Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯವು ವಿದೇಶಿ ಹೂಡಿಕೆದಾರರ ನೆಚ್ಚಿನ...

ರಾಜ್ಯವು ವಿದೇಶಿ ಹೂಡಿಕೆದಾರರ ನೆಚ್ಚಿನ ತಾಣ: ಡಿಸಿಎಂ ಅಶ್ವತ್ಥ ನಾರಾಯಣ

ಆಸ್ಟ್ರೇಲಿಯಾದ ಉದ್ಯಮಿಗಳಿಗೆ ಅವಕಾಶಗಳ ಮನವರಿಕೆ ಮಾಡಿಕೊಟ್ಟ ಉಪ ಮುಖ್ಯಮಂತ್ರಿ

ವಾರ್ತಾಭಾರತಿವಾರ್ತಾಭಾರತಿ25 Aug 2020 6:34 PM IST
share
ರಾಜ್ಯವು ವಿದೇಶಿ ಹೂಡಿಕೆದಾರರ ನೆಚ್ಚಿನ ತಾಣ: ಡಿಸಿಎಂ ಅಶ್ವತ್ಥ ನಾರಾಯಣ

ಬೆಂಗಳೂರು, ಆ.25: ಕರ್ನಾಟಕ ಕೈಗಾರಿಕೆ ಅಭಿವೃದ್ಧಿಗೆ ಮಾದರಿ ರಾಜ್ಯವಾಗಿದ್ದು, ಬಂಡವಾಳ ಹೂಡಿಕೆಗೆ ಅತ್ಯಂತ ಸೂಕ್ತ ತಾಣವಾಗಿದೆ ಎಂದು ಐಟಿ-ಬಿಟಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರು ಆಸ್ಟ್ರೇಲಿಯಾ ಉದ್ಯಮಿಗಳಿಗೆ ಮನವರಿಕೆ ಮಾಡಿಕೊಟ್ಟರು.

ಕರ್ನಾಟಕದಲ್ಲಿ ಹೂಡಿಕೆಗೆ ಇರುವ ಅವಕಾಶಗಳ ಬಗ್ಗೆ ಆಸ್ಟ್ರೇಲಿಯಾ ದೇಶದ ಉದ್ಯಮಿಗಳು, ಭಾರತದಲ್ಲಿನ ಆಸ್ಟ್ರೇಲಿಯಾ ರಾಯಬಾರಿ ಬಾರ್ರಿ ಒಪರಾಲ್ ಜತೆ ವೆಬಿನಾರ್ ಮೂಲಕ ಡಿಸಿಎಂ ಅಶ್ವತ್ಥನಾರಾಯಣ ಮಾತನಾಡಿದರು.

ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಹೂಡಿಕೆಗೆ ಹೆಚ್ಚಿನ ಅವಕಾಶಗಳು ಇದ್ದು ಕರ್ನಾಟಕ ಸರಕಾರ ಹಲವು ರಿಯಾಯಿತಿಗಳನ್ನು ಕೂಡ ನೀಡಲಿದೆ ಎಂದು ಉದ್ಯಮಿಗಳಿಗೆ ಅಭಯ ನೀಡಿದರಲ್ಲದೆ, ರಾಜ್ಯವು ವಿದೇಶಿ ಹೂಡಿಕೆದಾರರ ನೆಚ್ಚಿನ ತಾಣವಾಗಿರುವುದು ಹಾಗೂ ಅದಕ್ಕೆ ಇರುವ ಕಾರಣಗಳನ್ನು ವಿವರವಾಗಿ ತಿಳಿಸಿದರು

