ಅ.30: ಮಂಜುನಾಥ ಉದ್ಯಾವರ ನೆನಪಲ್ಲಿ ರಕ್ತದಾನ ಶಿಬಿರ, ವೈದ್ಯಕೀಯ ನೆರವು
ಉದ್ಯಾವರ, ಆ.27: ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೇವಾ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ಮಂಜುನಾಥ ಉದ್ಯಾವರ ಅವರ 8ನೇ ವರ್ಷದ ಸಂಸ್ಮರಣೆಯ ಅಂಗವಾಗಿ ಆ.30ರ ರವಿವಾರ ಬೆಳಗ್ಗೆ 9 ರಿಂದ ಅಪರಾಹ್ನ 1 ರವರೆಗೆ ಉಡುಪಿ ಜಿಲ್ಲಾಸ್ಪತ್ರೆಯ ಸಹಯೋಗದೊಂದಿಗೆ ’ರಕ್ತದಾನ ಶಿಬಿರ’ ಉದ್ಯಾವರ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಲಿದೆ.
ಬೆಳಗ್ಗೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅರ್ಹ ಗ್ರಾಮಸ್ಥರಿಗೆ ಮಂಜುನಾಥ ಉದ್ಯಾವರ ನೆನಪಿನ ವೈದ್ಯಕೀಯ ನೆರವು ವಿತರಿಸಲಿರುವರು.
ಅತಿಥಿಗಳಾಗಿ ಮಾಜಿ ತಾಲೂಕು ಪಂಚಾಯತ್ ಸದಸ್ಯ ಗಿರೀಶ್ ಕುಮಾರ್ ಭಾಗವಹಿಸುವರು ಎಂದು ಸಂಸ್ಥೆಯ ಅಧ್ಯಕ್ಷ ತಿಲಕ್‌ರಾಜ್ ಸಾಲ್ಯಾನ್ ತಿಳಿಸಿದ್ದಾರೆ.
Next Story





