Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುರಕ್ಷತಾ ಅಂತರ, ಮುಂಜಾಗ್ರತಾ...

ಸುರಕ್ಷತಾ ಅಂತರ, ಮುಂಜಾಗ್ರತಾ ಕ್ರಮಗಳೊಂದಿಗೆ ಮಲ್ಪೆ ಆಳಸಮುದ್ರ ಮೀನುಗಾರಿಕೆ ಪ್ರಾರಂಭ: ರಘುಪತಿ ಭಟ್

ವಾರ್ತಾಭಾರತಿವಾರ್ತಾಭಾರತಿ25 Aug 2020 8:53 PM IST
share

ಉಡುಪಿ, ಆ.25: ಸುರಕ್ಷತಾ ಅಂತರ, ಮಾಸ್ಕ್‌ನ ಕಡ್ಡಾಯ ಬಳಕೆ ಹಾಗೂ ಇತರ ಮುಂಜಾಗ್ರತಾ ಕ್ರಮಗಳೊಂದಿಗೆ ಮಲ್ಪೆ ಬಂದರಿನಲ್ಲಿ ಆಳಸಮುದ್ರ ಮೀನುಗಾರಿಕೆಯು ಪ್ರಾರಂಭಗೊಂಡಿದೆ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.

ಮಲ್ಪೆ ಮೀನುಗಾರಿಕಾ ಸಂಘದ ನೇತೃತ್ವದಲ್ಲಿ ಮೀನುಗಾರರ ವಿವಿಧ ಸಂಘಟನೆಯೊಂದಿಗೆ ಈ ಬಗ್ಗೆ ಚರ್ಚಿಸಿ ಆಳಸಮುದ್ರ ಮೀನುಗಾರಿಕೆ ಪ್ರಾರಂಭಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ ಎಂದು ಅವರು ಸುದ್ದಿಗಾರ ರೊಂದಿಗೆ ಮಾತನಾಡುತ್ತಾ ತಿಳಿಸಿದರು.

ಈಗಾಗಲೇ ಆಳಸಮುದ್ರ ಮೀನುಗಾರಿಕೆಯ ಬೋಟುಗಳು ಸಮುದ್ರಕ್ಕೆ ತೆರಳಿವೆ. ಮೀನುಗಾರಿಕೆಗಾಗಿ ಬಂದರಿನ ಬೇಸಿನ್‌ನ್ನು ಖಾಲಿ ಮಾಡಲಾ ಗಿದೆ. ಅಲ್ಲಿ 100 ಬೋಟುಗಳನ್ನು ನಿಲ್ಲಿಸಲು ವ್ಯವಸ್ಥೆ ಮಾಡಲಾಗಿದೆ. ಪ್ರತಿದಿನ 100 ಬೋಟುಗಳಿಗೆ ಮಾತ್ರ ಬಂದರಿಗೆ ಮರಳಿ ಮೀನು ಖಾಲಿ ಮಾಡಲು ಅವಕಾಶ ನೀಡಲಾಗುತ್ತದೆ ಎಂದರು.

ಮೀನು ಖಾಲಿ ಮಾಡುವ ವೇಳೆ ಸುರಕ್ಷತಾ ಅಂತರ ಕಾಪಾಡಲು ಕಟ್ಟುನಿಟ್ಟಾಗಿ ತಿಳಿಸಲಾಗಿದೆ. ಆದರೆ ಬಂದರಿನೊಳಗೆ ಮೀನು ಹರಾಜು ನಡೆಸಲು ಹಾಗೂ ಮಾರಾಟ ಮಾಡಲು ಅವಕಾಶವಿಲ್ಲ. ಅದನ್ನು ಹೊರಗೆ ಮಾಡಬೇಕಾಗುತ್ತದೆ ಎಂದು ಶಾಸಕರು ತಿಳಿಸಿದರು.

ಈ ಮೊದಲು ಮೀನಿನ ವಿತರಣೆಗೆ ಬೆಳಗ್ಗೆ ಮಾತ್ರ ಅವಕಾಶವಿದ್ದು, ಈಗ ಅದನ್ನು ದಿನವಿಡೀ ವಿಸ್ತರಿಸಲಾಗಿದೆ. ಇದಕ್ಕಾಗಿ ನೂಕುನುಗ್ಗಲು ಆಗದಂತೆ ಹಾಗೂ ಸುರಕ್ಷತಾ ಅಂತರಕ್ಕೆ ಸಮಸ್ಯೆಯಾಗದಂತೆ ಈ ಕ್ರಮಕೈಗೊಳ್ಳಲಾಗಿದೆ. ಇದರ ಜವಾಬ್ದಾರಿಯನ್ನು ಮಲ್ಪೆ ಮೀನುಗಾರರ ಸಂಘಕ್ಕೆ ವಹಿಸಿದ್ದೇವೆ. ಅವರು ಪಾಳಿಯಲ್ಲಿ ಈ ಕರ್ತವ್ಯ ನಿಭಾಯಿಸಲಿದ್ದಾರೆ ಎಂದರು.

ಬಂದರಿನೊಳಗೆ ಪಾರ್ಕ್ ಮಾಡಿರುವ ಎಲ್ಲಾ ಬೋಟುಗಳನ್ನು ಖಾಲಿ ಮಾಡಲು ತಿಳಿಸಲಾಗಿದೆ. ಬಂದರಿನ ಒಳಗೆ ಬೇಸಿನ್‌ನಲ್ಲಿ ಪಾರ್ಕಿಂಗ್‌ಗೆ ಅವಕಾಶವಿಲ್ಲ. ಬೋಟುಗಳು ಬಂದು ಮೀನು ಖಾಲಿ ಮಾಡಿ ತಕ್ಷಣ ನಿರ್ಗಮಿಸಲು, ಅನಂತರವೇ ಮತ್ತೊಂದು ಬೋಟು ಒಳಗೆ ಬರಲು ತಿಳಿಸಲಾಗಿದೆ.

ಬಂದರಿನಲ್ಲಿ ಸುರಕ್ಷಿತ ಅಂತರ, ಮಾಸ್ತ್, ಸ್ಯಾನಟೈಸರ್ ಕಡ್ಡಾಯ ಗೊಳಿಸಲಾಗಿದೆ. ಇದನ್ನು ಹೋಮ್‌ಗಾರ್ಡ್ಸ್ ಹಾಗೂ ಸಂಘದ ಸದಸ್ಯರು ನೋಡಿಕೊಳ್ಳಲಿದ್ದಾರೆ ಎಂದು ರಘುಪತಿ ಭಟ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X