ಭಾರತವು ಅನೇಕ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದ್ದು, ಅದೇ ನಮ್ಮ ದೇಶದಲ್ಲಿ ಕರ್ನಾಟಕವು ಹತ್ತು ಹಲವು ಕ್ಷೇತ್ರಗಳಲ್ಲಿ ಅಗ್ರಗಣ್ಯ ಸ್ಥಾನದಲ್ಲಿದೆ. ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ, ಕೃಷಿ, ಕೈಗಾರಿಕೆ, ವೈದ್ಯಕೀಯ, ಯಂತ್ರೋಪಕರಣ, ಬಾಹ್ಯಾಕಾಶ ಹಾಗೂ ಸೇವಾ ವಲಯ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ರಾಜ್ಯವು ಅತ್ಯಂತ ವೇಗವಾಗಿ ಪ್ರಗತಿ ಸಾಧಿಸುತ್ತಿದೆ. ಹೀಗಾಗಿ ಇಲ್ಲಿ ಹೂಡಿಕೆ ಮಾಡುವುದು ಅತ್ಯಂತ ಉತ್ತಮ ಎಂದು ಅವರು ಪ್ರತಿಪಾದಿಸಿದರು.

ನಿರಾತಂಕವಾಗಿ ಹೂಡಿಕೆ ಮಾಡಿ: ಕರ್ನಾಟಕ ಆರಂಭದಿಂದಲೂ ಕೈಗಾರಿಕಾ ಸ್ನೇಹಿ ರಾಜ್ಯವಾಗಿದೆ. ಭಾರತದ ಒಟ್ಟಾರೆ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಶೇ.40, ಜೈವಿಕ ತಂತ್ರಜ್ಞಾನ ವಲಯದಲ್ಲಿ ಶೇ.35, ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ವಿನ್ಯಾಸ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ಕೂಡ ಶೇ.64ರಷ್ಟು ರಫ್ತು ಮಾಡುತ್ತಿರುವ ಅತ್ಯಂತ ಪ್ರಗತಿಪೂರಕ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ. ಜತೆಗೆ, ಆಸ್ಟ್ರೇಲಿಯಾ ಜತೆ ಎಲ್ಲ ರೀತಿಯ ಕೈಗಾರಿಕಾ ಮತ್ತು ವಾಣಿಜ್ಯ ಸಂಬಂಧಗಳ ಬಗ್ಗೆ ನಮ್ಮ ರಾಜ್ಯ ಉತ್ಸುಕವಾಗಿದೆ ಎಂದು ಡಿಸಿಎಂ ಹೇಳಿದರು.

ಅನೇಕ ವರ್ಷಗಳಿಂದಲೂ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ವ್ಯೂಹಾತ್ಮಕ ಪಾಲುದಾರಿಕೆ ಇದೆ. ವಾಣಿಜ್ಯ, ಕೈಗಾರಿಕೆ, ಕಲ್ಲಿದ್ದಲು, ಶಿಕ್ಷಣ ಮುಂತಾದ ಕ್ಷೇತ್ರಗಳಲ್ಲಿ ಎರಡೂ ದೇಶಗಳು ಪರಸ್ಪರ ಕೈಜೋಡಿಸಿ ಕೆಲಸ ಮಾಡುತ್ತಿವೆ. ಜತೆಗೆ, ಎರಡೂ ದೇಶಗಳ ನಡುವೆ ಸರಕು ಮತ್ತು ಸೇವೆಯ ವ್ಯವಹಾರವೂ 2018-19ರಲ್ಲಿ 1.6 ಲಕ್ಷ ಕೋಟಿ ರೂ. ಮೀರಿತ್ತು. ಹೀಗಾಗಿ ಆಸ್ಟ್ರೇಲಿಯಾಕ್ಕೆ ಭಾರತದಲ್ಲಿ, ಅದರಲ್ಲೂ ಕರ್ನಾಟಕದಲ್ಲಿ ಹೂಡಿಕೆ ಮಾಡಲು ವಿಪುಲ ಅವಕಾಶಗಳಿವೆ ಎಂದು ಡಾ. ಸಿ.ಎನ್. ಅಶ್ವತ್ಥನಾರಾಯಣ ನುಡಿದರು.

