ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ನೇಮಕಾತಿ ಪ್ರಕಟ
ಮಂಗಳೂರು, ಆ.26: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ತಾತ್ಕಾಲಿಕ ನೇಮಕಾತಿ ಆಯ್ಕೆ ಪಟ್ಟಿ ಪ್ರಕ್ರಿಯೆಯಲ್ಲಿ ಖಾಲಿ ಇರುವ 2 ಅಂಗನವಾಡಿ ಕಾರ್ಯಕರ್ತೆ ಹಾಗೂ 13 ಸಹಾಯಕಿಯರ ಆಯ್ಕೆ ಸಂಬಂಧ ನೇಮಕಾತಿ ಪ್ರಕ್ರಿಯೆ ನಡೆಸಲಾಗಿದೆ.
ಅದರಂತೆ 1 ಅಂಗನವಾಡಿ ಕಾರ್ಯಕರ್ತೆ ಹಾಗೂ 8 ಮಂದಿ ಸಹಾಯಕಿಯರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಲಾಗಿದೆ. ಸದರಿ ತಾತ್ಕಾಲಿಕ ನೇಮಕಾತಿ ಪಟ್ಟಿಯನ್ನು ದ.ಕ. ಜಿಪಂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು (ಗ್ರಾ) ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಈ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸೆ.2ರಂದು ಸಂಜೆ 5:30ರೊಳಗೆ ದ.ಕ.ಜಿಪಂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಕಚೇರಿಗೆ ಸಲ್ಲಿಸಬೇಕು. ನಿಗದಿತ ದಿನಾಂಕದ ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ಮಾಹಿತಿಗಾಗಿ ದೂ.ಸಂ: 0824 2263199 ಸಂಪರ್ಕಿಸಲು ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿಯ ಪ್ರಕಟನೆ ತಿಳಿಸಿದೆ.
Next Story