ಬೆಂಗಳೂರು ಹಿಂಸಾಚಾರ ಪ್ರಕರಣ: ಮಾಜಿ ಮೇಯರ್ ಸಂಬಂಧಿ ಅರುಣ್ ಕುಮಾರ್ ಗೆ ನ್ಯಾಯಾಂಗ ಬಂಧನ

ಬೆಂಗಳೂರು, ಆ.25: ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಮೇಯರ್ ಸಂಪತ್ ರಾಜ್ ಅವರ ಸಂಬಂಧಿ ಅರುಣ್ ಕುಮಾರ್ ನನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದ ಬಳಿಕ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು.
ಬಳಿಕ, ನ್ಯಾಯಾಲಯವು ಈತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಪೊಲೀಸರು ಅರುಣ್ ಕುಮಾರ್ ನನ್ನು ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರಕ್ಕೆ ಕರೆದೊಯ್ದರು.
Next Story