ಕರ್ನಾಟಕ ನಂ.1: ಎಲ್ಲ ರಂಗಗಳಲ್ಲೂ ಕರ್ನಾಟಕ ನಾಗಾಲೋಟದಲ್ಲಿ ಮುಂದೆ ಸಾಗುತ್ತಿದೆ. ನೀತಿ ಆಯೋಗದ 2019ನೇ ಸಾಲಿನ ವರದಿಯಲ್ಲಿ ಆವಿಷ್ಕಾರ ಕ್ಷೇತ್ರದಲ್ಲಿ ನಮ್ಮ ರಾಜ್ಯವು ಮೊದಲ ಸ್ಥಾನದಲ್ಲಿದೆ. ಸದ್ಯ ರಾಜ್ಯದ ಒಟ್ಟಾರೆ ಜಿಡಿಪಿ 220 ಶತಕೋಟಿ ಡಾಲರ್ ಆಗಿದ್ದು, ಅದನ್ನು ಹೆಚ್ಚಿಸುವ ಸ್ಪಷ್ಟ ಗುರಿ ಹೊಂದಲಾಗಿದೆ. ಇನ್ನು ವಿದೇಶಿ ಹೂಡಿಕೆ ಬರುತ್ತಿರುವ ರಾಜ್ಯಗಳಲ್ಲಿ ನಮ್ಮ ರಾಜ್ಯವು 3ನೇ ಅಗ್ರ ರಾಜ್ಯವಾಗಿದೆ.

2000-2019ರ ಅವಧಿಯಲ್ಲಿ ರಾಜ್ಯಕ್ಕೆ 42.3 ದಶಲಕ್ಷ ಡಾಲರ್ ವಿದೇಶಿ ಹೂಡಿಕೆ ಹರಿದುಬಂದಿದೆ. ಇದೇ ವೇಳೆ ಅಭಿವೃದ್ಧಿಯ ಎಲ್ಲ ಕ್ಷೇತ್ರಗಳಿಗೆ ಶಕ್ತಿ ತುಂಬುವ ಉದ್ದೇಶದಿಂದ ಈಗಾಗಲೇ ಡಿಜಿಟಲ್ ಎಕಾನಮಿ ಮಿಷನ್, ವಿಷನ್ ಗ್ರೂಪ್, ಕರ್ನಾಟಕ ಆವಿಷ್ಕಾರ ಪ್ರಾಧಿಕಾರ, ಎಂಎನ್‍ಸಿ ಎಂಗೇಜ್‍ಮೆಂಟ್ ಸೆಲ್ ಇತ್ಯಾದಿ ಸಂಸ್ಥೆಗಳು ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದೆ. ಇದರೊಟ್ಟಿಗೆ, ಕಳೆದ ಒಂದು ವರ್ಷದಲ್ಲಿ ಅನೇಕ ಗುರುತರ ಸುಧಾರಣೆಗಳನ್ನು ತರಲಾಗಿದೆ ಎಂದು ಉಪ ಮಖ್ಯಮಂತ್ರಿ ತಿಳಿಸಿದರು.

ವೆಬಿನಾರ್ ಕಾರ್ಯಕ್ರಮದಲ್ಲಿ ಆಸ್ಟ್ರೇಲಿಯಾದ ಉನ್ನತ ಅಧಿಕಾರಿಗಳೂ ಸೇರಿದಂತೆ ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ, ಭಾರತ-ಆಸ್ಟ್ರೇಲಿಯಾ ಚೇಂಬರ್ ಆಫ್ ಕಾಮರ್ಸ್‍ನ ಮೈಕೆಲ್ ವಾಡೆ, ಜಿತೇಶ್ ಅಗರವಾಲ್, ರೋಹಿತ್ ಮಾನ್‍ಚಂದ, ಪೀಟರ್ ಬಾಲ್ಡ್‍ವಿನ್, ಸಿದ್ದಾರ್ಥ ಮೆಹತಾ, ಪೆಟುಲಾ ಥಾಮಸ್, ರವೀನ್ ಮೀರ್‍ಚಂದಾನಿ ಮುಂತಾದವರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X