ಅಣ್ಣಾಮಲೈ ಸೇರ್ಪಡೆ ಯುವ ಶಕ್ತಿಯ ಸಂಚಲನ: ಬಿಜೆಪಿ
ಉಡುಪಿ, ಆ.25: ಪ್ರಧಾನಿ ನರೇಂದ್ರ ಮೋದಿ ಕಾರ್ಯವೈಖರಿಯನ್ನು ಮೆಚ್ಚಿ ಕರ್ನಾಟಕದ ಅತ್ಯಂತ ದಕ್ಷ ಪ್ರಾಮಾಣಿಕ ಐಪಿಎಸ್ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ‘ಸಿಂಗಂ’ ಖ್ಯಾತಿಯ ಅಣ್ಣಾಮಲೈ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡಿರುವುದು ಪಕ್ಷದ ಯುವ ಶಕ್ತಿಯಲ್ಲಿ ಹೊಸ ಸಂಚಲನ ಮೂಡಿಸಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ತಿಳಿಸಿದೆ.
ಉಡುಪಿ ಜಿಲ್ಲೆಯ ಪೋಲಿಸ್ ವರಿಷ್ಠಾಧಿಕಾರಿಯಾಗಿ ಅಮೂಲ್ಯ ಸೇವೆ ಸಲ್ಲಿಸಿರುವ ಅಣ್ಣಾಮಲೈ, ಶಾಂತಿ ಸುವ್ಯವಸ್ಥೆಗೆ ಹೆಸರುವಾಸಿಯಾಗಿದ್ದರು. ಯುವ ಜನತೆಯ ಆಕರ್ಷಣೆಯ ಕೇಂದ್ರ ಬಿಂದು ಎಂದೆನಿಸಿಕೊಂಡಿರುವ ರಾಷ್ಟ್ರೀಯ ವಾದಿ ಅಣ್ಣಾಮಲೈ, ಐಪಿಎಸ್ ಹುದ್ದೆ ತೊರೆದು ಬಿಜೆಪಿ ಸೇರ್ಪಡೆಗೊಂಡಿರುವ ಬೆಳವಣಿಗೆ, ತಮಿಳುನಾಡು ರಾಜಕೀಯ ರಂಗದಲ್ಲಿ ಹೊಸ ಭಾಷ್ಯ ಬರೆಯಲಿದೆ. ಈ ಪ್ರಕ್ರಿಯೆ ಅಸಂಖ್ಯಾತ ದೇಶಭಕ್ತ ಯುವ ಕಾರ್ಯಕರ್ತರಿಗೆ ಚೈತನ್ಯ ತುಂಬಲಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ ಮತ್ತು ಜಿಲ್ಲಾ ಸಹವಕ್ತಾರ ಶಿವಕುಮಾರ್ ಅಂಬಲಪಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





