Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೇಕೆದಾಟು ಯೋಜನೆ ತ್ವರಿತ ಜಾರಿಗೆ ಕ್ರಮ:...

ಮೇಕೆದಾಟು ಯೋಜನೆ ತ್ವರಿತ ಜಾರಿಗೆ ಕ್ರಮ: ಡಿಸಿಎಂ ಅಶ್ವತ್ಥ ನಾರಾಯಣ

ವಾರ್ತಾಭಾರತಿವಾರ್ತಾಭಾರತಿ26 Aug 2020 10:24 PM IST
share
ಮೇಕೆದಾಟು ಯೋಜನೆ ತ್ವರಿತ ಜಾರಿಗೆ ಕ್ರಮ: ಡಿಸಿಎಂ ಅಶ್ವತ್ಥ ನಾರಾಯಣ

ಬೆಂಗಳೂರು, ಆ.26: ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಬಳಿ ಸಮತೋಲನ/ ಶೇಖರಣಾ ಜಲಾಶಯ ನಿರ್ಮಿಸಲು ರಾಜ್ಯ ಸರಕಾರ ಬದ್ಧವಾಗಿದ್ದು, ಈ ಸಂಬಂಧ ಕೇಂದ್ರ ಸರಕಾರದ ಜತೆ ತ್ವರಿತವಾಗಿ ಮಾತುಕತೆ ನಡೆಸಲಾಗುವುದು ಎಂದು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಬುಧವಾರ ನಗರದಲ್ಲಿ ಮೇಕೆದಾಟು ಯೋಜನೆ ಜಾರಿ ಸಂಬಂಧ ಎದುರಾಗಿರುವ ಸಮಸ್ಯೆಗಳ ಕುರಿತು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಜತೆ ಸಭೆ ನಡೆಸಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಮುಂದಿನ ದಿನಗಳಲ್ಲಿ ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಕೊರತೆ ಎದುರಾಗಬಾರದು ಎನ್ನುವ ಪ್ರಮುಖ ಉದ್ದೇಶವೂ ಈ ಯೋಜನೆ ಹಿಂದೆ ಇದೆ. ಈ ವಿಷಯವನ್ನು ಕೇಂದ್ರ ಜಲಶಕ್ತಿ ಸಚಿವಾಲಯ ಮತ್ತು ಕೇಂದ್ರ ಜಲ ಆಯೋಗಕ್ಕೂ ಮನವರಿಕೆ ಮಾಡಿಕೊಡಲಾಗುವುದು. ಈ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಈಗಾಗಲೇ ಎರಡು ಬಾರಿ ಕೇಂದ್ರ ಸಚಿವರ ಜತೆಗೂ ಮಾತುಕತೆ ನಡೆಸಿದ್ದು, ಆದಷ್ಟು ಬೇಗ ಒಪ್ಪಿಗೆ ಸಿಗುವ ವಿಶ್ವಾಸ ಇದೆ ಎಂದು ಅವರು ಹೇಳಿದರು.

ಸಮಗ್ರ ಯೋಜನಾ ವರದಿಯ ಪರಿಶೀಲನೆ ಕೇಂದ್ರ ಜಲ ಆಯೋಗದ ಮುಂದೆ ಇದೆ. ಅದನ್ನು ತ್ವರಿತವಾಗಿ ಮಾಡಿ ಮುಗಿಸುವಂತೆಯೂ ಆಯೋಗವನ್ನು ಕೋರಲಾಗುವುದು. ಹಾಗೆಯೇ ಅರಣ್ಯ ಮತ್ತು ಪರಿಸರ ಸಚಿವಾಲಯದ ಒಪ್ಪಿಗೆ ಕೂಡ ಬೇಕಿದ್ದು ಎಲ್ಲವನ್ನೂ ತ್ವರಿತವಾಗಿ ಪಡೆಯಲು ಪ್ರಯತ್ನಿಸಲಾಗುವುದು ಎಂದು ಅವರು ತಿಳಿಸಿದರು.

ಸುಪ್ರೀಂಕೋರ್ಟ್ ಆದೇಶದ ಪ್ರಕಾರ ತಮಿಳುನಾಡಿಗೆ ನೀರು ಬಿಡುವುದಕ್ಕೂ ಇದು ಹೆಚ್ಚು ಅನುಕೂಲ. ಹಾಗೆಯೇ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಬಹುದು. ಒಟ್ಟಾರೆ ಈ ಯೋಜನೆಗೆ ಒಂಬತ್ತು ಸಾವಿರ ಕೋಟಿ ರೂ.ಖರ್ಚಾಗುವ ಅಂದಾಜು ಮಾಡಿದ್ದು, ಕಾವೇರಿ ಅಚ್ಚುಕಟ್ಟು ಪ್ರದೇಶದ ರಾಜ್ಯಗಳಿಗೂ ಹೆಚ್ಚು ಅನುಕೂಲ ಆಗಲಿದೆ ಎಂದು ಅಶ್ವತ್ಥ ನಾರಾಯಣ ಹೇಳಿದರು.

ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶ ಜಯಪ್ರಕಾಶ್ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X