ಗಾಂಜಾ ಮಾರಾಟ ಆರೋಪ: ಓರ್ವನ ಬಂಧನ

ಬೆಂಗಳೂರು, ಆ.25: ಮಾದಕ ವಸ್ತು ಗಾಂಜಾ ಮಾರಾಟ ಆರೋಪದಡಿ ಓರ್ವನನ್ನು ಇಲ್ಲಿನ ರಾಮಮೂರ್ತಿ ನಗರ ಠಾಣಾ ಪೊಲೀಸರು, ಬಂಧಿಸಿದ್ದಾರೆ.
ಮೂಲತಃ ಆಂಧ್ರಪ್ರದೇಶದ ನಿವಾಸಿ ಎಸ್.ರಾಮಬಾಬು ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ನಗರದ ಕೆಆರ್ ಪುರಂ ರೈಲ್ವೆ ನಿಲ್ದಾಣದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Next Story





