Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರಶಾಂತ್ ಭೂಷಣ್ ಮೇಲಿನ ನ್ಯಾಯಾಂಗ...

ಪ್ರಶಾಂತ್ ಭೂಷಣ್ ಮೇಲಿನ ನ್ಯಾಯಾಂಗ ನಿಂದನೆ ಪ್ರಕರಣ ಕೈಬಿಡಲು ವೆಲ್ಫೇರ್ ಪಾರ್ಟಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ25 Aug 2020 8:18 PM IST
share
ಪ್ರಶಾಂತ್ ಭೂಷಣ್ ಮೇಲಿನ ನ್ಯಾಯಾಂಗ ನಿಂದನೆ ಪ್ರಕರಣ ಕೈಬಿಡಲು ವೆಲ್ಫೇರ್ ಪಾರ್ಟಿ ಆಗ್ರಹ

ಬೆಂಗಳೂರು, ಆ.25: ಹಿರಿಯ ವಕೀಲ ಪ್ರಶಾಂತ್ ಭೂಷಣ್ ಮೇಲಿನ ನ್ಯಾಯಾಂಗ ನಿಂದನೆ ಪ್ರಕರಣ ಕೈಬಿಡಲು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಅಡ್ವಕೇಟ್ ತಾಹೀರ್ ಹುಸೇನ್ ಆಗ್ರಹಿಸಿದ್ದಾರೆ.

ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಮೇಲೆ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಮಾಡಿರುವ ಟ್ವೀಟ್‍ಗಳು ವಿಮರ್ಶೆಗಳೇ ಹೊರತು ನಿಂದನೆಗಳಲ್ಲ. ಪ್ರಜಾತಾಂತ್ರಿಕ ವ್ಯವಸ್ಥೆಯಲ್ಲಿ ರಚನಾತ್ಮಕ ವಿಮರ್ಶೆಗಳಿಂದ ನ್ಯಾಯಾಂಗ ವ್ಯವಸ್ಥೆಗೆ ಯಾವುದೇ ಪೆಟ್ಟಾಗುವುದಿಲ್ಲ. ಬದಲಾಗಿ ಗಟ್ಟಿಯಾಗುತ್ತದೆ ಎಂಬುದನ್ನು ಪರಿಗಣಿಸಿ. ಪ್ರಶಾಂತ್ ಭೂಷಣ್ ಅವರಿಗೆ ಶಿಕ್ಷೆ ವಿಧಿಸದೆ ನ್ಯಾಯಾಂಗ ನಿಂದನೆ ಪ್ರಕರಣವನ್ನು ಕೈಬಿಡಬೇಕೆಂದು ತಾಹೀರ್ ಹುಸೇನ್ ಒತ್ತಾಯಿಸಿದ್ದಾರೆ.

ತುರ್ತು ಪರಿಸ್ಥಿತಿ ಸೇರಿದಂತೆ ಹಲವು ಸಂದರ್ಭಗಳಲ್ಲಿ ಪ್ರಶಾಂತ್ ಭೂಷಣ್ ಸ್ವತಂತ್ರ ನ್ಯಾಯಾಂಗ ವ್ಯವಸ್ಥೆಯ ಪರಂಪರೆಯ ರಕ್ಷಣೆಗಾಗಿ ಹೋರಾಟ ನಡೆಸಿದವರು. ಅಣ್ಣಾ ಹಜಾರೆ ಜತೆಗೆ ಭ್ರಷ್ಟಾಚಾರ ವಿರೋಧಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದವರು. ತಮ್ಮ ವಕೀಲ ವೃತ್ತಿ ಜೀವನದ ಐದು ದಶಕಗಳ ಉದ್ದಕ್ಕೂ ಜನರ ಹಕ್ಕುಗಳ ರಕ್ಷಣೆಗಾಗಿ ಯಾವ ಪಕ್ಷದ ಸರಕಾರ ಅಧಿಕಾರದಲ್ಲಿದ್ದರೂ ಪ್ರಶ್ನಿಸುತ್ತಾ ಬಂದವರು ಎಂದು ಅವರು ಹೇಳಿದ್ದಾರೆ.

