ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹುದ್ದೆಗೆ ಅರ್ಜಿ ಆಹ್ವಾನ
ಉಡುಪಿ, ಆ.25: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತುತ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಯಲ್ಲಿ ಸ್ತ್ರೀರೋಗ, ಅರೆವಳಿಕೆ ಮತ್ತು ಮಕ್ಕಳ ತಜ್ಞರು, ಎಲ್ಹೆಚ್ವಿ, ಡೆಂಟಲ್ ಹೈಜೆನಿಸ್ಟ್, ಆಡಿಯೋ ಮೆಟ್ರಿಕ್ ಆಸಿಸ್ಟೆಂಟ್, ಎಂಬಿಬಿಎಸ್ ವೈದ್ಯಾಧಿಕಾರಿಗಳು, ಆಯುಷ್ ವೈದ್ಯಾಧಿಕಾರಿಗಳು, ಶುಶ್ರೂಷಕಿ, ಕಿರಿಯ ಪುರುಷ ಆರೋಗ್ಯ ಸಹಾಯಕರು, ಕಿರಿಯ ಮಹಿಳಾ ಆರೋಗ್ಯ ಸಹಾಯಕರು ಹಾಗೂ ಶ್ರವಣ ದೋಷವುಳ್ಳ ಮಕ್ಕಳಿಗೆ ಬೋಧಕೇತರ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಆಗಸ್ಟ್ 31ರಂದು ಬೆಳಗ್ಗೆ 11ರಿಂದ 1ರವರೆಗೆ ಅಜ್ಜರಕಾಡಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ನೇರ ಸಂದರ್ಶನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Next Story