ಆರ್ಥಿಕ ಸಂಕಷ್ಟಕ್ಕೆ ಬೇಸತ್ತು ಯುವಕ ಆತ್ಮಹತ್ಯೆ

ಮೈಸೂರು,ಆ.24: ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನಲುಗಿದ ಯುವಕನೋರ್ವ ನೇಣಿಗೆ ಶರಣಾದ ಘಟನೆ ಒಂಟಿಕೊಪ್ಪಲ್ ನಲ್ಲಿ ನಡೆದಿದೆ.
ಮೃತನನ್ನು ದಿನೇಶ್(26)ಎಂದು ಗುರುತಿಸಲಾಗಿದೆ. ಈತ ಝೆರಾಕ್ಸ್ ಅಂಗಡಿ ಇಟ್ಟುಕೊಂಡಿದ್ದ. ಹಲವು ಕಡೆ ಸಾಲ ಕೂಡ ಮಾಡಿದ್ದ ಎನ್ನಲಾಗಿದೆ.
ಕೋವಿಡ್-19 ಹಿನ್ನೆಲೆಯಲ್ಲಿ ಆರ್ಥಿಕವಾಗಿ ತೀರಾ ಕುಸಿದಿದ್ದ ಈತ ದಾರಿ ತೋಚದೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿವಿಪುರಂ ಠಾಣೆಯ ಇನ್ಸ್ ಪೆಕ್ಟರ್ ಅರುಣ್ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಯಿತು.
ಈ ಸಂಬಂಧ ವಿವಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





