Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೃಷಿ ಸೇರಿದಂತೆ ಎಲ್ಲ ಕ್ಷೇತ್ರಗಳಿಗೂ...

ಕೃಷಿ ಸೇರಿದಂತೆ ಎಲ್ಲ ಕ್ಷೇತ್ರಗಳಿಗೂ ತಂತ್ರಜ್ಞಾನ ವಿಸ್ತರಣೆ: ಡಿಸಿಎಂ ಅಶ್ವತ್ಥ ನಾರಾಯಣ

ವಾರ್ತಾಭಾರತಿವಾರ್ತಾಭಾರತಿ26 Aug 2020 10:59 PM IST
share
ಕೃಷಿ ಸೇರಿದಂತೆ ಎಲ್ಲ ಕ್ಷೇತ್ರಗಳಿಗೂ ತಂತ್ರಜ್ಞಾನ ವಿಸ್ತರಣೆ: ಡಿಸಿಎಂ ಅಶ್ವತ್ಥ ನಾರಾಯಣ

ಬೆಂಗಳೂರು, ಆ.26: ರಾಜ್ಯದ ಅಭಿವೃದ್ಧಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವ ತಂತ್ರಜ್ಞಾನವನ್ನು ಕೃಷಿ ಸೇರಿದಂತೆ ಎಲ್ಲ ಕ್ಷೇತ್ರಗಳಿಗೂ ವಿಸ್ತರಿಸಲು ಸರಕಾರ ಸ್ಪಷ್ಟ ಗುರಿಯೊಂದಿಗೆ ಸಾಗುತ್ತಿದೆ ಎಂದು ಐಟಿ-ಬಿಟಿ ಮತ್ತು ತಂತ್ರಜ್ಞಾನ ಖಾತೆ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ಬೆಂಗಳೂರು ಟೆಕ್ ಸಮಿಟ್(ಬಿಟಿಎಸ್) ಸಂಬಂಧಿಸಿದಂತೆ ಅಂತರ್‍ರಾಷ್ಟ್ರೀಯ ಪ್ರತಿನಿಧಿಗಳ ಜತೆ ವರ್ಚುವಲ್ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೋವಿಡ್-19 ಸಂಕಷ್ಟ ಕಾಲದಲ್ಲಿ ದೇಶದ 130 ಕೋಟಿ ಜನರನ್ನು ಕೆಲವೇ ಸೆಕೆಂಡುಗಳಲ್ಲಿ ಕೇಂದ್ರ, ರಾಜ್ಯ ಸರಕಾರಗಳು ತಲುಪಿದವು. ಅರ್ಹ ಫಲಾನುಭವಿಗಳ ಖಾತೆಗಳಿಗೆ ನೇರವಾಗಿ ಹಣ ಜಮೆ ಆಯಿತು. ಎಲ್ಲವೂ ವೇಗವಾಗಿ, ಪಾರದರ್ಶಕವಾಗಿ ನಡೆಯಿತು. ಕಳೆದ ಎರಡು ದಿನಗಳ ಹಿಂದೆ ಆದಾಯ ತೆರಿಗೆ ಇಲಾಖೆಯಲ್ಲಿ ಫೇಸ್ ಲೆಸ್ ತಪಾಸಣೆಗೂ ಚಾಲನೆ ನೀಡಲಾಗಿದೆ. ತಂತ್ರಜ್ಞಾನದ ಶಕ್ತಿ ಏನೆಂಬುದು ಇದರಿಂದ ನಮಗೆ ವೇದ್ಯವಾಗುತ್ತದೆ ಎಂದು ಅವರು ಪ್ರತಿಪಾದಿಸಿದರು.

ತಂತ್ರಜ್ಞಾನ ಕ್ಷೇತ್ರದಲ್ಲಿ ನಮ್ಮ ರಾಜ್ಯವೂ ಮುಂಚೂಣಿಯಲ್ಲಿದೆ. ಅದು ಮತ್ತಷ್ಟು ಗಟ್ಟಿಯಾಗಬೇಕಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಟೆಕ್ ಸಮಿಟ್ ದೊಡ್ಡ ಕಾಣಿಕೆ ನೀಡಬೇಕು ಎಂಬುದು ಸರಕಾರದ ಅಭಿಲಾಶೆ. ನವೆಂಬರ್ 19ರಿಂದ 21ರವರೆಗೆ ಬಿಟಿಎಸ್ ನಡೆಸಲು ತೀರ್ಮಾನಿಸಿದ್ದು ರೂಪುರೇಷೆ ಬಗ್ಗೆ ಚರ್ಚಿಸಲಾಗುವುದು ಎಂದರು.

