ನೀಟ್, ಜೆಇಇ ಪರೀಕ್ಷೆ ಮುಂದೂಡಲು ಆಗ್ರಹ: ಸುಪ್ರೀಂ ಕೋರ್ಟ್ ಮೆಟ್ಟಿಲೇರಲಿರುವ 7 ರಾಜ್ಯಗಳ ಸಿಎಂಗಳು

ಹೊಸದಿಲ್ಲಿ: ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ಮುಂದೂಡಬೇಕು ಎನ್ನುವ ಆಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಿರುವ 7 ರಾಜ್ಯಗಳ ಮುಖ್ಯಮಂತ್ರಿಗಳು ಒಟ್ಟಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.
ಕೊರೋನ ವೈರಸ್ ಬಿಕ್ಕಟ್ಟಿನ ನಡುವೆ ಈ ಎರಡು ಪರೀಕ್ಷೆಗಳನ್ನು ನಡೆಸುವ ನಿರ್ಧಾರದ ವಿರುದ್ಧ ಡಿಎಂಕೆ ಮತ್ತು ಆಮ್ ಆದ್ಮಿ ಪಕ್ಷವೂ ಧ್ವನಿಯೆತ್ತಿದೆ.
ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಏಳು ಮಂದಿ ಬಿಜೆಪಿ ಆಡಳಿತವಿಲ್ಲದ ರಾಜ್ಯಗಳ ಮುಖ್ಯಮಂತ್ರಿಗಳು ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸರ್ವಾನುಮತದಿಂದ ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.
Next Story





