Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಕ್ಟೋಬರ್ ನಿಂದ ಪದವಿ ತರಗತಿಗಳ ಆರಂಭ,...

ಅಕ್ಟೋಬರ್ ನಿಂದ ಪದವಿ ತರಗತಿಗಳ ಆರಂಭ, ಸೆಪ್ಟಂಬರ್ 1 ರಿಂದಲೇ ಆನ್‍ಲೈನ್ ಪಾಠ: ಡಿಸಿಎಂ ಅಶ್ವತ್ಥ ನಾರಾಯಣ

ವಾರ್ತಾಭಾರತಿವಾರ್ತಾಭಾರತಿ26 Aug 2020 5:03 PM IST
share
ಅಕ್ಟೋಬರ್ ನಿಂದ ಪದವಿ ತರಗತಿಗಳ ಆರಂಭ, ಸೆಪ್ಟಂಬರ್ 1 ರಿಂದಲೇ ಆನ್‍ಲೈನ್ ಪಾಠ: ಡಿಸಿಎಂ ಅಶ್ವತ್ಥ ನಾರಾಯಣ

ಬೆಂಗಳೂರು, ಆ.26: ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್ ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದ್ದು, ಅಕ್ಟೋಬರ್ ನಿಂದ ನೇರ(ಆಫ್‍ಲೈನ್) ತರಗತಿಗಳು ಶುರುವಾಗಲಿವೆ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಬೆಂಗಳೂರಿನ ಸುಬ್ರಹ್ಮಣ್ಯ ನಗರದ ವಾರ್ಡ್ ಸಂಖ್ಯೆ 66ರಲ್ಲಿ ಬುಧವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇಂದ್ರ ಸರಕಾರದಿಂದ ನೇರವಾಗಿ ತರಗತಿಗಳನ್ನು ಆರಂಭ ಮಾಡುವುದರ ಬಗ್ಗೆ ಮಾರ್ಗಸೂಚಿ ಬರಬೇಕಿದೆ. ಸೆಪ್ಟೆಂಬರ್ ತಿಂಗಳಲ್ಲಿ ಕೆಲ ಪದವಿ ಪರೀಕ್ಷೆಗಳು ನಡೆಯಲಿವೆ. ಹೀಗಾಗಿ ಸರಕಾರವು ಮುಂದಿನ ತಿಂಗಳಿಂದ ಆನ್‍ಲೈನ್ ಮೂಲಕವೇ ಎಲ್ಲ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರ್ಣ ಪ್ರಮಾಣದಲ್ಲಿ ಚಾಲನೆ ನೀಡಲು ನಿರ್ಧರಿಸಿದೆ. ಜತೆಗೆ, ಅಕ್ಟೋಬರ್ ತಿಂಗಳಿಂದಲೇ ಎಲ್ಲ ಕಾಲೇಜುಗಳನ್ನು ಆರಂಭಿಸಲಾಗುವುದು. ವಿದ್ಯಾರ್ಥಿಗಳು ಕೂಡ ತರಗತಿಗಳಿಗೆ ಹಾಜರಾಗಬೇಕಾಗುತ್ತದೆ ಎಂದರು.

ತರಗತಿಗಳನ್ನು ಆರಂಭಿಸುವ ಬಗ್ಗೆ ಈಗಾಗಲೇ ಯುಜಿಸಿ ಮಾರ್ಗಸೂಚಿಯಂತೆ ರಾಜ್ಯ ಸರಕಾರ ಎಲ್ಲ ರೀತಿಯ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕೇಂದ್ರ ಸರಕಾರದ ಆದೇಶ ಬರುತ್ತಿದ್ದಂತೆಯೇ ಈ ನಿಟ್ಟಿನಲ್ಲಿ ರಾಜ್ಯವು ಕಾರ್ಯೋನ್ಮುಖವಾಗಲಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಅಂತಿಮ ವರ್ಷದ ಪರೀಕ್ಷೆ: ಶೈಕ್ಷಣಿಕ ವರ್ಷದ ಆರಂಭದ ಜತೆಯಲ್ಲಿಯೇ ಅಂತಿಮ ವರ್ಷದಲ್ಲಿರುವ ಎಲ್ಲ ಪದವಿ, ಡಿಪ್ಲೋಮಾ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಜತೆಗೆ, ಬ್ಯಾಕ್‍ಲಾಗ್ ಉಳಿಸಿಕೊಂಡಿರುವ ವಿದ್ಯಾರ್ಥಿಗಳಿಗೂ ಪರೀಕ್ಷೆ ನಡೆಸಲಾಗುವುದು. ಯಾವುದೇ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ಉಂಟಾಗಬಾರದು ಎಂಬ ಕಾರಣಕ್ಕೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಡಿಸಿಎಂ ಹೇಳಿದರು.

