ಅವೈಜ್ಞಾನಿಕ ಕೊರೋನ ಪರೀಕ್ಷೆಯಿಂದ ಕೋಟ್ಯಂತರ ರೂ. ನಷ್ಟ: ರಾಜ್ಯ ವೈದ್ಯಾಧಿಕಾರಿಗಳ ಸಂಘ

ಸಾಂದರ್ಭಿಕ ಚಿತ್ರ
ಬೆಂಗಳೂರು, ಆ.24: ನಗರದಲ್ಲಿ ಅವೈಜ್ಞಾನಿಕವಾಗಿ ಕೊರೋನ ಪರೀಕ್ಷೆ ನಡೆಸುತ್ತಿರುವದರಿಂದ ಕೋಟ್ಯಂತರ ರೂ. ನಷ್ಟವಾಗುತ್ತಿದೆ ಎಂದು ರಾಜ್ಯ ವೈದ್ಯಾಧಿಕಾರಿಗಳ ಸಂಘ ಅಸಮಾಧಾನ ವ್ಯಕ್ತಪಡಿಸಿದೆ.
ಪ್ರತಿನಿತ್ಯ ಬಿಬಿಎಂಪಿಯಿಂದ 25 ಸಾವಿರಕ್ಕೂ ಹೆಚ್ಚು ಕೊರೋನ ಪರೀಕ್ಷೆ ಮಾಡಲಾಗುತ್ತಿದೆ. ಇದರಿಂದ ಪ್ರತಿನಿತ್ಯ ಕೋವಿಡ್ ಟೆಸ್ಟ್ ಗೆ 4 ಕೋಟಿ ರೂ. ಖರ್ಚಾಗುತ್ತಿದೆ. ಈ ಪೈಕಿ ಕೇವಲ 2 ರಿಂದ 3 ಸಾವಿರ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಅಗತ್ಯವಿಲ್ಲದಿದ್ದರೂ ಕೆಲವೆಡೆ ಕೊರೋನ ಪರೀಕ್ಷೆ ಮಾಡಲಾಗುತ್ತಿದೆ ಎಂದು ತಿಳಿಸಿದೆ.
ಬಿಬಿಎಂಪಿ ವ್ಯಾಪ್ತಿಯ ಸ್ಲಂಗಳು, ಕಟ್ಟಡ ಕಾರ್ಮಿಕರಿಗೆ ಕೊರೋನ ಪರೀಕ್ಷೆ ಅನಗತ್ಯ. ಕೊರೋನ ಸೋಂಕಿತರ ಜತೆ ಸಂಪರ್ಕ ಹೊಂದಿದವರಿಗೆ ಮಾತ್ರ ಪರೀಕ್ಷೆ ಮಾಡುವುದು ಒಳ್ಳೆಯದು ಎಂದು ರಾಜ್ಯ ವೈದ್ಯಾಧಿಕಾರಿಗಳ ಸಂಘ ಅಭಿಪ್ರಾಯಪಟ್ಟಿದೆ.
Next Story