ನ್ಯಾಯಾಂಗದಲ್ಲಿ, ನ್ಯಾಯಾಧೀಶರಿಂದ ಲೋಪಗಳಾದಾಗಲೂ ಪ್ರಶ್ನಿಸಿದ್ದಾರೆ. ಇದು ಅವರು ಈ ದೇಶದ ಜನತೆ ಮತ್ತು ಪ್ರಜಾತಾಂತ್ರಿಕ-ಸಾಂವಿಧಾನಿಕ ಮೌಲ್ಯಗಳನ್ನು ರಕ್ಷಿಸಲು ಮಾಡಿದ ಸೇವೆಯಾಗಿದೆ ಎಂದು ತಾಹೀರ್ ಹುಸೇನ್ ತಿಳಿಸಿದ್ದಾರೆ.

ಈ ಹಿಂದೆ 8 ಮುಖ್ಯ ನ್ಯಾಯಾಧೀಶರ ಮೇಲೆ ಮಾಡಿದ ಟೀಕೆ ಮತ್ತು ಈಗ ಮುಖ್ಯ ನ್ಯಾಯಾಧೀಶರನ್ನೊಳಗೊಂಡು ಮಾಡಿರುವ ವಿಮರ್ಶೆಗಳು ಸಾಕ್ಷ್ಯಾಧಾರ ಸಮೇತವಾಗಿವೆ ಎಂಬುದು ಮೇಲ್ನೋಟಕ್ಕೆ ಸ್ಪಷ್ಟವಾಗಿವೆ. ಹಾಗಾಗಿ ಪ್ರಶಾಂತ್ ಭೂಷಣ್ ಎತ್ತಿರುವ ಪ್ರಶ್ನೆಗಳನ್ನು ಗಂಭೀರವಾಗಿ ಪರಿಗಣಿಸಿ ಸಂಬಂಧಿಸಿದವರನ್ನು ವಿಚಾರಣೆಗೆ ಒಳಪಡಿಸದೇ, ತಪ್ಪನ್ನು ಪ್ರಶ್ನಿಸಿದ ಪ್ರಶಾಂತ್ ಭೂಷಣ್ ಅವರನ್ನೇ ಶಿಕ್ಷೆಗೆ ಒಳಪಡಿಸಿರುವ ಸರ್ವೋಚ್ಚ ನ್ಯಾಯಾಲಯದ ಕ್ರಮ ದೇಶದ ಜನರಲ್ಲಿ ಆಶ್ಚರ್ಯ ಮೂಡಿಸಿದೆ ಮತ್ತು ನ್ಯಾಯಾಲಯದ ಮೇಲಿನ ವಿಶ್ವಾಸ ಕ್ಷೀಣಿಸುವಂತೆ ಮಾಡಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ನ್ಯಾಯಾಲಯದ ಈ ಕ್ರಮ ಮತ್ತು ಪ್ರಕರಣದ ವಿಚಾರಣೆಯಲ್ಲಿ ಪ್ರತಿವಾದಿಗೆ ನೇರವಾಗಿ ವಾದ ಮಂಡಿಸಲು ಅವಕಾಶ ನೀಡದೆ ಇರುವ ವಿಧಾನವನ್ನು ದೇಶದಾದ್ಯಂತ ಸಾವಿರಾರು ವಕೀಲರು, ನಿವೃತ್ತ ನ್ಯಾಯಾಧೀಶರು ಮತ್ತು ಕಾನೂನು ಪಂಡಿತರು ತೀವ್ರವಾಗಿ ಟೀಕಿಸಿದ್ದಾರೆ ಎಂದು ತಾಹೀರ್ ಹುಸೇನ್ ತಿಳಿಸಿದ್ದಾರೆ.

ಈ ಮೇಲಿನ ಎಲ್ಲ ಅಂಶಗಳನ್ನು ಸಮಗ್ರವಾಗಿ ಪರಿಗಣಿಸಿ ದೇಶದ ಸರ್ವೋಚ್ಚ ನ್ಯಾಯಾಲಯವು ಪ್ರಶಾಂತ್ ಭೂಷಣ್ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಕೈಬಿಟ್ಟು, ನಿಜವಾದ ನ್ಯಾಯವನ್ನು ಎತ್ತಿಹಿಡಿಯಬೇಕು. ಮತ್ತು ಆ ಮೂಲಕ ದೇಶದ ನಾಗರಿಕರಲ್ಲಿ ಸರ್ವೋಚ್ಚ ನ್ಯಾಯಾಲಯದ ಮೇಲಿನ ನಂಬಿಕೆಯನ್ನು ಗಟ್ಟಿಗೊಳಿಸಬೇಕು ಎಂದು ತಾಹೀರ್ ಹುಸೇನ್ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X