ಈಗಾಗಲೇ 220 ಶತಕೋಟಿ ಡಾಲರ್ ಜಿಡಿಪಿಯನ್ನು ಹೊಂದಿರುವ ರಾಜ್ಯವು, 500 ಶತಕೋಟಿ ಡಾಲರ್ ಜಿಡಿಪಿಯತ್ತ ಮುನ್ನಡೆಯುತ್ತಿದೆ. ಈ ನಿಟ್ಟಿನಲ್ಲಿ ತಂತ್ರಜ್ಞಾನ ಕ್ಷೇತ್ರದ ಕೊಡುಗೆ ಬಹಳ ಮಹತ್ವದ್ದು ಎಂದು ಡಾ. ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ತಂತ್ರಜ್ಞಾನಾಧಾರಿತ ಸುಧಾರಣೆ: ರಾಜ್ಯದಲ್ಲಿ ತಂತ್ರಜ್ಞಾನಾಧಾರಿತ ಸುಧಾರಣೆಗಳನ್ನು ತರುವುದು ಇವತ್ತಿನ ಅಗತ್ಯವಾಗಿದೆ. ಕರ್ನಾಟಕವೂ ಅದರಲ್ಲಿ ಮುಂಚೂಣಿಯಲ್ಲಿದೆ. ಕರ್ನಾಟಕವು ತಂತ್ರಜ್ಞಾನದ ಸಮೃದ್ಧ ನೆಲವಾಗಿರುವ ಕಾರಣ ಈ ಗುರಿಯನ್ನು ಸಾಧಿಸುವುದು ಸುಲಭವೆಂದು ನನ್ನ ಭಾವನೆ ಎಂದ ಡಿಸಿಎಂ, ರಾಜ್ಯದ ಪ್ರತಿಮೂಲೆಯನ್ನು ತಂತ್ರಜ್ಞಾನ ತಲುಪಬೇಕು ಎಂದು ಕರೆ ನೀಡಿದರು.

ಟೆಕ್ನಾಲಜಿ ಎಂಬುದು ಇಂದು ಕೇವಲ ನಗರಕ್ಕೆ ಮಾತ್ರ ಸೀಮಿತವಾಗಿಲ್ಲ. ಪ್ರತಿ ಹಳ್ಳಿಯ ಮೂಲೆ ಮೂಲೆಗೂ ಅದು ತಲುಪಬೇಕಿದೆ. ಮುಖ್ಯವಾಗಿ ಕೃಷಿ, ಸೇವಾ ವಲಯ ಕೇತ್ರಗಳಲ್ಲಿ ತಂತ್ರಜ್ಞಾನವೂ ದೊಡ್ಡ ಅದ್ಭುತಗಳನ್ನೇ ಸೃಷ್ಟಿ ಮಾಡುತ್ತಿದೆ. ಭವಿಷ್ಯದಲ್ಲಿಯೂ ಇದನ್ನೇ ಅತ್ಯಂತ ಪ್ರಮುಖ ವಿಷಯವಾಗಿ ಸರಕಾರವೂ ಆದ್ಯತೆಯ ಮೇರೆಗೆ ಕೆಲಸ ಮಾಡಲಿದೆ. ಈ ನಿಟ್ಟಿನಲ್ಲಿ ರಾಜ್ಯದ ತಂತ್ರಜ್ಞಾನ ದಿಗ್ಗಜರೆಲ್ಲ ಸರಕಾರಕ್ಕೆ ಹೆಗಲು ಕೊಡಬೇಕಿದೆ ಎಂದು ಉಪ ಮುಖ್ಯಮಂತ್ರಿ ವಿನಂತಿ ಮಾಡಿದರು.

ಸ್ಪಷ್ಟ ಗುರಿ, ಕರಾರುವಾಕ್ಕಾದ ಕಾರ್ಯಕ್ರಮ: ನಮ್ಮ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾಗಿದೆ. ಈಗಾಗಲೇ ತಂತ್ರಜ್ಞಾನ ಕ್ಷೇತ್ರಕ್ಕೆ ಪೂರಕವಾದ ಅನೇಕ ಸುಧಾರಣೆ ಕ್ರಮಗಳನ್ನು ಅನುಷ್ಠಾನಕ್ಕೆ ತರಲಾಗಿದೆ. ಜತೆಗೆ, ಕೈಗಾರಿಕೆ-ವಾಣಿಜ್ಯ ಕ್ಷೇತ್ರಗಳ ಬೆಳವಣಿಗೆಗೆ ಶಕ್ತಿ ತುಂಬುವ ಅನೇಕ ಮಹತ್ವದ ಸುಧಾರಣಾ ಕ್ರಮಗಳನ್ನು ಸರಕಾರ ಕೈಗೊಂಡಿದೆ. ಇದರಲ್ಲಿ ಭೂ ಸುಧಾರಣಾ ಕಾಯ್ದೆ ತುಂಬಾ ಪ್ರಮುಖವಾದದ್ದು. ಸರಕಾರವು ಸ್ಪಷ್ಟ ಗುರಿಯೊಂದಿಗೆ ಕರಾರುವಾಕ್ಕಾದ ದೀರ್ಘಕಾಲೀನ ಪ್ರಭಾವ ಬೀರುವ ಯೋಜನೆಗಳನ್ನು ರೂಪಿಸುತ್ತಿದೆ ಎಂದು ಉಪ ಮುಖ್ಯಮಂತ್ರಿಗಳು ಹೇಳಿದರು.

ಬಿಟಿ ಸ್ಟಾರ್ಟ್ ಅಪ್ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ, ಐಟಿ ಸ್ಟಾರ್ಟ್ ಅಪ್ ಅಧ್ಯಕ್ಷ ಕ್ರಿಸ್ ಗೋಪಾಲಕೃಷ್ಣ, ಸ್ಟಾರ್ಟ್ ಅಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್, ಐಟಿಬಿಟಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಬೆಂಗಳೂರು ಟೆಕ್ ಸಮಿಟ್ ಸಿಇಒ ಪಿ.ವಿ. ಮೋಹನ್ ರಾಮ್, ಐಟಿ-ಬಿಟಿ ಇಲಾಖೆ ನಿರ್ದೇಶಕಿ ಮೀನಾ ನಾಗರಾಜ್ ಮುಂತಾದವರು ಈ ವರ್ಚುವಲ್ ಸಂವಾದದಲ್ಲಿ ಭಾಗಿಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X