ರಾಜ್ಯ ಪ್ರಶಸ್ತಿಗಾಗಿ ನಾಮ ನಿರ್ದೇಶನಕ್ಕೆ ಅರ್ಜಿ ಆಹ್ವಾನ
ಬೆಂಗಳೂರು, ಆ.24: ಮಕ್ಕಳ ಕಲ್ಯಾಣ ಸೇವೆಯಲ್ಲಿ ವಿಶೇಷ ಸಾಧನೆ ಮಾಡಿರುವ ವ್ಯಕ್ತಿ ಹಾಗೂ ಸಂಘ-ಸಂಸ್ಥೆಗಳಿಂದ ಮಕ್ಕಳ ದಿನಾಚರಣೆ ದಿನ ನೀಡುವ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಸರಕಾರವು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿಗಳಿಗೆ ತಲಾ ರೂ.25,000ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ.1,00,000 ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯಂದು ಪ್ರದಾನ ಮಾಡಿ ಗೌರವಿಸುತ್ತದೆ.
2020ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಸಂಬಂಧಿಸಿದ ಜಿಲ್ಲೆಯ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಯಲ್ಲಿ ಸಂಬಂಧಪಟ್ಟ ಜಿಲ್ಲೆಯ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇಲ್ಲಿಗೆ ಸೆ.15 ರೊಳಗೆ ಸಲ್ಲಿಸತಕ್ಕದ್ದು.
Next Story





