Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಶಾಂತ್ ಭೂಷಣ್ ಪ್ರಕರಣ: ಶಿಕ್ಷೆಯ...

ಪ್ರಶಾಂತ್ ಭೂಷಣ್ ಪ್ರಕರಣ: ಶಿಕ್ಷೆಯ ಪ್ರಮಾಣದ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ವಾರ್ತಾಭಾರತಿವಾರ್ತಾಭಾರತಿ25 Aug 2020 4:31 PM IST
share
ಪ್ರಶಾಂತ್ ಭೂಷಣ್ ಪ್ರಕರಣ: ಶಿಕ್ಷೆಯ ಪ್ರಮಾಣದ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ, ಆ. 25: ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಅವರ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ಶಿಕ್ಷೆಯ ಪ್ರಮಾಣದ ತೀರ್ಪನ್ನು ಸುಪ್ರೀಂ ಕೋರ್ಟ್ ಮಂಗಳವಾರ ಕಾದಿರಿಸಿದೆ.

ನ್ಯಾಯಾಂಗ ನಿಂದನೆ ಪಕರಣದಲ್ಲಿ ಪ್ರಶಾಂತ್ ಭೂಷಣ್ ದೋಷಿ ಎಂದು ಸುಪ್ರೀಂ ಕೋರ್ಟ್ ಆಗಸ್ಟ್ 14ರಂದು ತೀರ್ಪು ನೀಡಿತ್ತು. ಪ್ರಶಾಂತ್ ಭೂಷಣ್ ಅವರಿಗೆ ಕ್ಷಮೆ ನೀಡುವಂತೆ ಕೋರಿ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ ಮಂಡಿಸಿದ ವಾದವನ್ನು ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಪೀಠ ಆಲಿಸಿತು.

30 ವರ್ಷಗಳ ವೃತ್ತಿ ಅನುಭವ ಹೊಂದಿರುವ ಪ್ರಶಾಂತ್ ಭೂಷಣ್ ಅವರಂತಹ ಹಿರಿಯ ನ್ಯಾಯವಾದಿಗಳು ವರ್ತಿಸುವ ರೀತಿ ಇದಲ್ಲ ಎಂದು ನ್ಯಾಯಮೂರ್ತಿ ಅರುಣ್ ಮಿಶ್ರಾ ಈ ಸಂದರ್ಭ ಪ್ರತಿಪಾದಿಸಿದರು. ನ್ಯಾಯಾಂಗದ ಕುರಿತು ಮಾಡಿದ ಟ್ವೀಟ್ ವಿರುದ್ಧ ದಾಖಲಿಸಲಾದ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿ ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ನೀಡಿದ ಹೇಳಿಕೆ ಹಾಗೂ ಸ್ಪಷ್ಟೀಕರಣವನ್ನು ಓದುವುದು ನೋವಿನ ಸಂಗತಿ ಎಂದು ಸುಪ್ರೀಂ ಕೋರ್ಟ್ ಹೇಳಿತು.

ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಅವರು ಪ್ರಶಾಂತ್ ಭೂಷಣ್ ಅವರಿಗೆ ಕ್ಷಮೆ ನೀಡುವಂತೆ ಮನವಿ ಮಾಡಿದ ಬಳಿಕ, ಸುಪ್ರೀಂ ಕೋರ್ಟ್ ನ್ಯಾಯಾಂಗದ ವಿರುದ್ಧದ ಟ್ವೀಟ್‌ಗಳ ಬಗ್ಗೆ ವಿಷಾದ ವ್ಯಕ್ತಪಡಿಸದಿರುವ ತಮ್ಮ ನಿಲುವನ್ನು ಪರಾಮರ್ಶಿಸುವಂತೆ ಪ್ರಶಾಂತ್ ಭೂಷಣ್ ಹಾಗೂ ಅವರ ವಕೀಲರಿಗೆ 30 ನಿಮಿಷಗಳ ಕಾಲಾವಕಾಶ ನೀಡಿತು. ಪ್ರಶಾಂತ್ ಭೂಷಣ್ ಅವರಂತಹ ಹಿರಿಯ ನ್ಯಾಯವಾದಿಗಳು ಪತ್ರಿಕಾಗೋಷ್ಠಿ ನಡೆಸುವುದು, ಟ್ವೀಟ್ ಮಾಡುವುದು ಭೂಷಣವಲ್ಲ. ಈ ರೀತಿ ಮಾಡುವುದರಿಂದ ಸಾರ್ವಜನಿಕರ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ ಎಂದು ಮಿಶ್ರಾ ಹೇಳಿದ್ದಾರೆ.

