಒಂದು ವೇಳೆ ಅವರಿಂದ ತಪ್ಪಾಗಿದ್ದರೆ ಸೂಕ್ತ ಕ್ರಮ ಜರಗಿಸಲಾಗುವುದು ಎಂದು ಜಿಲ್ಲಾ ಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ರಕ್ಷಾ ಸಾವಿಗೆ ಖಾಸಗಿ ಆಸ್ಪತ್ರೆಯ ವೈದ್ಯಕೀಯ ನಿರ್ಲಕ್ಷ್ಯದ ಕುರಿತು ತನಿಖೆ ನಡೆಸಲು ವೈದ್ಯಕೀಯ ತಜ್ಞರ ಸಮಿತಿಯನ್ನು ರಚಿಸಲಾಗಿದೆ. ಸಮಿತಿ ತನಿಖೆ ನಡೆಸಿ ವರದಿ ನೀಡಲಿದೆ. ವರದಿಯಲ್ಲಿ ವೈದ್ಯಕೀಯ ನಿರ್ಲಕ್ಷ್ಯ ಆಗಿರುವುದು ಕಂಡುಬಂದರೆ ಸಂಬಂಧಪಟ್ಟ ಆಸ್ಪತ್ರೆಯ ವಿರುದ್ಧ ಕ್ರಮ ಜರಗಿಸಲಾಗುವುದು ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X