ನೀಟ್ ಪರೀಕ್ಷೆಗೆ ಅಡ್ಡಿ ಬೇಡ: ಸರಕಾರವು ರಾಜ್ಯದಲ್ಲಿ 1.94 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಯಶಸ್ವಿಯಾಗಿ ಸಿಇಟಿ ಪರೀಕ್ಷೆ ಬರೆದಿದೆ. ಅದರಲ್ಲೂ 63 ಮಂದಿ ಕೋವಿಡ್ ಪಾಸಿಟಿವ್ ವಿದ್ಯಾರ್ಥಿಗಳು ಕೂಡ ಆತ್ಮಸ್ಥೈರ್ಯದಿಂದ ಪರೀಕ್ಷೆ ಬರೆದು ಉತ್ತಮ ರ‍್ಯಾಂಕ್ ಪಡೆದಿದ್ದಾರೆ. ವಾಸ್ತವ ಹೀಗಿರಬೇಕಾದರೆ ಕೆಲವರು ನೀಟ್ ಪರೀಕ್ಷೆ ಯಾಕೆ ಬೇಡ ಅನ್ನುತ್ತಿದ್ದಾರೋ ಗೊತ್ತಿಲ್ಲ ಎಂದರು.

ಯಾರೂ ಕೂಡ ಮಕ್ಕಳ ಭವಿಷ್ಯದ ಜತೆ ಚೆಲ್ಲಾಟ ಆಡಬಾರದು. ಇದರ ಹಿಂದೆ ಏನೋ ಹುನ್ನಾರ ಇದ್ದಹಾಗಿದೆ, ಮೆರಿಟ್ ಮೂಲಕ ಸೀಟು ಸಿಗಬಾರದು, ವ್ಯವಸ್ಥಿತವಾಗಿ ಸೀಟು ಹಂಚಿಕೆಯಾಗಬಾರದು ದುರುದ್ದೇಶ ಇದ್ದಂತೆ ಕಾಣುತ್ತಿದೆ. ಯಾವುದೊ ಕಾಣದ ಕೈಗಳು ಇದರ ಹಿಂದಿವೆ. ಕೆಲ ಪಟ್ಟಭದ್ರ ಹಿತಾಸಕ್ತಿಗಳು ಮೊದಲಿನಿಂದಲೂ ನೀಟ್ ಪರೀಕ್ಷೆಗೆ ಅಡ್ಡಿಪಡಿಸಲು ಯತ್ನಿಸುತ್ತಲೇ ಇವೆ.

ಇದರ ಹಿಂದೆ ದೊಡ್ಡ ಜಾಲವೇ ಇದೆ. ಹಲವಾರು ವರ್ಷಗಳಿಂದ ಈ ದುಷ್ಟ ಪ್ರಯತ್ನಗಳನ್ನು ಮಾಡುತ್ತಾ ಬರಲಾಗುತ್ತಿದೆ. ಆದರೆ, ಆವರ ಉದ್ದೇಶ ಈಡೇರುತ್ತಿಲ್ಲ. ಹಾಗೆ ನೋಡಿದರೆ, ನೀಟ್ ಪರೀಕ್ಷೆ ಅತ್ಯುತ್ತಮವಾಗಿದೆ. ಒಂದು ಪರೀಕ್ಷೆ ಮೂಲಕ ದೇಶ ವಿವಿಧೆಡೆ ಪ್ರವೇಶಾತಿ ಪಡೆಯುವ ಪದ್ಧತಿ ಇದಾಗಿದೆ. ಈ ಪರೀಕ್ಷೆ ಆಗಲೇಬೇಕಿದೆ ಎಂದು ಅಶ್ವತ್ಥನಾರಾಯಣ ಪ್ರತಿಪಾದಿಸಿದರು.

ನೀಟ್ ವಿರೋಧ ಮಾಡುತ್ತಿರುವವರಿಗೆ ಖಂಡಿತವಾಗಿಯೂ ದುರುದ್ದೇಶವಿದೆ. ಆದರೆ ರಾಜ್ಯ ಸರಕಾರ ಈ ಪರೀಕ್ಷೆಗೆ ಬೇಕಾದ ಎಲ್ಲ ಸಹಕಾರ ನೀಡುತ್ತದೆ ಹಾಗೂ ನಾವೂ ಪರೀಕ್ಷೆಗೆ ಸನ್ನದ್ಧರಾಗಿದ್ದೇವೆ ಎಂದು ಅವರು ಸ್ಪಷ್ಟವಾಗಿ ಹೇಳಿದರು. ಬಿಬಿಎಂಪಿ ಸದಸ್ಯ ಮಂಜುನಾಥ್ ಸೇರಿದಂತೆ ಪಾಲಿಕೆಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X