“ಪಾರದರ್ಶಕ ವಿಮರ್ಶೆಯನ್ನು ನಾವು ಸ್ವಾಗತಿಸುತ್ತೇವೆ. ಆದರೆ, ನಾವು ಆ ಟೀಕೆಗೆ ಪ್ರತಿಕ್ರಿಯಿಸಲು ಪತ್ರಿಕೆಗಳ ಮುಂದೆ ಹೋಗಲು ಸಾಧ್ಯವಾಗುವುದಿಲ್ಲ. ಇದು ನಾವು ಅನುಸರಿಸಬೇಕಾದ ನೀತಿ” ಎಂದು ಅವರು ಹೇಳಿದ್ದಾರೆ. ಮಂಗಳವಾರ ವಿಚಾರಣೆ ವೇಳೆ ಪ್ರಶಾಂತ್ ಭೂಷಣ್ ಪರ ನ್ಯಾಯವಾದಿ ರಾಜೀವ್ ಧವನ್, ಮೊದಲು ಟ್ವೀಟ್ ಅನ್ನು ಉಲ್ಲೇಖಿಸಿದರು ಹಾಗೂ ಸುಪ್ರೀಂ ಕೋರ್ಟ್ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಸಲಹೆ ನೀಡಲು ಪ್ರಶಾಂತ್ ಭೂಷಣ್ ಪ್ರಯತ್ನಿಸಿರಲಿಲ್ಲ. ಆದರೆ, ಪ್ರಕರಣಕ್ಕೆ ನೀಡುತ್ತಿರುವ ಆದ್ಯತೆ ಕುರಿತು ಅವರು ಪ್ರತಿಕ್ರಿಯಿಸಿದ್ದಾರೆ ಎಂದು ಪ್ರತಿಪಾದಿಸಿದರು.

ಒಂದು ವೇಳೆ ಪ್ರಶಾಂತ್ ಭೂಷಣ್ ಅವರ ಹೇಳಿಕೆಯನ್ನು ಪೂರ್ಣವಾಗಿ ಓದಿದರೆ, ಅವರಿಗೆ ನ್ಯಾಯಾಂಗದ ಮೇಲೆ ಅತಿ ಹೆಚ್ಚು ಗೌರವ ಇರುವುದನ್ನು, ಆದರೆ, ನಾಲ್ವರು ಮುಖ್ಯ ನ್ಯಾಯಮೂರ್ತಿಗಳ ಬಗ್ಗೆ ವಿಮರ್ಶಾತ್ಮಕ ಅಭಿಪ್ರಾಯ ಇರುವುದನ್ನು ಹೇಳುತ್ತದೆ ಎಂದು ಅವರು ತಿಳಿಸಿದರು. ಪ್ರಶಾಂತ್ ಭೂಷಣ್ ಅವರನ್ನು ಹುತಾತ್ಮರನ್ನಾಗಿ ಮಾಡಬೇಡಿ ಎಂದು ಧವನ್ ನ್ಯಾಯಾಲಯವನ್ನು ಆಗ್ರಹಿಸಿದರು. ಭೂಷಣ್ ಅವರಿಗೆ ಎಚ್ಚರಿಕೆ ನೀಡಿ ಬಿಡುವುದು ಹಾಗೂ ನ್ಯಾಯಾಲಯವನ್ನು ವಿಮರ್ಶಿಸುವಾಗ ಸ್ವಲ್ಪ ಸಂಯಮದಿಂದ ವರ್ತಿಸುವಂತೆ ತಿಳಿಸುವುದು ಈ ಪ್ರಕರಣವನ್ನು ಕೊನೆಗೊಳಿಸಲು ಇರುವ ಏಕೈಕ ಮಾರ್ಗ ಎಂದು ಅವರು ಹೇಳಿದರು. ಅಟಾರ್ನಿ ಜನರಲ್ ಕೆ.ಕೆ. ರಾಜಗೋಪಾಲ್ ಅವರು, ತನ್ನ ಟ್ವೀಟ್‌ಗಳಿಗೆ ಕ್ಷಮೆ ಕೋರಲು ನಿರಾಕರಿಸುವ ಅವರನ್ನು ಎಚ್ಚರಿಕೆ ನೀಡಿ ಬಿಟ್ಟುಬಿಡಿ. ಭವಿಷ್ಯದಲ್ಲಿ ಇದನ್ನು ಪುನರಾವರ್ತಿಸಬಾರದು ಎಂದು ಎಚ್ಚರಿಸಿ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.

‘‘ಕ್ಷಮೆ ಕೋರುವುದರಲ್ಲಿ ತಪ್ಪೇನಿದೆ ? ಅದು ಅಪರಾಧದ ಪ್ರತಿಬಿಂಬವೇ ? ಕ್ಷಮೆ ಮಾಂತ್ರಿಕ ಶಬ್ಧ. ಅದು ಹಲವು ವಿಷಯಗಳನ್ನು ಗುಣಪಡಿಸುತ್ತದೆ. ಒಂದು ವೇಳೆ ನೀವು ಯಾರಿಗಾದರೂ ನೋವು ಉಂಟು ಮಾಡಿದ್ದರೆ, ಮುಲಾಮು ಹಚ್ಚಬೇಕು’’ ನ್ಯಾಯಮೂರ್ತಿ ಅರುಣ್ ಮಿಶ್ರಾ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X